Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರೀ ಮಳೆಗೆ ಮತ್ತೆ ಮಂಗಳೂರು ಜಲಾವೃತ

ಭಾರೀ ಮಳೆಗೆ ಮತ್ತೆ ಮಂಗಳೂರು ಜಲಾವೃತ

ವಾರ್ತಾಭಾರತಿವಾರ್ತಾಭಾರತಿ10 Sept 2020 10:19 PM IST
share
ಭಾರೀ ಮಳೆಗೆ ಮತ್ತೆ ಮಂಗಳೂರು ಜಲಾವೃತ

ಮಂಗಳೂರು, ಸೆ.10: ನಗರದಲ್ಲಿ ಬುಧವಾರ ರಾತ್ರಿಯಿಂದಲೇ ಆರಂಭವಾದ ಮಳೆಯು ಗುರುವಾರ ರಾತ್ರಿಯವರೆಗೂ ಮುಂದುವರಿದಿತ್ತು. ದಿನವಿಡೀ ಸುರಿದ ಭಾರೀ ಮಳೆಗೆ ಮತ್ತೆ ಜನತೆ ಬೆಚ್ಚಿ ಬಿದ್ದಿದ್ದಾರೆ. ನಗರದ ವಿವಿಧೆಡೆ ಕೃತಕ ನೆರೆಯಿಂದಾಗಿ, ಮನೆ ಅಂಗಡಿಗಳಿಗೆ ನೀರು ನುಗ್ಗಿ, ಜನ ಜೀನವ ಅಸ್ತವ್ಯಸ್ತವಾಗಿದೆ.

ಪ್ರತಿ ವರ್ಷ ಕೃತಕ ನೆರೆಯುಂಟಾಗುವ ಪ್ರದೇಶಗಳಲ್ಲೇ ಮತ್ತೆ ನೆರೆ ಬಂದಿದ್ದು, ಪಾಲಿಕೆ ಎರಡನೇ ಅವಧಿಯ ಹೂಳು ತೆಗೆಯದೆ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಟ್ಟಾರಚೌಕಿ, ಮಾಲೆಮಾರ್ ಪ್ರದೇಶದಲ್ಲಿ ನೆರೆಯಿಂದಾಗಿ ಅಂಗಡಿ, ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯಿಂದ ನೀರು ಉಕ್ಕಿ ರಸ್ತೆಯಲ್ಲಿ ಹರಿದಿದೆ. ಇದರಿಂದಾಗಿ ನಗರದಿಂದ ಹೆದ್ದಾರಿಗೆ ಪ್ರವೇಶಿಸುವ ರಸ್ತೆಯಲ್ಲಿ ಸಾಯಂಕಾಲ ವಾಹನಗಳು ಸಾಲುಗಟ್ಟಿ ನಿಂತು ಕೆಲಹೊತ್ತು ರಸ್ತೆ ಬ್ಲಾಕ್ ಉಂಟಾಗಿತ್ತು.

ಅಳಕೆ, ಕುದ್ರೋಳಿ, ಮಣ್ಣಗುಡ್ಡ, ಕೊಡಿಯಾಲ್‌ಬೈಲ್, ಜನತಾಡಿಲಕ್ಸ್ ಹೋಟೆಲ್, ಎಂಪಾಯರ್ ಮಾಲ್‌ಬಳಿ ಸೇರಿದಂತೆ ತಗ್ಗು ಪ್ರದೇಶದ ವಿವಿಧೆಡೆ ರಾಜಕಾಲುವೆ ನೀರು ರಸ್ತೆಗೆ ಬಂದಿದೆ. ಹಲವು ಮನೆಗಳ ಅಂಗಳದ ವರೆಗೆ ನೀರು ಬಂದು ಭೀತಿಯ ವಾತಾವರಣ ಉಂಟಾಯಿತು. ವಸತಿ ಸಮುಚ್ಚಯಗಳ ತಳ ಅಂತಸ್ತುಗಳಿಗೂ ನೀರು ನುಗ್ಗಿದೆ. ಕದ್ರಿ-ನಂತೂರು ಮುಖ್ಯರಸ್ತೆ ಬದಿಯಲ್ಲಿ ಕಲ್ಲಿನಿಂದ ಕಟ್ಟಿದ ಧರೆಯೊಂದು ಜರಿದು ಬಿದ್ದಿದೆ.

ಒಳರಸ್ತೆಗಳಲ್ಲಿ ಒಂಡೆರಡು ಅಡಿಗಳಷ್ಟು ಎತ್ತರ ನೀರು ನಿಂತು ಲಘುವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಜತೆಗೆ ಒಳಚರಂಡಿ ನೀರು ಉಕ್ಕೇರಿ ರಸ್ತೆಯಲ್ಲಿ ಹರಿದಿದ್ದು, ಕೆಲವು ಮನೆಗಳ ಶೌಚಗೃಹದಲ್ಲಿ ಚರಂಡಿ ನೀರು ಹೊರಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೂಳೂರು ಬಳಿ ಗುರುಪುರ ನದಿ ಸೇತುವೆ ಗುಂಡಿ ಬಿದ್ದು ವಾಹನಗಳು ನಿಧಾನವಾಗಿ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಹೆದ್ದಾರಿ ರಾತ್ರಿ ವೇಳೆ ಬ್ಲಾಕ್ ಆಗಿತ್ತು.

ಅಂಗಡಿ-ಮನೆಗಳಿಗೆ ನೀರು

ಮಂಗಳೂರು ನಗರದಲ್ಲಿ ಕೃತಕ ನೆರೆಗೆ ತಗ್ಗು ಪ್ರದೇಶಗಳಲ್ಲಿ ವಾಸವಾಗಿರುವ ಜನರು ಸಂಕಷ್ಟ ಅನುಭವಿಸಿದರು. ಅಳಕೆ, ಕುದ್ರೋಳಿ, ಕೊಟ್ಟಾರ ಚೌಕಿ, ಮಾಲೆಮಾರ್, ಮಣ್ಣಗುಡ್ಡ, ಕೊಡಿಯಾಲ್ ಬೈಲ್‌ನ ಜನತಾ ಡಿಲಕ್ಸ್ ಹೋಟೆಲ್, ಎಂಪಾಯರ್ ಮಾಲ್‌ಬಳಿ ಸೇರಿದಂತೆ ತಗ್ಗು ಪ್ರದೇಶದ ವಿವಿಧೆಡೆ ತೋಡುಗಳಲ್ಲಿ ನೀರು ಹರಿಯಲು ಸಾಧ್ಯವಾದೆ ರಸ್ತೆಗಳಲ್ಲಿ ಹರಿದಿದೆ. ಅಂಗಡಿ, ಮನೆಗಳಿಗೂ ನೀರು ನುಗ್ಗಿದೆ.

ಮಂಗಳೂರು, ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಭಾರಿ ಮಳೆ ಸುರಿದಿದೆ. ಬೆಳಗ್ಗಿನಿಂದ ಸಾಯಂಕಾಲದ ವರೆಗಿನ ಅಂಕಿ ಅಂಶದಂತೆ ಮೂಡುಬಿದಿರೆಯಲ್ಲಿ ಅತ್ಯಧಿಕ 69.5ಮಿ.ಮೀ., ಬೆಳ್ತಂಗಡಿ ನಾವೂರಿನಲ್ಲಿ 64.5 ಮಿ.ಮೀ. ಮಳೆ ಸುರಿದಿದೆ. ಗ್ರಾಮಾಂತರ ಭಾಗದಲ್ಲಿ ಮಳೆಯಿಂದಾಗಿ ತೋಡು, ತೊರೆಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಕೆಲವೆಡೆ ಪ್ರವಾಹ ಭೀತಿಯೂ ಉಂಟಾಗಿದೆ. ಸಮುದ್ರದಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X