Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ:...

ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ: ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ವಾರ್ತಾಭಾರತಿವಾರ್ತಾಭಾರತಿ11 Sept 2020 6:36 PM IST
share
ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ: ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ, ಸೆ.11: ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಜಗತ್ತಿನಲ್ಲಿ ಸಮಸ್ಯೆಗಳಿಲ್ಲದವರು ಯಾರು ಇಲ್ಲ. ಪ್ರತಿಯೊಬ್ಬರಿಗೂ ಕೂಡ ಸಮಸ್ಯೆ ಎನ್ನುವುದು ಇದ್ದೇ ಇರುತ್ತದೆ. ಆದ್ದರಿಂದ ಆತ್ಮಹತ್ಯೆಗೆ ಶರಣಾಗದೇ ಸೂಕ್ತ ಪರಿಹಾರ ಕಂಡುಕೊಳ್ಳಲು ಮೊದಲು ಪ್ರಯತ್ನಿಸಬೇಕು, ನಿಮ್ಮ ನಿಮ್ಮ ಆಪ್ತರೊಂದಿಗೆ ಅಥವಾ ಹಿರಿಯರೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಅವರ ಸಲಹೆ- ಸೂಚನೆಗಳನ್ನು ಪಡೆದು ನಡೆದುಕೊಂಡಲ್ಲಿ ಆತ್ಮಹತ್ಯೆಯಂತಹ ನಕಾರಾತ್ಮಕ ಯೋಚನೆಯಿಂದ ದೂರ ಬರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಾವಣಗೆರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ದಾವಣಗೆರೆ ಮತ್ತು ಮನೋವೈದ್ಯಕೀಯ ವಿಭಾಗ ಚಿಗಟೇರಿ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಜಿಲ್ಲೆಯ ವೈದ್ಯಾಧಿಕಾರಿಗಳಿಗೆ ವಿಶ್ವ ಆತ್ಮಹತ್ಯೆ ತಡೆ ದಿನ ಕುರಿತು ಕಾರ್ಯಗಾರವನ್ನು ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜೆ.ಜೆ.ಎಂ ವೈದ್ಯಕೀಯ ಕಾಲೇಜಿನ ಹಿರಿಯ ಪ್ರಾಧ್ಯಾಪಕರು ಮತ್ತು ಮನೋವೈದ್ಯ ಡಾ. ಸುದರ್ಶನ್ ಸಿ. ವೈ. ಮಾತನಾಡಿ, ಆತ್ಮಹತ್ಯೆ ಎಂದರೆ ವ್ಯಕ್ತಿಯು ತನ್ನನ್ನು ತಾನೇ ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿಕೊಳ್ಳುವುದಾಗಿದೆ. ಹಾಗೂ ಆತ್ಮಹತ್ಯೆಯು ಖಿನ್ನತೆ ಎಂಬ ಮಾನಸಿಕ ಖಾಯಿಲೆಯ ಲಕ್ಷಣವಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಗೆ 25 ಬಾರಿ ಆತ್ಮಹತ್ಯೆ ಆಲೋಚನೆ ಬರುತ್ತದೆ. ಪ್ರಸ್ತುತವಾಗಿ ಇದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ, ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರತಿ 40 ಸೆಕೆಂಡಿಗೆ ಒಂದು ಆತ್ಮಹತ್ಯೆ ಜರುಗುತ್ತಿದೆ. ಭಾರತ ದೇಶದಲ್ಲಿ ಪ್ರತಿ ವರ್ಷ 90 ಸಾವಿರ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮತ್ತು ಆತ್ಮಹತ್ಯೆಗೆ ಶರಣಾಗುತ್ತಿರುವವರ ವಯಸ್ಸು 15 ರಿಂದ 29 ವರ್ಷದ ವಯೋಮಾನದವರಾಗಿದ್ದಾರೆ. ಜೊತೆಗೆ ಈ ರೀತಿಯಾದ ಆತ್ಮಹತ್ಯೆ ಪ್ರವೃತ್ತಿಯು ದಾರಿಯನ್ನು ಹಿಡಿಯುವುದಕ್ಕೆ ನಾನಾ ರೀತಿಯ ಕಾರಣಗಳಿವೆ. ಮಾನಸಿಕ ಖಾಯಿಲೆಗಳಿಂದ, ಮೆದುಳಿನಲ್ಲಾಗುವ ರಾಸಾಯನಿಕ ಬದಲಾವಣೆಗಳಿಂದ, ನಕಾರಾತ್ಮಕ ಆಲೋಚನೆಗಳು, ಹಠಾತ್ ನಿರ್ಧಾರದಿಂದ, ಮಾದಕ & ಮದ್ಯ ವ್ಯಸನ ಸೇವನೆಯಿಂದ, ಸಾಮಾಜಿಕ ಸಮಸ್ಯೆಗಳು ಅಥವಾ ಕೌಟುಂಬಿಕದಲ್ಲಿನ ಒತ್ತಡಕಾರಕಾಂಶಗಳು, ಇನ್ನಿತರ ಹಲವಾರು ಕಾರಣಗಳಿಂದ ಪ್ರೇರಿತರಾಗುತ್ತಾರೆ ಮತ್ತು ಕೋವಿಡ್-19 ಸಮಯದಲ್ಲಿಯೂ ಕೂಡ ಆತ್ಮಹತ್ಯೆಗೆ ಒಳಾಗಾಗುತ್ತಿದ್ದಾರೆ ಎಂದರು.

ಇದರಿಂದ ಹೊರಬರುವವುದು ನಕಾರಾತ್ಮಕ ಅಲೋಚನೆಗಳು ಬಂದರೆ ಆಪ್ತರೊಡನೆ ಸಮಸ್ಯೆಗಳನ್ನು ಹಂಚಿಕೊಳ್ಳುವುದು, ಅಥವಾ ಕುಟುಂಬದೊಡನೆ ಬೆರೆಯುವುದು, ದೈನಂದಿನವಾಗಿ ಧ್ಯಾನ, ಪ್ರಾಣಯಾಮ, ವ್ಯಾಯಾಮಗಳ ಅಭ್ಯಾಸ, ಹಾಗೂ ಮನೋರಂಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಥವಾ ಗುಣಮಟ್ಟದ ಔಷಧಿ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆಯಿಂದ ಆತ್ಮಹತ್ಯೆಯನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿಗಳಾದ ಪೂಜಾರ್ ವೀರಮಲ್ಲಪ್ಪ, ಮನೋವೈದ್ಯ ಡಾ. ಗಂಗಂ ಸಿದ್ದಾರೆಡ್ಡಿ, ತಾಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ್, ಮನಶಾಸ್ತ್ರಜ್ಞ ಎಸ್. ವಿಜಯಕುಮಾರ್, ಸೋಷಿಯಲ್ ವರ್ಕರ್ ಸಂತೋಷ್‍ ಕುಮಾರ್, ನರ್ಸಿಂಗ್ ಆಫೀಸರ್ ಗಿರೀಶ್ ನಾಯ್ಕ್ ಎಸ್.ವೈ. ಸೇರಿ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X