Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೂರಿಯಾ ಕೊರತೆ ನೀಗಿಸಿ ರೈತರ ಕಷ್ಟ...

ಯೂರಿಯಾ ಕೊರತೆ ನೀಗಿಸಿ ರೈತರ ಕಷ್ಟ ನಿವಾರಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ವಾರ್ತಾಭಾರತಿವಾರ್ತಾಭಾರತಿ8 Sept 2020 8:28 PM IST
share
ಯೂರಿಯಾ ಕೊರತೆ ನೀಗಿಸಿ ರೈತರ ಕಷ್ಟ ನಿವಾರಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಸೆ. 8: ಮುಂಗಾರು ಬಿತ್ತನೆಗೆ ಮುಂದಾಗಿರುವ ರೈತರು ಯೂರಿಯಾ ರಸಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಯೂರಿಯಾವನ್ನು ತರಿಸಿಕೊಂಡು ರೈತರ ಸಂಕಷ್ಟವನ್ನು ಪರಿಹರಿಸಬೇಕೆಂದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಮಂಗಳವಾರ ಈ ಕುರಿತು ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ದಿನಗಳಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ 'ಯೂರಿಯಾ' ಸಮಸ್ಯೆ ಉದ್ಭವಿಸಿ ರೈತರು ಪ್ರತಿಭಟನೆಗಳನ್ನು ನಡೆಸುತ್ತಿರುವ ಬಗ್ಗೆ ವರದಿಯಾಗುತ್ತಿವೆ. ಜನರು ಮಳೆಯಾಗಿದೆ ಬೆಳೆಗೆ ಯೂರಿಯಾ ಬೇಕು. ಆದರೆ, ಅಂಗಡಿಗಳಲ್ಲಿ ಯೂರಿಯಾ ಲಭ್ಯವಿಲ್ಲವೆಂದು ಅಂಗಡಿಗಳಲ್ಲಿ ಹೇಳುತ್ತಿದ್ದಾರೆಂದು ನನ್ನ ಗಮನಕ್ಕೆ ತರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಾಧಾರಣವಾಗಿ ಈ ಋತುವಿಗೆ 8.50 ಲಕ್ಷ ಮೆಟ್ರಿಕ್ ಟನ್‍ಗಳಷ್ಟು ಯೂರಿಯಾದ ಅವಶ್ಯಕತೆ ಇತ್ತು. ಆದರೆ ನಿಮ್ಮ ವೈಬ್‍ಸೈಟ್‍ನ ಮಾಹಿತಿ ಪ್ರಕಾರ 8,95,221 ಮೆಟ್ರಿಕ್ ಟನ್‍ಗಳಷ್ಟು ಯೂರಿಯಾವನ್ನು ವಿತರಿಸಲಾಗಿದೆ (ಎ.1ರಿಂದ ಜೂ.6ರ ವರೆಗೆ) ಹಾಗೂ 1,88,996 (ಸೆ.6 ರಂದು) ಮೆಟ್ರಿಕ್ ಟನ್‍ಗಳಷ್ಟು ಲಭ್ಯವಿದೆ ಎಂದು ಹೇಳಲಾಗುತ್ತಿದೆ. ಆದರೆ ಜನರು ಮಾತ್ರ ತಮಗೆ ಯೂರಿಯಾ ಸಿಗುತ್ತಿಲ್ಲವೆಂದು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಹಾಗಾದರೆ ಸಮಸ್ಯೆಯ ಮೂಲವಿರುವುದು ಎಲ್ಲಿ? ಕಾಳಸಂತೆಕೋರರು ಅಕ್ರಮವಾಗಿ ದಾಸ್ತಾನು ಮಾಡಿರಬೇಕು, ನಿಮ್ಮ ವೆಬ್‍ಸೈನ ಅಂಕಿಅಂಶಗಳೇ ತಪ್ಪು ಇರಬೇಕು. ಅಥವಾ ಜನರ ಬೇಡಿಕೆ ಹೆಚ್ಚಾಗಿರಬೇಕು ಎಂದು ಟೀಕಿಸಿದ್ದಾರೆ.

ಪರಿಶೀಲಿಸಿ ನೋಡಿದರೆ ಈ 3 ಅಂಶಗಳೂ ನಿಜ ಇರುವಂತೆ ಕಾಣುತ್ತಿವೆ. ಕೊರೋನ ಕಾರಣದಿಂದ ಲಾಕ್‍ಡೌನ್ ಹೇರಿದ್ದರಿಂದ ನಗರಗಳಿಂದ ವ್ಯಾಪಕವಾಗಿ ಗ್ರಾಮಾಂತರ ಪ್ರದೇಶಕ್ಕೆ ವಲಸೆ ಹೋದರು. ಹಾಗಾಗಿ ಸಹಜವಾಗಿಯೇ ಕೃಷಿ ಕ್ಷೇತ್ರದ ಮೇಲೆ ಒತ್ತು ಬೀಳಲಾರಂಭಿಸಿತು. ಈ ವಿಚಾರವನ್ನು ಮನಗಂಡು ನಾವು ಈ ವರ್ಷದ ಎಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸರಕಾರಕ್ಕೆ ಮಾಡಿದ ಮನವಿ ಪತ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೀಜ ಮತ್ತು ಗೊಬ್ಬರವನ್ನು ದಾಸ್ತಾನು ಮಾಡಿಕೊಳ್ಳಬೇಕೆಂದು ಹಾಗೂ ಒದಗಿಸಬೇಕೆಂದು ಆಗ್ರಹಿಸಿದ್ದೆವು.

ಸರಕಾರದ ಅಂಕಿಅಂಶಗಳ ಪ್ರಕಾರವೇ ಶೇ.20 ರಷ್ಟು ಹೆಚ್ಚುವರಿ ಭೂ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಸರಕಾರ ಇದೇ ರೀತಿಯ ನಿರ್ಲಕ್ಷ್ಯ ರೀತಿಯ ಗೊಬ್ಬರಗಳಿಗೂ ರೈತರು ಪರದಾಡಬೇಕಾಗುತ್ತದೆ. ಬಿಜೆಪಿಯು ಈ ಹಿಂದೆ ಅಧಿಕಾರದಲ್ಲಿದ್ದಾಗಲೂ ಔಷಧಿ ಗೊಬ್ಬರಗಳನ್ನು ಸಮರ್ಪಕವಾಗಿ ವಿತರಿಸಲಾಗದೆ ಸಂಘರ್ಷ ಉಂಟಾದ್ದರಿಂದ ಹಾವೇರಿಯಲ್ಲಿ ಗೋಲಿಬಾರ್ ನಡೆಸಿ ಇಬ್ಬರು ರೈತರನ್ನು ಕೊಲೆ ಮಾಡಲಾಯಿತು. ಅಂತಹ ಕೆಟ್ಟ ನೆನಪುಗಳು ಬೆನ್ನಿಗಿದ್ದರೂ ಗೊಬ್ಬರದಂತಹ ಮಹತ್ವವಾದ ವಿಷಯವನ್ನು ನಿಭಾಯಿಸಲಾಗದೇ ಸರಕಾರ ಮತ್ತೊಮ್ಮೆ ಸಂಪೂರ್ಣ ವಿಫಲವಾಗಿದೆ. ರೈತರ ಕಾಳಜಿಯಿಂದಾಗಿ ಬೆಳೆಗಳು ಚೆನ್ನಾಗಿರುವುದರಿಂದ ಬೆಲೆ ಕುಸಿತದ ಸಮಸ್ಯೆಯು ಮುಂದಿನ ದಿನಗಳಲ್ಲಿ ಖಂಡಿತವಾಗಿ ಉದ್ಭವಿಸುತ್ತದೆ. ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X