ದ.ಕ.ಜಿಲ್ಲೆ : ಒಂದೇ ದಿನ 446 ಮಂದಿಗೆ ಕೊರೋನ ಸೋಂಕು, ಕೋವಿಡ್ ಮತ್ತೆ ಏಳು ಬಲಿ

ಮಂಗಳೂರು, ಸೆ.11: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದೆ. ಜಿಲ್ಲೆಯಲ್ಲಿ ಶುಕ್ರವಾರ 446 ಮಂದಿಗೆ ಸೋಂಕು ತಗುಲಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಮೃತರ ಪೈಕಿ ಮಂಗಳೂರು ತಾಲೂಕಿನಲ್ಲಿ ಮೂವರು ಸೇರಿದಂತೆ ಹೊರಜಿಲ್ಲೆಯ ನಾಲ್ವರು ಇದ್ದಾರೆ. ಮೃತರೆಲ್ಲ ವಿವಿಧ ರೋಗಗಳಿಂದ ಬಳಲುತ್ತಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 434ಕ್ಕೆ ಏರಿಕೆಯಾಗಿದೆ.
446 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ತೀರಾ ಗಣನೀಯವಾಗಿ ಏರಿಕೆಯಾಗುತ್ತಿರುವುದು ಜಿಲ್ಲೆಯ ಜನತೆಯನ್ನು ಮತ್ತೆ ಆತಂಕಕೆ ಈಡುಮಾಡಿದೆ.ಒಂದೇ ದಿನ 446 ಮಂದಿಯಲ್ಲಿ ಪಾಸಿಟಿವ್ ವರದಿ ಬಂದಿದೆ. ಸಾಮಾನ್ಯ ಶೀತ ಲಕ್ಷಣ-177, ಸೋಂಕಿತರ ಸಂಪರ್ಕಿತರು-170, ಸೋಂಕು ನಿಗೂಢ ಪ್ರಕರಣ-88, ತೀವ್ರ ಉಸಿರಾಟ ತೊಂದರೆಯ 11 ಮಂದಿಗೆ ಸೋಂಕು ತಗುಲಿದೆ.
ಮಂಗಳೂರು ತಾಲೂಕಿನಲ್ಲಿ 248 ಮಂದಿ ಸೋಂಕು ತಗುಲಿದೆ. ಇನ್ನು, ಬಂಟ್ವಾಳ-85, ಪುತ್ತೂರು-13, ಸುಳ್ಯ-23, ಬೆಳ್ತಂಗಡಿ-52, ಹೊರ ಜಿಲ್ಲೆಯ 25 ಮಂದಿಗೆ ಸೋಂಕು ತಗುಲಿದೆ. 212 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿದ್ದರೆ, 234 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,558ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ 44, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 153 ಮಂದಿ ಸೇರಿದಂತೆ 197 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನ ಮುಕ್ತರಾದವರ ಸಂಖ್ಯೆ 12,609ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 3,515 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.







