Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಸರಳವಾಗಿ ನಡೆದ ಕೃಷ್ಣ...

ಉಡುಪಿ: ಸರಳವಾಗಿ ನಡೆದ ಕೃಷ್ಣ ಜನ್ಮಾಷ್ಟಮಿ

ವಾರ್ತಾಭಾರತಿವಾರ್ತಾಭಾರತಿ10 Sept 2020 9:20 PM IST
share
ಉಡುಪಿ: ಸರಳವಾಗಿ ನಡೆದ ಕೃಷ್ಣ ಜನ್ಮಾಷ್ಟಮಿ

ಉಡುಪಿ, ಸೆ.10: ಪ್ರತಿ ವರ್ಷ ಅದ್ದೂರಿಯಾಗಿ, ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಭಾರೀ ಜನರ ಭಾಗವಹಿಸುವಿಕೆಯಲ್ಲಿ ನಡೆಯುತಿದ್ದ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಈ ಬಾರಿ ಕೊರೋನದ ಕಾರಣದಿಂದ ಅತ್ಯಂತ ಸರಳವಾಗಿ ಸಂಪ್ರದಾಯಿಕ ಕಾರ್ಯಕ್ರಮಗಳಿಗೆ ಸೀಮಿತವಾಗಿ ಸಂಪನ್ನಗೊಂಡಿತು.

ಬೆಳಗ್ಗೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥರು ಶ್ರೀಕೃಷ್ಣನಿಗೆ ‘ತೊಟ್ಟಿಲಲ್ಲಿ ಬಾಲಕೃಷ್ಣ ’ ಅಲಂಕಾರ ಮಾಡಿದರು. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥರು ಲಕ್ಷ ತುಳಸಿ ಅರ್ಚನೆಯೊಂದಿಗೆ ಮಹಾಪೂಜೆ ನೆರವೇರಿಸಿದರು.

ಬಳಿಕ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ರಾತ್ರಿ ದೇವರ ವಿಶೇಷ ಪೂಜೆಗಾಗಿ ಲಡ್ಡು ತಯಾರಿಸಲು ಪರ್ಯಾಯ ಅದಮಾರು ಶ್ರೀಗಳು, ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥರು, ಕಾಣಿಯೂರು ಶ್ರೀಗಳು ಹಾಗೂ ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥರು ಚಾಲನೆ ನೀಡಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 10:30ರಿಂದ ದಾಮೋದರ ಸೇರಿಗಾರ್ ಮತ್ತು ಬಳಗದಿಂದ ಸ್ಯಾಕ್ಸೋಫೋನ್ ವಾದನ ಕಚೇರಿ ಹಾಗೂ ಪಾವನ ಬಿ.ಆಚಾರ್ಯ ರಿಂದ ವೀಣಾ ವಾದನ ಕಚೇರಿಗಳು ನಡೆದವು. ಸಂಜೆಯ ವೇಳೆ ಅದಮಾರು ಮಠದ ಯತಿ ದ್ವಯರು ಹಾಗೂ ಪಲಿಮಾರು ಮಠಾಧೀಶರಿಂದ ಪ್ರವಚನ ಮಾಲಿಕೆ ಕಾರ್ಯಕ್ರಮ ಹಾಗೂ ಸಮಾರೋಪಗಳು ನಡೆದವು.

ರಾತ್ರಿ 7:30ರಿಂದ ರಾಜಾಂಗಣದಲ್ಲಿ ಸಂಸ್ಕೃತ ಯಕ್ಷಗಾನ ತಾಳಮದ್ದಲೆ ‘ಶ್ರೀಕೃಷ್ಣಾವತರಣಮ್’, ಬಳಿಕ ಸಾರ್ಯಶಾಲೆಯಲ್ಲಿ ಮಧ್ಯರಾತ್ರಿಯ ವರಿಗೆ ಶಿವಮೊಗ್ಗದ ಕೆ.ಎಂ.ಮಣಿ ಮತ್ತು ಬಳಗದಿಂದ ನಾದಸ್ವರ ವಾದನ ಕಚೇರಿಯೂ ನಡೆದವು.

ಮಧ್ಯರಾತ್ರಿ ಕಳೆದು 12:16ಕ್ಕೆ ಸರಿಯಾಗಿ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥರು ಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ ಮಾಡಿದರು. ಬಳಿಕ ಕೃಷ್ಣನಿಗಾಗಿ ತಯಾರಿಸಿದ ಉಂಡೆ, ಚಕ್ಕುಲಿಯನ್ನು ನೆರೆದವರಿಗೆ ವಿತರಿಸಲಾಯಿತು.

ಶುಕ್ರವಾರ ಸಾಂಪ್ರದಾಯಿಕ ಮೊಸರುಕುಡಿಕೆ:  ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಮುಖ ಆಕರ್ಷಣೆಯಾದ ವಿಟ್ಲಪಿಂಡಿ ಅಥವಾ ಮೊಸರುಕುಡಿಕೆ ಅತ್ಯಂತ ಸರಳವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಮಠಕ್ಕೆ ಸಂಬಂಧಿಸಿದವರ ಭಾಗವಹಿಸು ವಿಕೆಯಲ್ಲಿ ಶುಕ್ರವಾರ ಅಪರಾಹ್ನ 3 ರಿಂದ ರಥಬೀದಿಯಲ್ಲಿ ನಡೆಯಲಿದೆ. ಇದಕ್ಕೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ. ಈ ವೇಳೆ ಉತ್ಸವ ಮೂರ್ತಿ ಯಾಗಿ ವಿಶೇಷವಾಗಿ ತಯಾರಿಸಿದ ಶ್ರೀಕೃಷ್ಣನ ಮೃಣ್ಮಯಿ ಮೂರ್ತಿಯನ್ನು ಬಳಸಲಾಗುತ್ತದೆ.

ನಾಳೆ ರಾಜಾಂಗಣದಲ್ಲಿ ಬೆಳಗ್ಗೆ 8 ರಿಂದ ಸತತವಾಗಿ ಪ್ರಶಾಂತ್ ಜೋಗಿ ಸಜೀಪ ಇವರ ನಾದಸ್ವರ ವಾದನ, ಮಾಧವ ಶಿವಪುರ ಇವರ ಮುಖವೀಣೆ, ಅಲೆವೂರು ರಾಘವ ಸೇರಿಗಾರ್, ಶ್ರೀನಿವಾಸ ಪೆರ್ಡೂರು, ಅಲೆವೂರು ಉದಯ ಸೇರಿಗಾರ್ ಇವರಿಂದ ನಾದಸ್ವರ ವಾದನ ಹಾಗೂ ಶಂತನು ಉಡುಪಿ ಇವರಿಂದ ಕೊಳಲು ವಾದನ ನಡೆಯಲಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಇಂದು ಶ್ರೀಕೃಷ್ಣ ಮಠವನ್ನು ವಿವಿಧ ಬಗೆಯ,. ಬಣ್ಣದ ಹೂವುಗಳಿಂದ ಸಿಂಗರಿಸಲಾಗಿತ್ತು.ಸಾರ್ವಜನಿಕರಿಗೆ ಪ್ರವೇಶ ನಿಷಿದ್ಧ ವಾಗಿದ್ದರಿಂದ ಕೇವಲ ಮಠಕ್ಕೆ ಸಂಬಂಧಿಸಿದವರು ಮಾತ್ರ ಇದರಲ್ಲಿ ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X