Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗುಣಮುಖರಾದವರಲ್ಲಿ ಮತ್ತೆ ಕೊರೋನ ಸೋಂಕು:...

ಗುಣಮುಖರಾದವರಲ್ಲಿ ಮತ್ತೆ ಕೊರೋನ ಸೋಂಕು: ಅಧ್ಯಯನಕ್ಕೆ ಸಚಿವ ಸುಧಾಕರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Sept 2020 6:18 PM IST
share
ಗುಣಮುಖರಾದವರಲ್ಲಿ ಮತ್ತೆ ಕೊರೋನ ಸೋಂಕು: ಅಧ್ಯಯನಕ್ಕೆ ಸಚಿವ ಸುಧಾಕರ್ ಸೂಚನೆ

ಬೆಂಗಳೂರು, ಸೆ.7: ಕೊರೋನಾದಿಂದ ಗುಣಮುಖರಾದವರಲ್ಲಿ ಮತ್ತೊಮ್ಮೆ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕೋವಿಡ್-19 ಟೆಸ್ಟಿಂಗ್ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊರೋನದಿಂದ ಗುಣಮುಖರಾಗಿದ್ದ 27 ವರ್ಷದ ಮಹಿಳೆಗೆ ಮತ್ತೊಮ್ಮೆ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿದರು.

ಇತರೆ ರಾಷ್ಟ್ರಗಳಲ್ಲೂ ಈ ರೀತಿಯ ಪ್ರಕರಣಗಳು ಕಂಡು ಬಂದಿವೆ. ಇದಕ್ಕೆ ಒಂದೊಂದು ದೇಶದಲ್ಲೂ ಒಂದೊಂದು ರೀತಿ ಕಾರಣ ಕೇಳಿ ಬಂದಿವೆ. ನಮ್ಮಲ್ಲೂ ಇಂಥ ಪ್ರಕರಣ ಬೆಳಕಿಗೆ ಬಂದಿರುವುದು ಆತಂಕದ ವಿಷಯ. ಆದರೆ, ಇದನ್ನು ಸೂಕ್ಷ್ಮ ರೀತಿಯಲ್ಲಿ ನಿರ್ವಹಿಸುವ ಮೂಲಕ ಜನರಲ್ಲಿ ಮತ್ತೊಮ್ಮೆ ಕೊರೋನ ಬಾಧಿಸುತ್ತದೆ ಎಂಬ ಆತಂಕ ದೂರ ಮಾಡಬೇಕು ಎಂದು ಅವರು ಹೇಳಿದರು.

ಕೋವಿಡ್‍ನಿಂದ ಗುಣಮುಖರಾದವರ ದೇಹದಲ್ಲಿ ಬಿಳಿರಕ್ತ ಕಣಗಳ ಮರು ಉತ್ಪಾದನೆಗೆ  ಕನಿಷ್ಠ 15 ದಿನಗಳ ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಕೆಲವರಿಗೆ ಸೋಂಕು ಮತ್ತೊಮ್ಮೆ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಆದರೆ ಇದೇ ಕಾರಣ ಎಂದು ಸ್ಪಷ್ಟವಾಗಿ ಹೇಳಲಾಗದು ಎಂದು ಸಭೆಯಲ್ಲಿ ತಜ್ಞರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸುಧಾಕರ್, ಮತ್ತೊಮ್ಮೆ ಕೊರೋನ ಸೋಂಕು ಕಾಣಿಸಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ನಿಖರತೆ ಬೇಕು. ಜೊತೆಗೆ ಇತರೆ ರಾಜ್ಯಗಳಲ್ಲಿ ಇಂಥ ಪ್ರಕರಣಗಳಲ್ಲಿ ಅಳವಡಿಸಿಕೊಂಡಿರುವ ಚಿಕಿತ್ಸಾ ಕ್ರಮದ ಬಗ್ಗೆ ಶೀಘ್ರವೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಅಷ್ಟೇ ಅಲ್ಲದೆ, ಕೋವಿಡ್‍ನಿಂದ ಗುಣಮುಖರಾದವರ ಮೇಲೆ ಯಾವ ರೀತಿ ನಿಗಾ ವಹಿಸಲಾಗುತ್ತಿದೆ? ಅವರು ಅನುಸರಿಸಬೇಕಾದ ಎಚ್ಚರಿಕೆ ಹಾಗೂ ಇತರೆ ಕ್ರಮಗಳ ಬಗ್ಗೆ ಯಾವ ರೀತಿ ಅರಿವು ಮೂಡಿಸಲಾಗಿದೆ ಎಂಬ ವಿಷಯಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು.

ಬೂತ್ ಮಟ್ಟದ ಸಮಿತಿಗೆ ಜವಾಬ್ದಾರಿ: ಕೋವಿಡ್ ನಿಯಂತ್ರಣ ಬೂತ್‍ಮಟ್ಟದಿಂದ ಮಾತ್ರ ಸಾಧ್ಯ ಎಂಬುದನ್ನು ಮೊದಲಿನಿಂದ ಪ್ರತಿಪಾದಿಸಿದ್ದೇವೆ. ಬೂತ್ ಮಟ್ಟದಲ್ಲಿ ಸಮಿತಿ ರಚಿಸಿ, ಜಾಗೃತಿ ಮೂಡಿಸುವುದು ಹಾಗೂ ಕೊರೋನ ಪರೀಕ್ಷೆ ನಡೆಸುವುದರಿಂದ ಸುಲಭವಾಗಿ ಸೋಂಕು ಹರಡುವಿಕೆ ನಿಯಂತ್ರಣ ಸಾಧ್ಯ. ಈ ಜವಾಬ್ದಾರಿಯನ್ನು ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ವಹಿಸಿದರೆ ಇದರ ನಿರ್ವಹಣೆ ಸುಲಭ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಾದ ಜಾವೇದ್ ಅಖ್ತರ್, ಡಾ.ಶಾಲಿನಿ ರಜನೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X