Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೀದಿಯಲ್ಲಿ ನಿಂತು ಸುಳ್ಳಾರೋಪ ಮಾಡುವ...

ಬೀದಿಯಲ್ಲಿ ನಿಂತು ಸುಳ್ಳಾರೋಪ ಮಾಡುವ ಸಚಿವರು, ಪಕ್ಷದ ನಾಯಕರ ಬಾಯಿ ಮುಚ್ಚಿಸಿ: ಬಿಎಸ್‌ವೈಗೆ ಸಿದ್ದರಾಮಯ್ಯ ಆಗ್ರಹ

ಡ್ರಗ್ಸ್ ದಂಧೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ11 Sept 2020 7:44 PM IST
share
ಬೀದಿಯಲ್ಲಿ ನಿಂತು ಸುಳ್ಳಾರೋಪ ಮಾಡುವ ಸಚಿವರು, ಪಕ್ಷದ ನಾಯಕರ ಬಾಯಿ ಮುಚ್ಚಿಸಿ: ಬಿಎಸ್‌ವೈಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಸೆ.11: ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ ಬಿಜೆಪಿ ಸರಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೋನ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಕುಟುಕಿದ್ದಾರೆ.

ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು ರಾಜ್ಯ ಬಿಜೆಪಿ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ ಮುಖ್ಯಮಂತ್ರಿ ಅವರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು ಎಂದು ಅವರು ಅಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಅವರೇ, ಡಿ.ಜೆ.ಹಳ್ಳಿ ಗಲಭೆ ಬಗ್ಗೆ ನಿಮ್ಮದೇ ತನಿಖೆಯ ಪ್ರಹಸನ ಮಾಡಿ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರಿದ್ದೀರಿ, ಈಗ ಡ್ರಗ್ಸ್ ಹಗರಣದ ತನಿಖೆಯ ವಿವರಗಳನ್ನು ಸೋರಿಕೆಯಾಗಲು ಬಿಟ್ಟು ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ. ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಅವರೇ, ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ ಎಂದು ಅವರು ಹೇಳಿದ್ದಾರೆ.

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಫೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ. ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ. ಆದರೆ ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ವಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X