ಸೆ.8ರಂದು ನರೇಗಾ ಮಾಹಿತಿ ಸಭೆ
ಉಡುಪಿ, ಸೆ.6: ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರಿಗೆ ನರೇಗಾ ಯೋಜನೆ ಬಗ್ಗೆ ಮಾಹಿತಿ ನೀಡಲು ಸೆ.8ರಂದು ಬೆಳಗ್ಗೆ 10ಗಂಟೆಗೆ ಹಾಗೂ ಮಧ್ಯಾಹ್ನ 3ಗಂಟೆಗೆ ಉಪ್ಪುಂದ ಕಾಸನಾಡಿ ದೈವಸ್ಥಾನ ವಠಾರದಲ್ಲಿ ಸಭೆ ಕರೆಯಲಾಗಿದೆ ಎಂದು ಎಐಎಡಬ್ಲುಯು ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





