Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರವಾಹದಿಂದ ರಾಜ್ಯಕ್ಕೆ 8,071 ಕೋಟಿ...

ಪ್ರವಾಹದಿಂದ ರಾಜ್ಯಕ್ಕೆ 8,071 ಕೋಟಿ ರೂ.ನಷ್ಟ: ಮುಖ್ಯಮಂತ್ರಿ ಯಡಿಯೂರಪ್ಪ

ಸಮೀಕ್ಷೆಗೆ ಆಗಮಿಸಿದ ಕೇಂದ್ರ ಅಧ್ಯಯನ ತಂಡ

ವಾರ್ತಾಭಾರತಿವಾರ್ತಾಭಾರತಿ7 Sept 2020 7:08 PM IST
share
ಪ್ರವಾಹದಿಂದ ರಾಜ್ಯಕ್ಕೆ 8,071 ಕೋಟಿ ರೂ.ನಷ್ಟ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಸೆ.7: ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ಸಮೀಕ್ಷೆಗೆಂದು ಕೇಂದ್ರ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್ ನೇತೃತ್ವದಲ್ಲಿ ಆಗಮಿಸಿರುವ ತಂಡವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿತು.

ರಾಜ್ಯದಲ್ಲಿ ಈ ಬಾರಿಯ ಪ್ರವಾಹದಿಂದ ಒಟ್ಟಾರೆ 8071 ಕೋಟಿ ರೂ.ಗಳ ನಷ್ಟ ಉಂಟಾಗಿದೆ. 2018 ಮತ್ತು 2019 ರಲ್ಲಿಯೂ ರಾಜ್ಯದಲ್ಲಿ ಭಾರಿ ಪ್ರವಾಹ ಮತ್ತು ಭೂ ಕುಸಿತ ಉಂಟಾಗಿ 22 ಜಿಲ್ಲೆಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಬಾರಿಯ ಪ್ರವಾಹದಲ್ಲಿ ಸುಮಾರು 4.03 ಲಕ್ಷ  ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು ಹಾನಿಗೊಳಗಾಗಿವೆ. ರಸ್ತೆ, ಸೇತುವೆ, ವಿದ್ಯುತ್ ಪರಿವರ್ತಕಗಳು, ಶಾಲೆ, ಅಂಗನವಾಡಿ ಮತ್ತು ಸರಕಾರಿ ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದು ಕೇಂದ್ರ ಅಧ್ಯಯನ ತಂಡಕ್ಕೆ ಮುಖ್ಯಮಂತ್ರಿ ವಿವರಿಸಿದರು.

‘ಉತ್ತಮವಾಗಿ ಮರುನಿರ್ಮಿಸು’ ತತ್ವವನ್ನು ಆಧರಿಸಿ ವಿಕೋಪವನ್ನು ತಡೆಯಬಲ್ಲ ಮನೆಗಳನ್ನು ನಿರ್ಮಿಸುವ ಬಹು ದೊಡ್ಡ ಪುನರ್ ನಿರ್ಮಾಣ ಯೋಜನೆಗಳಿಗೆ ರಾಜ್ಯ ಸರಕಾರವು ಆರ್ಥಿಕ ನೆರವು ನೀಡುತ್ತಿದೆ ಎಂದ ಮುಖ್ಯಮಂತ್ರಿ, ಸಂಪೂರ್ಣ ಹಾಳಾದ ಮನೆಗಳಿಗೆ 5 ಲಕ್ಷ ರೂ., ತೀವ್ರ ಹಾನಿಗೊಳಗಾದ ಮನೆಗಳಿಗೆ 3 ಲಕ್ಷ ರೂ., ಭಾಗಶಃ ಹಾನಿಗೊಳಗಾದ ಮನೆಗಳಿಗೆ 50 ಸಾವಿರ ರೂ. ಗಳಂತೆ ಧನ ಸಹಾಯ ನೀಡುತ್ತಿದೆ. ಕಳೆದ ವರ್ಷ 1500 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಈ ವರ್ಷವೂ ಕೋವಿಡ್ ಸಂಕಷ್ಟದ ನಡುವೆಯೂ 200 ಕೋಟಿ ರೂ.ಗಳನ್ನು ಸರಕಾರ ಭರಿಸಲಿದೆ ಎಂದರು.

ರಾಜ್ಯ ವಿಕೋಪ ಅಪಾಯ ನಿರ್ವಹಣಾ ನಿಧಿಯಡಿ, ನಾಲ್ಕು ಪ್ರತ್ಯೇಕ ನಿಧಿ ಗವಾಕ್ಷಿಗಳನ್ನು ಕೇಂದ್ರ ಸರಕಾರ ಸೃಜಿಸಿದೆ. ಆದರೆ, ಕೋವಿಡ್ ನಿಂದಾಗಿ ನಮ್ಮ ಪ್ರಯತ್ನಗಳಿಗೆ ತಡೆಯುಂಟಾಗಿದೆ. ರಾಜ್ಯ ಪ್ರಕೃತಿ ವಿಕೋಪ ಪ್ರಾಧಿಕಾರವು ರಾಜ್ಯ ವಿಕೋಪ ನಿರ್ವಹಣಾ ಯೋಜನೆ 2020 ನ್ನು ಅನುಮೋದಿಸಿದ್ದು, ಯೋಜನೆಯು ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಪುನರ್ ನಿರ್ಮಾಣದ ಯೋಜನೆಗಳನ್ನು ಹೊಂದಿದೆ ಎಂದು ಅವರು ಮಾಹಿತಿ ನೀಡಿದರು.

ಕೋವಿಡ್ 19 ನಿಯಂತ್ರಣಕ್ಕೆ ಹಾಗೂ ಪ್ರವಾಹಕ್ಕಾಗಿ ರಾಜ್ಯ ವಿಕೋಪ ಪರಿಹಾರ ನಿಧಿಯಡಿ 460 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳ ಹಾಗೂ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚಿನ ಮೊತ್ತದ ಅಗತ್ಯವಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ರಾಜ್ಯ ವಿಕೋಪ ಪರಿಹಾರ ನಿಧಿ/ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯಡಿ ನೆರವು ಒದಗಿಸುವ ಮಾರ್ಗಸೂಚಿಗಳು ಈ ವರ್ಷವೇ ಪರಿಷ್ಕರಣೆಯಾಗಬೇಕಿದ್ದು, ಕೂಡಲೇ ಇದನ್ನು ಪರಿಷ್ಕರಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿ, ಸಂಕಷ್ಟದಲ್ಲಿರುವ ಜನರ ಸಹಾಯಕ್ಕೆ ಹೆಚ್ಚಿನ ಮೊತ್ತವನ್ನು ಬಿಡುಗಡೆ ಮಾಡುವಂತೆ ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ ಮಾಡಿದರು.

ಕೇಂದ್ರ ಆರ್ಥಿಕ ಇಲಾಖೆಯ ನಿರ್ದೇಶಕ ಡಾ.ಭರತೇಂದು ಕುಮಾರ್ ಸಿಂಗ್, ಕೃಷಿ ಮತ್ತು ರೈತರ ಸಹಕಾರ ಸಚಿವಾಲಯದ ನಿರ್ದೇಶಕ ಡಾ.ಮನೋಹರನ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀಕ್ಷಕ ಅಭಿಯಂತರ ಸದಾನಂದ ಬಾಬು, ಕೇಂದ್ರ ಜಲಶಕ್ತಿ ಸಚಿವಾಲಯದ ಅಧೀಕ್ಷಕ ಅಭಿಯಂತರ ಗುರುಪ್ರಸಾದ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ವಿ.ಪಿ.ರಾಜ್ ವೇದಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಆರ್.ಅಶೋಕ್, ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್, ವಿ.ಸೋಮಣ್ಣ, ಗೋಪಲಯ್ಯ, ಮಾಧುಸ್ವಾಮಿ  ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X