ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನ: ಬಂಟ್ವಾಳ ತೌಹೀದ್ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಉತ್ತೀರ್ಣ
ಬಿ.ಸಿ.ರೋಡ್ : ಬಂಟ್ವಾಳ ತೌಹೀದ್ ಆಂಗ್ಲ ಮಾದ್ಯಮ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ತೇರ್ಗಡೆ ಹೊಂದಿದ್ದು ಶಾಲೆಯು ಶೇಕಡಾ 99 ಫಲಿತಾಂಶ ದಾಖಲಿಸಿದೆ.
ಒಟ್ಟು 81 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 76 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರು. ಇದೀಗ ನಡೆಸಿದ ಮರು ಮೌಲ್ಯಮಾಪನದಲ್ಲಿ ನಾಲ್ವರು ತೇರ್ಗಡೆಯಾಗಿದ್ದು 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 60 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಒಟ್ಟು 80 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
Next Story





