ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು, ಸೆ.10: ಪ್ರಸಕ್ತ 2020-21ನೇ ಸಾಲಿನಲ್ಲಿ ರಾಜ್ಯ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿ ರಾಜ್ಯದ ಕ್ರೀಡಾ ಪೋಷಕರನ್ನು ಪ್ರೋತ್ಸಾಹಿಸಲು ‘ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ನೀಡಲಾಗುತ್ತಿದೆ. ಅರ್ಹ ಕ್ರೀಡಾ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ ಐದು ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಿರುತ್ತಾರೆ.
ಅರ್ಜಿ ಸಲ್ಲಿಸಲಿಚ್ಚಿಸುವ ಕ್ರೀಡಾ ಪೋಷಕರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಕಚೇರಿಯಿಂದ ಪಡೆದುಕೊಂಡು ಭರ್ತಿಮಾಡಿ ದಾಖಲೆಗಳೊಂದಿಗೆ ಸೆ.15ರೊಳಗೆ ಮಂಗಳಾ ಕ್ರೀಡಾಂಗಣ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824- 2451264ನ್ನು ಸಂಪರ್ಕಿಸುವಂತೆ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story





