ಪಿಯು ಪೂರಕ ಪರೀಕ್ಷೆಗೆ 76 ವಿದ್ಯಾರ್ಥಿಗಳು ಗೈರು
ಬೆಂಗಳೂರು, ಸೆ.7: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ 76 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಮೊದಲ ದಿನ ಬೆಳಗ್ಗೆ ಉರ್ದು, ಸಂಸ್ಕೃತ ಪರೀಕ್ಷೆ ನಡೆದಿದ್ದು, ಮಧ್ಯಾಹ್ನ ವೇಳೆ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯುಟಿ ಆಂಡ್ ವೆಲ್ ನೆಸ್, ಹೋಂ ಸೈನ್ಸ್ ವಿಷಯಕ್ಕೆ ಪರೀಕ್ಷೆ ನಡೆಯಿತು.
ಕೊರೋನ ಆತಂಕದ ನಡುವೆಯೇ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಉರ್ದು ವಿಷಯಕ್ಕೆ 353 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 322 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 31 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಸಂಸ್ಕೃತ ವಿಷಯಕ್ಕೆ 654 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 609 ಪರೀಕ್ಷೆ ಜನ ಪರೀಕ್ಷೆ ಬರೆದಿದ್ದಾರೆ. 45 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಎರಡು ವಿಷಯಗಳಿಂದ 76 ವಿದ್ಯಾರ್ಥಿಗಳು ಇಂದಿನ ಪರೀಕ್ಷೆಗೆ ಗೈರಾಗಿದ್ದಾರೆ.
Next Story





