Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಫೇಲ್ ನಿಯೋಜನೆ ಭಾರತದ ಸಾರ್ವಭೌಮತ್ವಕ್ಕೆ...

ರಫೇಲ್ ನಿಯೋಜನೆ ಭಾರತದ ಸಾರ್ವಭೌಮತ್ವಕ್ಕೆ ಕಣ್ಣು ಹಾಕಿದವರಿಗೆ ಪ್ರಬಲ ಸಂದೇಶ: ರಾಜನಾಥ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ10 Sept 2020 9:53 PM IST
share
ರಫೇಲ್ ನಿಯೋಜನೆ ಭಾರತದ ಸಾರ್ವಭೌಮತ್ವಕ್ಕೆ ಕಣ್ಣು ಹಾಕಿದವರಿಗೆ ಪ್ರಬಲ ಸಂದೇಶ: ರಾಜನಾಥ್ ಸಿಂಗ್

ಹೊಸದಿಲ್ಲಿ, ಸೆ.10: ಪೂರ್ವ ಲಡಾಖ್‌ನ ಗಡಿಭಾಗದಲ್ಲಿ ಭಾರತ-ಚೀನಾ ಪಡೆಗಳ ಮಧ್ಯೆ ಉದ್ವಿಗ್ನತೆ ಮುಂದುವರಿದಿರುವಂತೆಯೇ, ಅಂಬಾಲಾ ವಾಯುನೆಲೆಯಲ್ಲಿ ಗುರುವಾರ ರಫೇಲ್ ಯುದ್ಧವಿಮಾನಗಳ ಪ್ರಥಮ ತಂಡವನ್ನು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ನಿಯೋಜಿಸಲಾಗಿದೆ.

ಬಳಿಕ ಮಾತನಾಡಿದ ರಾಜನಾಥ್ ಸಿಂಗ್, ನಮ್ಮ ಗಡಿಭಾಗದಲ್ಲಿ ಸೃಷ್ಟಿಸಲಾಗಿರುವ ಪರಿಸ್ಥಿತಿಯನ್ನು ಗಮನಿಸಿದರೆ ವಾಯುಪಡೆಗೆ ರಫೇಲ್ ಯುದ್ಧವಿಮಾನಗಳ ನಿಯೋಜನೆ ಅತ್ಯಂತ ಮಹತ್ವದ್ದಾಗಿದೆ. ಇದು ವಿಶ್ವಕ್ಕೆ, ಅದರಲ್ಲೂ ವಿಶೇಷವಾಗಿ ಭಾರತದ ಸಾರ್ವಭೌಮತ್ವದ ಮೇಲೆ ಕಣ್ಣು ಹಾಕಿದವರಿಗೆ ಪ್ರಬಲ ಸಂದೇಶವಾಗಿದೆ ಎಂದರು. ಅತ್ಯಾಧುನಿಕ ಸಮರ ವಿಮಾನವಾಗಿರುವ ರಫೇಲ್‌ನ ನಿಯೋಜನೆ ಗಡಿಭಾಗದಲ್ಲಿ ಅತ್ಯಂತ ನಿರ್ಣಾಯಕವಾಗಿದೆ. ವಾಯುಪಡೆಗೆ ರಫೇಲ್ ನಿಯೋಜನೆ ಭಾರತ-ಫ್ರಾನ್ಸ್ ಸಂಬಂಧವನ್ನು ಬಲಪಡಿಸಿದೆ. ಭಾರತಕ್ಕೆ ಎದುರಾಗಿರುವ ಭೌಗೋಳಿಕ ಸವಾಲನ್ನು ಪರಿಹರಿಸಲು ಎರಡೂ ಪ್ರಜಾತಾಂತ್ರಿಕ ದೇಶಗಳು ಒಗ್ಗೂಡಿ ಕಾರ್ಯನಿರ್ವಹಿಸಲಿವೆ ಎಂದು ಸಿಂಗ್ ಹೇಳಿದರು.

 ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ ಮಾತನಾಡಿ, ಭಾರತೀಯ ವಾಯುಪಡೆಗೆ ರಫೇಲ್ ನಿಯೋಜನೆ ದ್ವಿಪಕ್ಷೀಯ ರಕ್ಷಣಾ ಸಂಬಂಧದ ನೂತನ ಅಧ್ಯಾಯವಾಗಿದೆ. ಫ್ರಾನ್ಸ್‌ನ ಜಾಗತಿಕ ಮಿಲಿಟರಿ ಪೂರೈಕೆ ಸರಪಳಿಯೊಂದಿಗೆ ಭಾರತದ ರಕ್ಷಣಾ ಉದ್ದಿಮೆಯನ್ನು ಸಂಯೋಜಿಸಲು ಫ್ರಾನ್ಸ್ ಪೂರ್ಣ ಬದ್ಧವಾಗಿದೆ ಎಂದರು. ರಕ್ಷಣಾ ಸಿಬಂದಿ ಮುಖ್ಯಸ್ಥ ಜ ಬಿಪಿನ್ ರಾವತ್, ಏರ್‌ಚೀಫ್ ಮಾರ್ಷಲ್ ಆರ್‌ಕೆಎಸ್ ಭದೂರಿಯಾ, ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್, ಭಾರತದಲ್ಲಿ ಫ್ರಾನ್ಸ್‌ನ ರಾಯಭಾರಿ ಇಮಾನ್ಯುವೆಲ್ ಲೆನಾಯ್ನ್, ಏರ್ ಜನರಲ್ ಎರಿಕ್ ಅಟೆಲ್ಲೆಟ್, ಫ್ರಾನ್ಸ್ ವಾಯುಪಡೆಯ ಉಪ ಮುಖ್ಯಸ್ಥ, ದಸಾಲ್ಟ್ ಏವಿಯೇಷನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎರಿಕ್ ಟ್ರಾಪಿಯರ್, ಎಂಬಿಡಿಎ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎರಿಕ್ ಬೆರೆಂಜರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸರ್ವಧರ್ಮ ಪೂಜೆ, ಸಾಂಪ್ರದಾಯಿಕ ಜಲಫಿರಂಗಿ ಸ್ವಾಗತ, ವಾಯುಪಡೆ ವಿಮಾನಗಳಿಂದ ಆಕರ್ಷಕ ಕವಾಯತು ಕಾರ್ಯಕ್ರಮದ ಆಕರ್ಷಣೆಯಾಗಿತ್ತು. ಪ್ರಥಮ ತಂಡದಲ್ಲಿರುವ 5 ರಫೇಲ್ ಯುದ್ಧವಿಮಾನಗಳು ಭಾರತೀಯ ವಾಯುಪಡೆಯ ‘ಗೋಲ್ಡನ್ ಆ್ಯರೋಸ್’ ದಳದ ಭಾಗವಾಗಿರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X