ಬೆಂಗಳೂರು: ಕೊರೋನಗೆ ಇಂದು 48 ಮಂದಿ ಮೃತ್ಯು; 2,935 ಮಂದಿ ಗುಣಮುಖ

ಬೆಂಗಳೂರು, ಸೆ.6: ನಗರದಲ್ಲಿ ಸೋಮವಾರದಂದು 2,942 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 2,935 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಸೋಂಕಿಗೆ 48 ಜನರು ಮೃತರಾಗಿದ್ದಾರೆ.
ನಗರದಲ್ಲಿ ಒಟ್ಟು 1,505,23 ಮಂದಿಗೆ ಸೋಂಕು ದೃಢಪಟ್ಟಿದ್ದು, 2,211 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,08,642 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 39,669 ಕೊರೋನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 1,98,86 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.
ರವಿವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 14,520 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 17,282 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ.
ನಗರದ 3,98,004 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 5,01,389 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 10,38,077 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.14.22ರಷ್ಟಿದೆ. ಕೊರೋನ ಸೋಂಕಿಗೆ ಮೃತರಾಗುತ್ತಿರುವ ಪ್ರಮಾಣ ಶೇ.1.47ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.71,62ರಷ್ಟಿದೆ.
ವೇತನಕ್ಕೆ ಒತ್ತಾಯಿಸಿ ಪ್ರತಿಭಟನೆ
ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಗುರೂಜಿ ಆಶ್ರಮದಲ್ಲಿ ಬಿಬಿಎಂಪಿ ನಡೆಸುತ್ತಿರುವ ಕೋವಿಡ್ ಆರೈಕೆ ಕೇಂದ್ರದ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಲ್ಲಿ ರವಿಶಂಕರ್ ಗುರೂಜಿ ಆಶ್ರಮದ ಕೋವಿಡ್ ಕೇರ್ ಸೆಂಟರ್ ಸಿಬ್ಬಂದಿ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಕೇಂದ್ರದಲ್ಲಿ 140 ಮಂದಿ ಕೊರೋನ ಸೋಂಕಿತರನ್ನು ಇರಿಸಲಾಗಿದೆ. ಅವರಿಗೆ ಸರಿಯಾಗಿ ಊಟ ಕೊಡುತ್ತಿಲ್ಲ. ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದಾರೆ. ಪಾಸಿಟಿವ್ ಬಂದವರನ್ನು ಅಲ್ಲಿರಿಸಿ ಬಿಬಿಎಂಪಿ ಚಿಕಿತ್ಸೆ ಕೊಡಿಸುತ್ತಿದೆ ಎಂದು ಸೋಂಕಿತರು ಆರೋಪಿಸಿದ್ದಾರೆ.







