Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ನಗರಸಭಾ ವ್ಯಾಪ್ತಿಯ ಸಮಸ್ಯೆಗಳನ್ನು...

ಉಡುಪಿ ನಗರಸಭಾ ವ್ಯಾಪ್ತಿಯ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ: ಸಂಸದೆ ಶೋಭಾ

ವಾರ್ತಾಭಾರತಿವಾರ್ತಾಭಾರತಿ10 Sept 2020 6:21 PM IST
share
ಉಡುಪಿ ನಗರಸಭಾ ವ್ಯಾಪ್ತಿಯ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ: ಸಂಸದೆ ಶೋಭಾ

ಉಡುಪಿ, ಸೆ.10: ಉಡುಪಿ ನಗರಸಾವ್ಯಾಪ್ತಿಯವಿವಿ ವಾರ್ಡ್‌ಗಳ ಸಮಸ್ಯೆಗಳ ಕುರಿತು ಸಂಬಂದಪಟ್ಟ ವಾರ್ಡ್‌ನ ಸದಸ್ಯರುಗಳು ನೀಡುವ ದೂರುಗಳನ್ನು ಕೂಡಲೇ ಬಗೆಹರಿಸುವಂತೆ ಸಂಸದೆ ಶೋಾಕರಂದ್ಲಾಜೆನಗರಸೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಉಡುಪಿ ನಗರಸಭೆಯ ಎಲ್ಲಾ ವಾರ್ಡ್‌ಗಳ ಸಮಸ್ಯೆಗಳ ಕುರಿತ ಸಂಬಂಧಪಟ್ಟ ನಗರಸಭಾ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ವಾರ್ಡ್‌ಗಳಲ್ಲಿ ಪ್ರಮುಖವಾಗಿರುವ ಕುಡಿಯುವ ನೀರು, ವಿದ್ಯುತ್ ದೀಪ ಸಮಸ್ಯೆ ಮತ್ತು ನೈರ್ಮಲ್ಯ, ತ್ಯಾಜ್ಯವಿಲೇವಾರಿ ಕುರಿತ ಸಮಸ್ಯೆಗಳನ್ನು ಆದ್ಯತೆ ಯಲ್ಲಿ ಇತ್ಯರ್ಥಪಡಿಸಬೇಕಾಗಿದೆ. ವಾರ್ಡ್‌ಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆಯಲು ಹೆಚ್ಚಿನ ಸಿಬ್ಬಂದಿ ನಿಯೋಜಿಸಿ, ಇವರಿಗೆ ಕಳೆ ತೆಗೆಯುವ ಯಂತ್ರ ಗಳನ್ನು ನೀಡಿ. ಖಾಲಿ ಸೈಟ್‌ಗಳಲ್ಲಿ ಬೆಳದಿರುವ ಗಿಡಗಳನ್ನು ತೆಗೆಯಲು ಸಂಬಂಧಪಟ್ಟ ಜಾಗದ ಮಾಲೀಕರಿಗೆ ಸೂಚಿಸಿ. ನಿಗದಿತ ಅವಧಿಯಲ್ಲಿ ಅವರು ತೆಗೆಯದಿದ್ದಲ್ಲಿ ದಂಡ ವಿಧಿಸುವ ಕುರಿತಂತೆ ಸಾರ್ವಜನಿಕ ಪ್ರಕಟಣೆ ನೀಡುವಂತೆ ಅಧಿಕಾರಿಗಳಿಗೆ ಶೋಭಾ ಕರಂದ್ಲಾಜೆ ಸೂಚನೆಗಳನ್ನು ನೀಡಿದರು.

ಮಣಿಪಾಲದಲ್ಲಿ ರಸ್ತೆ ಅಗಲೀಕರಣದಿಂದ ಸಂತ್ರಸ್ತರಾಗುವ ಗೂಡಂಗಡಿಗಳ ಮಾಲಕರಿಗೆ ವ್ಯಾಪಾರಕ್ಕಾಗಿ ಪರ್ಯಾಯ ಜಾಗ ಗುರುತಿಸಿ ನೀಡು ವಂತೆ ತಿಳಿಸಿದ ಅವರು, ರಸ್ತೆ ಬದಿಯಲ್ಲಿ ಅನುಮತಿ ಇಲ್ಲದೇ ವ್ಯಾಪಾರ ಮಾಡುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ನುಡಿದರು. ಪ್ರತಿ ವಾರ್ಡ್ ರಸ್ತೆಯಲ್ಲಿರುವ ಪಾಟ್ ಹೋಲ್‌ಗಳನ್ನು ಮುಚ್ಚುವಂತೆ ತಿಳಿಸಿದರು.

ನಗರಸಭೆಯ ಪ್ರಸ್ತುತ ಕಟ್ಟಡ ಹಳೆಯದಾಗಿದ್ದು ಹೊಸ ಕಟ್ಟಡ ನಿರ್ಮಾಣದ ಕುರಿತಂತೆ ಸದಸ್ಯರೊಬ್ಬರು ಕೇಳಿದ ಮಾಹಿತಿಗೆ ಉತ್ತರಿಸಿದ ಸಂಸದೆ, ಉಡುಪಿಯ ಹಳೇ ತಾಲೂಕು ಕಚೇರಿ ಬಳಿ ನಿರ್ಮಾಣ ಮಾಡುವಂತೆ ಈ ಹಿಂದೆ ಸಲ್ಲಿಸಿದ್ದ ಮನವಿ ಕುರಿತು ಪ್ರಶ್ನಿಸಿದರು. ಈ ಜಾಗ ವನ್ನು ನಗರಸಭೆಗೆ ನೀಡುವ ಕುರಿತು ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ನಗರಸಭಾ ವ್ಯಾಪ್ತಿಯ ಬೀದಿದೀಪಗಳನ್ನು 15 ದಿನದಲ್ಲಿ ಸಮರ್ಪಕ ನಿರ್ವಹಣೆ ಮಾಡಲಾಗುವುದು. ಎಲ್ಲಾ ವಾರ್ಡ್‌ಗಳಲ್ಲಿ ಬೆಳೆದಿರುವ ಗಿಡಗಂಟಿ ಗಳನ್ನು ತೆಗೆಯಲು ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ತಿಳಿಸಿದರು.

ಇತೀಚೆಗೆ ಮೃತಪಟ್ಟ ಇಂದಿರಾನಗರದ ಮಹಿಳೆಯೊಬ್ಬರ ಸಾವಿನ ಕುರಿತು ಆ ವಾರ್ಡ್‌ನ ಸದಸ್ಯರು ವಿವರ ಕೋರಿದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ತನಿಖೆಗಾಗಿ ನೇಮಿಸಿದ್ದ ತಜ್ಞವೈದ್ಯರ ವರದಿ ಪೂರ್ಣಗೊಂಡಿದ್ದು, ಮರಣೋತ್ತರ ವರದಿ ಮತ್ತು ಎಫ್‌ಎಸ್‌ಎಲ್ ವರದಿಗಾಗಿ ಕಾಯಲಾಗುತ್ತಿದೆ. ಸಿಓಡಿ ತನಿಖೆ ಸಹ ನಡೆಯುತ್ತಿದೆ. ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ ಕುರಿತಂತೆ ಕೆಲವು ಸಾಮಾಜಿಕ ಜಾಲತಾಣಗಳ ಅಪಪ್ರಚಾರದಿಂದ ಕೋವಿಡ್ ಪರೀಕ್ಷೆಗೆ ಹಿನ್ನಡೆಯಾಗಿದ್ದು, ಇದರಿಂದ ರೋಗಿ ಗಳು ಕೊನೆಯ ಕ್ಷಣದಲ್ಲಿ ಗಂಭೀರ ಪರಿಸ್ಥಿತಿ ಯೊಂದಿಗೆ ಮನೆಯಿಂದ ನೇರವಾಗಿ ಐಸಿಯು ಚಿಕಿತ್ಸೆಗೆ ದಾಖಲಾಗುತ್ತಿದ್ದಾರೆ. ಪ್ರಸ್ತುತ ಎಲ್ಲಾ ಐಸಿಯುಗಳು ಭರ್ತಿಯಾಗಿದ್ದು, ಅಧಿಕ ಮರಣ ಸಂಭವಿಸುತ್ತಿವೆ. ಕೋವಿಡ್‌ನ್ನು ಬೇಗ ಗುರುತಿಸಿ ಚಿಕಿತ್ಸೆ ನೀಡಿದಲ್ಲಿ ಸಂಪೂರ್ಣ ಗುಣಮುಖರಾಗಲು ಸಾದ್ಯವಿದೆ ಎಂದು ವಿವರಿಸಿದರು.

ಆದ್ದರಿಂದ ಎಲ್ಲಾ ನಗರಸಭಾ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ, ಜ್ವರ ಶೀತ ಕೆಮ್ಮ ಲಕ್ಷಣಗಳಿದ್ದಲ್ಲಿ ಕೂಡಲೇ ಜಿಲ್ಲಾಸ್ಪತೆ ಯಲ್ಲಿ ಉಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ ದಾಖಲಾಗುವ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಶಾಸಕ ಕೆ.ರಘುಪತಿ ಭಟ್, ನಗರಸಭೆಯ ವಿವಿಧ ವಾರ್ಡ್‌ಗಳ ಸದಸ್ಯರು, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ, ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಹಾಗೂ ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X