Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಲ್ಲಾಳಿಗಳ ಹಾವಳಿಯಿಂದ ತಾಲೂಕು...

ದಲ್ಲಾಳಿಗಳ ಹಾವಳಿಯಿಂದ ತಾಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಮಾಜಿ ಶಾಸಕ ವಸಂತ ಬಂಗೇರ ಆರೋಪ

ವಾರ್ತಾಭಾರತಿವಾರ್ತಾಭಾರತಿ8 Sept 2020 10:09 PM IST
share
ದಲ್ಲಾಳಿಗಳ ಹಾವಳಿಯಿಂದ ತಾಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಮಾಜಿ ಶಾಸಕ ವಸಂತ ಬಂಗೇರ ಆರೋಪ

ಬೆಳ್ತಂಗಡಿ : ಕಳೆದ ಆರು ತಿಂಗಳಿನಿಂದ ಕೆಲ ಬಡವರಿಗೆ 94ಸಿ ಹಕ್ಕುಪತ್ರ ನೀಡುತ್ತಿಲ್ಲ. ಜನರು ಬಂದು ವಿಚಾರಿಸಿದರೆ ಏನೇನೋ ಕಾರಣ ಹೇಳುತ್ತಾರೆ. ಈ ಬಗ್ಗೆ ತಹಶೀಲ್ದಾರ್ ತಕ್ಷಣ ಕ್ರಮಕೈಗೊಂಡು 10 ದಿನದೊಳಗೆ ವಿತರಣೆ ಮಾಡಬೇಕು. ಮಾಡದೇ ಇದ್ದಲ್ಲಿ ಕಾಂಗ್ರೆಸ್ ವತಿಯಿಂದ ಹೋರಾಟ ಮಾಡಲಾಗುವುದು ಎಂದು ಮಾಜಿ ಶಾಸಕ ವಸಂತ ಬಂಗೇರ ಎಚ್ಚರಿಸಿದರು.

ಬೆಳ್ತಂಗಡಿಯಲ್ಲಿ ಮಾತನಾಡಿದ ಅವರು, ಬೆಳ್ತಂಗಡಿ ತಾಲೂಕು ಕಚೇರಿಗಳು ದಲ್ಲಾಳಿಗಳಿಂದ ತುಂಬಿವೆ. ಸುಮಾರು ಒಂದು ಸಾವಿರಕ್ಕಿಂತಲೂ ಅಧಿಕ ದಲ್ಲಾಳಿಗಳು ಕಚೇರಿಯ ಕೆಲವು ಅಧಿಕಾರಿಗಳ ಮೂಲಕ ತಮಗೆ ಬೇಕಾದ ಹಾಗೇ ಕಡತಗಳ ಕೆಲಸಗಳನ್ನು ಲಂಚ ನೀಡಿ ಮಾಡಿಸಿ ಕೊಳ್ಳುತ್ತಿದ್ದಾರೆ. ಇದರಿಂದ ಬಡವರಿಗೆ ಅನ್ಯಾಯವಾಗುತ್ತಿದೆ. ಅದಲ್ಲದೆ ಕೆಲ ಕಡತಗಳು ನಾಪತ್ತೆಯಾಗುತ್ತಿವೆ. ಕಡತಗಳು ನಾಪತ್ತೆಯಾಗಲು ಈ ದಲ್ಲಾಳಿಗಳೇ ಕಾರಣ ಎಂದು ಆರೋಪಿಸಿದರು.

ಅರ್ಜಿ ನೀಡಿದ ದಾಖಲೆ ಇರುವ ನಾಪತ್ತೆಯಾದ ಕಡತಗಳ ಹೊಸ ದಾಖಲೆಗಳನ್ನು ತಹಶೀಲ್ದಾರ್ ಪರಿಶೀಲಿಸಿ ತಕ್ಷಣ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ದಲ್ಲಾಳಿಗಳಿಗೆ ಹಾಗೂ ಅಧಿಕಾರಿಗಳಿಗೆ ವ್ಯವಹಾರ ನಡೆಸಲು ಅವಕಾಶ ಕೊಡಬಾರದು. ಈ ಬಗ್ಗೆ ಸೂಕ್ತ ತನಿಖೆ ಮಾಡಿ ಕ್ರಮಕೈಗೊಳ್ಳಬೇಕು ಎಂದರು.

ನಾಲ್ಕು ಚಕ್ರದ ವಾಹನಗಳಿದ್ದವರು ತಮ್ಮ ಬಿಪಿಎಲ್ ಕಾರ್ಡ್‌ಗಳನ್ನು ಹಿಂದುರಿಗಿಸಬೇಕು ಎಂಬ ಆದೇಶವನ್ನು ಸರ್ಕಾರ ಘೋಷಿಸಿತ್ತು. ಅದರಂತೆ ಕೆಲವರೆಲ್ಲ ಕಾರ್ಡ್ ಹಿಂದಿರುಗಿಸಿದ್ದಾರೆ. ಆದರೂ ಅವರಿಂದ ದಂಡ ವಸೂಲಿ ಮಾಡುವ ಕೆಲಸ ನಡೆದಿದೆ. ಇದನ್ನು ಅವರಿಗೆ ಹಿಂದುರಿಗಿಸಬೇಕು. ಕಳೆದ ನೆರೆ ಸಂದರ್ಭದಲ್ಲಿ ಮನೆ ಹಾಗೂ ಕೃಷಿ ಕಳೆದುಕೊಂಡ ಕೆಲವರಿಗೆ ಮಾತ್ರ ಪರಿಹಾರ ಹಾಗೂ ಮನೆ ಮಂಜೂರಾಗಿದೆ. ಆದರೆ, ಇನ್ನೂ ಅನೇಕ ಸಂತ್ರಸ್ತರಿಗೆ ಪರಿಹಾರ ದೊರಕಿಲ್ಲ. ಸಂತ್ರಸ್ತರಲ್ಲದ ಕೆಲವರಿಗೆ ಪರಿಹಾರ ನೀಡಿದ ಬಗ್ಗೆ ತನಿಖೆ ನಡೆಸಬೇಕು ಎಂದರು.

ಕಾಂಗ್ರೆಸ್ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ ಮಾತನಾಡಿ, ಕಾಳಜಿ ರಿಲೀಫ್ ಫಂಡ್ ಲೆಕ್ಕಾಚಾರದಲ್ಲಿ ಗೊಂದಲವಿದೆ. ದಯವಿಟ್ಟು ಶಾಸಕರು ತಾಲೂಕಿನ ಜನತೆಯ ಸಂಶಯ ಬಗೆಹರಿಸಿ, ಅದಷ್ಟೂ ಬೇಗ ಸಂತ್ರಸ್ತರಿಗೆ ಈ ಹಣವನ್ನು ನೀಡಬೇಕು ಎಂದು ಒತ್ತಾಯಿಸಿದರು.

ತಾಲೂಕಿನಲ್ಲಿ ಅವ್ಯಾಹತವಾಗಿ ಮರಳು ದಂಧೆ ನಡೆಯುತ್ತಿದೆ. ಪ್ರಭಾವಿಗಳ ಒತ್ತಡದಿಂದ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತುಕೊಂಡಿದ್ದಾರೆ. ಸೇತುವೆಯ ಅಡಿಭಾಗದಿಂದ ಹಾಗೂ ಜೆಸಿಬಿ ಮೂಲಕ ಮರಳು ತೆಗೆಯುವುದಕ್ಕೆ ಅವಕಾಶ ಇಲ್ಲದಿದ್ದರೂ ತಾಲೂಕಿನ ಹಲವೆಡೆ ಮರಳು ತೆಗೆಯುವ ಕೆಲಸ ನಡೆಯುತ್ತಿದೆ. ಹೀಗೆಯೇ ಮರಳು ದಂಧೆ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಕೆಲ ಸೇತುವೆಗಳು ಕುಸಿಯುವ ಸಾಧ್ಯತೆ ಇದೆ. ಇದರ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಬೇಕೆಂದು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ ಹೇಳಿದರು.

ಈ ಸಂದರ್ಭದಲ್ಲಿ ಮನೋಹರ್ ಕುಮಾರ್ ಇಳಂತಿಲ, ಕಾಂಗ್ರೆಸ್ ತಾಲೂಕು ಇಂಟಕ್ ಅಧ್ಯಕ್ಷ ನವೀನ್ ಗೌಡ, ಅನಿಲ್ ಪೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X