Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಡ್ರಗ್ಸ್' ಆರೋಪ ಸಾಬೀತಾದರೆ ನನ್ನ...

'ಡ್ರಗ್ಸ್' ಆರೋಪ ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿ ಸರಕಾರಕ್ಕೆ ಬರೆದುಕೊಡುತ್ತೇನೆ: ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ11 Sept 2020 9:21 PM IST
share
ಡ್ರಗ್ಸ್ ಆರೋಪ ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿ ಸರಕಾರಕ್ಕೆ ಬರೆದುಕೊಡುತ್ತೇನೆ: ಝಮೀರ್ ಅಹ್ಮದ್

ಬೆಂಗಳೂರು, ಸೆ.11: ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ಒತ್ತಾಯಿಸುತ್ತೇನೆ ಎಂದು ಮಾಜಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಪ್ರಶಾಂತ್ ಸಂಬರಗಿ ಎಂಬಾತನ ಸುಳ್ಳು ಆರೋಪಗಳ ಬಗ್ಗೆ ಬೆಂಗಳೂರಿನ 24ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದೇನೆ. ದೂರಿನಂತೆ ಐಪಿಸಿ ಸೆಕ್ಷನ್ 120(ಬಿ), 504, 463, 465, 506 ಸೆಕ್ಷನ್‍ಗಳ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆಗೆ ಚಾಮರಾಜಪೇಟೆ ಠಾಣೆಯ ಪೊಲೀಸರಿಗೆ ನ್ಯಾಯಾಲಯ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

2019ರ ಜೂನ್ 8ರಂದು ನಾನು ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್‍ಗಳಿರಬೇಕಲ್ಲ? ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳಿರಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೊ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದುದರಿಂದ, ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ ಎಂದು ಝಮೀರ್ ಅಹ್ಮದ್ ಖಾನ್ ಒತ್ತಾಯಿಸಿದ್ದಾರೆ.

ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ನಾನು ರಾಜಕೀಯದಲ್ಲಿರುವ ವ್ಯಕ್ತಿ, ಸುಳ್ಳು ಆರೋಪಗಳು, ಚಾರಿತ್ರ್ಯ ಹರಣದ ಪ್ರಯತ್ನಗಳು ನನಗೆ ಹೊಸತೇನಲ್ಲ. ಅವೆಲ್ಲವನ್ನು ಜನಾಶೀರ್ವಾದದ ಬಲದಿಂದ ಎದುರಿಸುತ್ತಾ ಬಂದಿದ್ದೇನೆ. ನಾನು ಏನೆನ್ನುವುದು ನಾನು ನಂಬಿರುವ ಜನ ಮತ್ತು ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X