ಕಾರ್ಕಳ, ಸೆ.7: ವೈಯಕ್ತಿಕ ಕಾರಣದಿಂದ ಮನನೊಂದ ನಿಟ್ಟೆ ಕಲ್ಲಂಬಾಡಿ ಪದವು ನಿವಾಸಿ ಎಡ್ವರ್ಡ ಡಿಸೋಜ(38) ಎಂಬವರು ಮನೆಯಲ್ಲಿ ಯಾರೂ ಇಲ್ಲದ ಸಮಯ ಸೆ.7ರಂದು ಬೆಳಗ್ಗೆ ಮನೆಯ ಕೊಠಡಿಯಲ್ಲಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.