Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಮಂಡಲ ಅಧಿವೇಶನ: ಸರಕಾರದ ಮುಂದೆ...

ವಿಧಾನಮಂಡಲ ಅಧಿವೇಶನ: ಸರಕಾರದ ಮುಂದೆ ಪ್ರಶ್ನಿಸಲು ಸಿದ್ಧವಾಗಿವೆ ಕಾಂಗ್ರೆಸ್ ಸದಸ್ಯರ 1200 ಪ್ರಶ್ನೆಗಳು

ವಾರ್ತಾಭಾರತಿವಾರ್ತಾಭಾರತಿ7 Sept 2020 8:05 PM IST
share
ವಿಧಾನಮಂಡಲ ಅಧಿವೇಶನ: ಸರಕಾರದ ಮುಂದೆ ಪ್ರಶ್ನಿಸಲು ಸಿದ್ಧವಾಗಿವೆ ಕಾಂಗ್ರೆಸ್ ಸದಸ್ಯರ 1200 ಪ್ರಶ್ನೆಗಳು

ಬೆಂಗಳೂರು, ಸೆ.7: ಇದೇ ತಿಂಗಳ 21ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು 1,200ಕ್ಕೂ ಹೆಚ್ಚು ಪ್ರಶ್ನೆಗಳನ್ನು ಸರಕಾರದ ಮುಂದೆ ಇಡಲಿದ್ದಾರೆ. ಪ್ರಶ್ನೆಗಳು ಈಗಾಗಲೇ ಸಿದ್ಧವಾಗಿದ್ದು ಅದನ್ನು ವಿಧಾನಸಭೆ ಹಾಗೂ ವಿಧಾನಸಭೆ ಸಚಿವಾಲಯಕ್ಕೆ ಸಲ್ಲಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶಾಸಕರಿಗೆ ಮನವಿ ಮಾಡಿದ್ದಾರೆ.

ಮಾಜಿ ಸಚಿವರ ತಂಡ ಪ್ರಶ್ನೆಗಳನ್ನು ಸಿದ್ಧಪಡಿಸಿದ್ದು, ಈ ವಿಷಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿ ಹಾಗೂ ವಿಧಾನಸಭೆ, ವಿಧಾನ ಪರಿಷತ್‍ನ ವಿರೋಧ ಪಕ್ಷದ ಮುಖ್ಯ ಸಚೇತಕರ ಕಚೇರಿ ಶಾಸಕರಿಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

ಅಧಿವೇಶನದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಬಗ್ಗೆ ಸಿದ್ದರಾಮಯ್ಯ ಅವರು ಇಂದು ಝೂಮ್ ಮೂಲಕ ಶಾಸಕರೊಂದಿಗೆ ಸಮಾಲೋಚನೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಹಿರಿಯ ನಾಯಕರಾದ ಎಚ್.ಕೆ.ಪಾಟೀಲ್, ಆರ್.ವಿ.ದೇಶಪಾಂಡೆ ಮತ್ತಿತರರು ಸೇರಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಚರ್ಚೆಯಲ್ಲಿ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ರಾಜ್ಯ ಸರಕಾರ ಹಲವಾರು ವಿಷಯಗಳಲ್ಲಿ ಎಡವಿದೆ. ಕೊರೋನ ಸೋಂಕು ನಿಯಂತ್ರಣದಲ್ಲಂತೂ ಸಂಪೂರ್ಣವಾಗಿ ವಿಫಲವಾಗಿದೆ. ಈ ಕುರಿತು ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚೆ ನಡೆಸಬೇಕಿದೆ. ಕೋವಿಡ್ ಉಪಕರಣಗಳ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆಯೂ ನಮ್ಮ ಪಕ್ಷ ಸದನದಲ್ಲಿ ಗಂಭೀರವಾಗಿ ಪ್ರಶ್ನೆ ಮಾಡಬೇಕಿದೆ ಎಂದು ಹೇಳಿದರು.

ಸರಕಾರದಲ್ಲಿ ಕೆಲಸ ನಡೆಯುತ್ತಿಲ್ಲ. ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಸರಕಾರ ಇದ್ದರೆ ಸ್ವರ್ಗ ಸೃಷ್ಟಿಯಾಗುತ್ತದೆ. ಕೇಂದ್ರದಿಂದ ನಾವು ಸಾಕಷ್ಟು ನೆರವು ಪಡೆಯುತ್ತೇವೆ ಎಂದು ಯಡಿಯೂರಪ್ಪ ಮತ್ತಿತರ ನಾಯಕರು ಹೇಳಿದ್ದರು.

ಜಿಎಸ್‍ಟಿ ವಿಚಾರದಲ್ಲಿ ಪರಿಹಾರ ಕೇಳಿದರೆ ನೀವು ಸಾಲ ಮಾಡಿ ನಷ್ಟ ತುಂಬಿಕೊಳ್ಳಿ ಎಂದು ಕೇಂದ್ರದ ಹಣಕಾಸು ಸಚಿವರು ಹೇಳುತ್ತಾರೆ. ಇಂಥ ವಿಷಯಗಳ ಮೇಲೆಯೂ ಪ್ರಶ್ನೆ ಮಾಡಬೇಕಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ಆಯ್ಕೆಯಾಗಿ ಹೋಗಿರುವ 25 ಬಿಜೆಪಿ ಸಂಸದರು ಈ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಸ್ವರ್ಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಯಡಿಯೂರಪ್ಪ ಉಸಿರು ಎತ್ತುತ್ತಿಲ್ಲ. ಬಿಜೆಪಿಯೇತರ ರಾಜ್ಯ ಸರಕಾರಗಳು ಮಾತ್ರ ಕೇಂದ್ರದ ನಡೆಯನ್ನು ಟೀಕಿಸಿವೆ. ಬಿಜೆಪಿ ಸರಕಾರಗಳು ‘ಕೋಲೆ ಬಸವನ ರೀತಿ ತಲೆ ಆಡಿಸುತ್ತಿವೆ’ ಎಂದು ಸಿದ್ದರಾಮಯ್ಯ ಟೀಕಿಸಿದರು.

ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಈ ಕುರಿತು ಮಂತ್ರಿಗಳೆ ಅಲ್ಲಲ್ಲಿ ಮಾತನಾಡುತ್ತಿದ್ದಾರೆ. ಪರ್ಸಂಟೇಜ್ ಕೊಡದ ಶಾಸಕರ ಕ್ಷೇತ್ರಗಳಿಗೆ ಅನುದಾನ ಇಲ್ಲ ಎಂಬಂತೆ ಆಗಿದೆ. ಬಿಜೆಪಿ ಮಂತ್ರಿಗಳ ಕ್ಷೇತ್ರದಲ್ಲಿಯೂ ಅನುದಾನಕ್ಕಾಗಿ ಲಂಚ ನೀಡಬೇಕಾದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತಾಗಿಯೂ ಸದನದಲ್ಲಿ ಚರ್ಚೆ ಕೈಗೆತ್ತಿಕೊಳ್ಳಬೇಕಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಂ, ವಿಧಾಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಅಜಯ್ ಸಿಂಗ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ.ನಾರಾಯಣಸ್ವಾಮಿ ಈ ಸಂದರ್ಭದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X