Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನಿವಾಸಿ ಕನ್ನಡಿಗರು ಕರ್ನಾಟಕದ...

ಅನಿವಾಸಿ ಕನ್ನಡಿಗರು ಕರ್ನಾಟಕದ ಪ್ರವಾಸೋದ್ಯಮವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಿ: ಡಾ.ಕೆ. ಸುಧಾಕರ್ ಕರೆ

ವಾರ್ತಾಭಾರತಿವಾರ್ತಾಭಾರತಿ7 Sept 2020 9:39 PM IST
share
ಅನಿವಾಸಿ ಕನ್ನಡಿಗರು ಕರ್ನಾಟಕದ ಪ್ರವಾಸೋದ್ಯಮವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಿ: ಡಾ.ಕೆ. ಸುಧಾಕರ್ ಕರೆ

ಬೆಂಗಳೂರು, ಸೆ.7: ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದ್ದು, ಅನಿವಾಸಿ ಕನ್ನಡಿಗರು ಜಾಗತಿಕ ಮಟ್ಟದಲ್ಲಿ ಇದನ್ನು ಪರಿಚಯಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು.

ರವಿವಾರ ರಾತ್ರಿ ವರ್ಚುವಲ್ ಕಾರ್ಯಕ್ರಮದಲ್ಲಿ ಅಕ್ಕಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ ವೈವಿಧ್ಯಮಯ ನೈಸರ್ಗಿಕ ಸಂಪನ್ಮೂಲ ಹೇರಳವಾಗಿದೆ. ಅಲ್ಲದೆ ನಮ್ಮ ರಾಜ್ಯ ಪ್ರವಾಸೋದ್ಯಮಕ್ಕೆ ಸೂಕ್ತವಾದ ಸ್ಥಳವಾಗಿದೆ. ಕರ್ನಾಟಕದಿಂದ ಅಮೆರಿಕಾಗೆ ತೆರಳುವ ಕನ್ನಡಿಗರು ಇಲ್ಲಿರುವ ಸಂಪನ್ಮೂಲಗಳ ಬಗ್ಗೆ ಅಲ್ಲಿನ ಜನರಿಗೆ ಪ್ರಚೂರ ಪಡಿಸಿ, ರಾಜ್ಯದ ಪ್ರವಾಸೋದ್ಯಮವನ್ನು ವಿಶ್ವ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಸುಧಾಕರ್ ಮನವಿ ಮಾಡಿದರು.

ವಿಶ್ವದಲ್ಲೆ ಅಮೆರಿಕಾ ಕೊರೋನದಿಂದ ಹೆಚ್ಚು ಸಂಕಷ್ಟಕ್ಕೆ ಒಳಗಾದ ದೇಶವಾಗಿದೆ. ಕರ್ನಾಟಕದಲ್ಲಿ ಕೊರೋನ ನಿಯಂತ್ರಣವನ್ನು ಕಟ್ಟುನಿಟ್ಟಿನಿಂದ ಮಾಡಿದ್ದೇವೆ. ವಿಶ್ವದಲ್ಲೇ ಕರ್ನಾಟಕದ ಸಾವಿನ ಪ್ರಮಾಣ ಶೇ.1.6 ಇದೆ. ಕೊರೋನ ಸಂಕಷ್ಟದಲ್ಲೂ ಆರ್ಥಿಕತೆಯನ್ನು ಸಬಲವಾಗಿ ತೆಗೆದುಕೊಂಡು ಹೋಗುತ್ತಿದ್ದೇವೆ ಎಂದು ಅವರು ಹೇಳಿದರು.

ಚೀನಾ ದೇಶಕ್ಕೆ ಸೆಡ್ಡು ಹೊಡೆಯಲು ಕರ್ನಾಟಕದಲ್ಲಿ ಆಟಿಕೆಗಳ ಉತ್ಪಾದನಾ ಘಟಕ ತೆರೆಯುತ್ತಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ಕೊಟ್ಟಿದ್ದಾರೆ. ಚನ್ನಪಟ್ಟಣ ಹಾಗೂ ಈ ಆಟಿಕೆ ಘಟಕಗಳ ಮೂಲಕ ನಮ್ಮ ಆಟಿಕೆ ಉತ್ಪಾದನೆಯಲ್ಲಿ ನಮ್ಮ ದೇಶ ಸ್ವಾವಲಂಬನೆ ಹೊಂದಲಿದೆ ಎಂದು ಸುಧಾಕರ್ ತಿಳಿಸಿದರು.

ಕನ್ನಡ ಭಾಷೆಗೆ 5 ಸಾವಿರ ವರ್ಷಗಳ ಇತಿಹಾಸವಿದೆ. ಇಲ್ಲಿನ ಸಾಂಸ್ಕೃತಿಕ ವೈಭವ ಅತ್ಯುನ್ನತವಾದದ್ದು. ಕನ್ನಡಿಗರು ಸಹೃದಯಿಗಳು. ನಮ್ಮಲ್ಲಿನ ಯುವಕರು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅಮೆರಿಕಾಗೆ ತೆರಳಿ ಅಲ್ಲಿನ ಜನರಿಗೆ ಸ್ವಂತ ಶಕ್ತಿಯಿಂದ ವಿವಿಧ ವೃತ್ತಿಯಲ್ಲಿ ತೊಡಗಿ ಕನ್ನಡ ನಾಡಿಗೆ ಕೀರ್ತಿ ತರುತ್ತಿದ್ದಾರೆ. ಕರ್ನಾಟಕಕ್ಕೆ ಮರಳಿ ಕೆಲವರು ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ ಕ್ಷೇತ್ರವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಕನ್ನಡದ ಮೇಲಿನ ನಿಮ್ಮ ಅಭಿಮಾನಕ್ಕೆ ಧನ್ಯವಾದಗಳು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X