ಗಾಂಜಾ ಮಾರಾಟ: ಓರ್ವನ ಬಂಧನ
ಉಡುಪಿ, ಸೆ.6: ಕೆಳಾರ್ಕಳಬೆಟ್ಟು ಗ್ರಾಮದ ನೇಜಾರು ಮಸೀದಿಯ ಎದುರು ಸೆ.5ರಂದು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ.
ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ಅರ್ಫನ್ (27)ಬಂಧಿತ ಆರೋಪಿ. ಬಂಧಿತನಿಂದ 20 ಸಾವಿರ ರೂ. ಮೌಲ್ಯದ ಒಂದು ಕೆ.ಜಿ. 048 ಗ್ರಾಂ ತೂಕದ ಗಾಂಜಾ, ಕೃತ್ಯಕ್ಕೆ ಬಳಸಿದ 30 ಸಾವಿರ ರೂ. ಮೌಲ್ಯದ ದ್ವಿಚಕ್ರ ವಾಹನ ಮತ್ತು ಐದು ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್‌ನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ.
ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





