Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದ...

ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಪರೇಡ್

ಮತ್ತೆ ದಂಧೆ ಮುಂದುವರಿಸಿದರೆ ಗೂಂಡಾ ಕಾಯ್ದೆ: ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ7 Sept 2020 3:30 PM IST
share
ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಪರೇಡ್

ಮಂಗಳೂರು, ಸೆ.7: ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕಾರ್ಯಾಚರಣೆಯನ್ನು ಬಿಗಿಗೊಳಿಸಲಾಗಿದೆ. ಈಗಾಗಲೇ ಒಂದಕ್ಕಿಂತ ಹೆಚ್ಚು ಡ್ರಗ್ಸ್ ಸಾಗಾಟ, ಮಾರಾಟ, ಪೂರೈಕೆ ಪ್ರಕರಣಗಳಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿರುವ ಆರೋಪಿಗಳಿಗೆ ಎಚ್ಚರಿಕೆ ನೀಡುವ ಕೆಲಸ ಮಾಡಲಾಗಿದೆ. ಮತ್ತೆ ದಂಧೆ ಮುಂದುವರಿಸಿದರೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಹಾಗೂ ಗಡೀಪಾರು ಮಾಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ವ್ಯಸನ ಪ್ರಕರಣಗಳಲ್ಲಿ ಶಾಮೀಲಾದ ಆರೋಪಿಗಳ ಪರೇಡ್ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡುತ್ತಿದ್ದರು.

ಯುವಜನತೆಯನ್ನು ಈ ಪಿಡುಗಿನಿಂದ ಹೊರತಂದು ಅವರಿಗೆ ಉಜ್ವಲವಾದ ಭವಿಷ್ಯವನ್ನು ನೀಡುವುದು ನಮ್ಮ ಉದ್ದೇಶ. ಡ್ರಗ್ಸ್ ಮಾಫಿಯಾದ ವಿರುದ್ಧ ಪೊಲೀಸ್ ಇಲಾಖೆ ಹಿಂದಿನಿಂದಲೂ ಕಾರ್ಯಾಚರಿಸುತ್ತಿದೆ. ಇದೀಗ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಇದರ ಭಾಗವಾಗಿ ಈಗಾಗಲೇ ವಿವಿಧ ರೀತಿಯ ಪ್ರಕರಣಗಳಲ್ಲಿ ಸಿಕ್ಕಿ ಬಿದ್ದಿರುವ ಆರೋಪಿಗಳನ್ನು ಕರೆಸಿ ಅವರಿಗೆ ಎಚ್ಚರಿಕೆ ಹಾಗೂ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಹೊರ ರಾಜ್ಯಗಳಾದ ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕೇರಳ, ಗೋವಾ ಮೊದಲಾದ ಕಡೆಗಳಿಂದ ಮಂಗಳೂರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದೆ. ವಿದೇಶಗಳಿಂದಲೂ ಇಲ್ಲಿಗೆ ರವಾನೆಯಾಗುತ್ತಿದೆ ಎಂಬುದನ್ನು ಅಲ್ಲಗಳೆಯಲಾಗದು. ಇತರ ಪ್ರಕರಣಗಳಂತೆ ಡ್ರಗ್ಸ್ ಮಾಫಿಯಾದಲ್ಲಿ ಆರೋಪಿಗಳನ್ನು ಪತ್ತೆಹಚ್ಚುವುದು ಕಷ್ಟದ ಕೆಲಸ. ಈ ದಂಧೆ ಮುಕ್ತವಾಗಿ ನಡೆಯುವುದಿಲ್ಲ. ಗುಪ್ತವಾಗಿ ನಡೆಯುವ ಈ ದಂಧೆಯನ್ನು ಮಟ್ಟಹಾಕಲು ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಡ್ರಗ್ಸ್ ಮಾಫಿಯಾ ವಿರುದ್ಧ ಇದು ಮುಂದುವರಿದ ಯುದ್ಧ ಎಂದರು.

ಮಂಗಳೂರಿನಲ್ಲಿ ಸಾಕಷ್ಟು ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸಕ್ಕೆ ಹೊರ ರಾಜ್ಯಗಳಿಂದ ಸಾಕಷ್ಟು ಮಂದಿ ಬರುತ್ತಾರೆ. ಇವರನ್ನೇ ಗುರಿಯಾಗಿಸಿಕೊಂಡು ಈ ದಂಧೆ ನಡೆಯುತ್ತಿದೆ. ರೌಡಿ ಪರೇಡ್‌ಗಳನ್ನು ಸತತವಾಗಿ ನಡೆಸಲಾಗುತ್ತಿದೆ. ಇದೀಗ ಪ್ರತ್ಯೇಕವಾಗಿ ಡ್ರಗ್ಸ್ ಮಾರಾಟಗಾರರು, ಪೂರೈಕೆದಾರರು ಮತ್ತು ವ್ಯಸನ ಪ್ರಕರಣಗಳ ಆರೋಪಿಗಳನ್ನು ಕರೆಸಿ ಪರೇಡ್ ನಡೆಸಿ ಅವರಿಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದೆ, ಜತೆಗೆ ಅವರನ್ನು ಬದಲಾಯಿಸಿ ಅವರನ್ನು ಸಮಾಜದಲ್ಲಿ ಸರಿದಾರಿಗೆ ತರುವ ಉದ್ದೇಶವೂ ಸೇರಿದೆ ಎಂದರು.

ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಪರೇಡ್ ಸ್ಥಳಕ್ಕೆ ಆಗಮಿಸುವ ಮೊದಲು ಸೇರಿದ್ದ ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಸಿಸಿಬಿ ವಿಭಾಗದ ಇನ್ಸ್‌ಪೆಕ್ಟರ್ ಶಿವಪ್ರಕಾಶ್ ಆರ್. ನಾಯ್ಕ ಪರೇಡ್ ನಡೆಸಿ, ಎಚ್ಚರಿಕೆ ನೀಡಿದರು. ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆರೋಪಿಗಳನ್ನು ಪ್ರತ್ಯೇಕವಾಗಿ ಮಾತುಕತೆ ನಡೆಸಿ ಎಚ್ಚರಿಕೆ ನೀಡಿದರು. 


ಪೂರೈಕೆದಾರ 90 ಮಂದಿ ಆರೋಪಿಗಳಲ್ಲಿ ಆರು ವಿದ್ಯಾರ್ಥಿಗಳು!
ಕಳೆದ ಜನವರಿಯಿಂದ ಈವರೆಗೆ ಮಾದಕ ದ್ರವ್ಯ ಸಾಗಾಟ, ಪೂರೈಕೆ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ 20 ಪ್ರಕರಣಗಳು ದಾಖಲಾಗಿವೆ. ಕಳೆದ ಎರಡು ತಿಂಗಳಲ್ಲೇ 10 ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ ಪತ್ತೆಯಾದ ಒಂದು ಪ್ರಕರಣದಲ್ಲೇ 132 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ಡ್ರಗ್ಸ್ ಸಾಗಾಟ, ಪೂರೈಕೆ ಪ್ರಕರಣಗಳ ಆರೋಪಿಗಳಲ್ಲಿ 180 ಮಂದಿಯನ್ನು ನಿರೀಕ್ಷಿಸಲಾಗಿದ್ದು, 90 ಮಂದಿ ಆಗಮಿಸಿದ್ದಾರೆ. ಅವರಲ್ಲಿ ಆರು ವಿದ್ಯಾರ್ಥಿಗಳು ಕೂಡಾ ಸೇರಿದ್ದಾರೆ. ಗಾಂಜಾ ವ್ಯಸನಕ್ಕೊಳಗಾಗಿ ಅದರಿಂದ ಹೊರಬಂದು ಉತ್ತಮ ಜೀವನ ನಡೆಸಲು ಬಯಸುವ ಆರೋಪಿಗಳಿಗೆ ವೈದ್ಯಕೀಯ ನೆರವು ಕೂಡಾ ನೀಡಲು ಇಲಾಖೆ ಸಿದ್ಧವಿದೆ

-ವಿಕಾಸ್ ಕುಮಾರ್, ಆಯುಕ್ತರು, ಮಂಗಳೂರು ಪೊಲೀಸ್ ಕಮಿಷನರೇಟ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X