Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ನವೋದ್ಯಮ ರ‍್ಯಾಂಕಿಂಗ್‌’ನಲ್ಲಿ ಕರ್ನಾಟಕ...

‘ನವೋದ್ಯಮ ರ‍್ಯಾಂಕಿಂಗ್‌’ನಲ್ಲಿ ಕರ್ನಾಟಕ ಅಗ್ರಗಣ್ಯ ಸಾಧಕ: ಡಿಸಿಎಂ ಅಶ್ವತ್ಥ ನಾರಾಯಣ

ಕೇಂದ್ರ ಸರಕಾರದ ರ‍್ಯಾಂಕಿಂಗ್‌ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ11 Sept 2020 10:05 PM IST
share
‘ನವೋದ್ಯಮ ರ‍್ಯಾಂಕಿಂಗ್‌’ನಲ್ಲಿ ಕರ್ನಾಟಕ ಅಗ್ರಗಣ್ಯ ಸಾಧಕ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಸೆ.11: ರಾಜ್ಯಗಳ ‘ನವೋದ್ಯಮ ರ‍್ಯಾಂಕಿಂಗ್‌-2019’ರಲ್ಲಿ ಕರ್ನಾಟಕದ ಎಲೆಕ್ಟ್ರಾನಿಕ್ಟ್, ಐಟಿ/ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಕೇಂದ್ರ ಸರಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ಹಾಗೂ ದೇಶೀಯ ವಹಿವಾಟು ಉತ್ತೇಜನಾ ಇಲಾಖೆಯಿಂದ ‘ಅಗ್ರಗಣ್ಯ ಸಾಧಕ’ ಗೌರವಕ್ಕೆ ಪಾತ್ರವಾಗಿದೆ. ಈ ಮೂಲಕ ಇಲಾಖೆಯು ಸತತ ಎರಡನೇ ಸಲ ಈ ಗೌರವಕ್ಕೆ ಪಾತ್ರವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಈ ರ‍್ಯಾಂಕಿಂಗ್‌ ಅನ್ನು 7 ಮೂಲಭೂತ ಅಂಶಗಳು ಹಾಗೂ 30 ಕ್ರಿಯಾ ಅಂಶಗಳ ರೂಪುರೇಷೆ ಆಧಾರದ ಮೇಲೆ ನಿರ್ಧರಿಸಲಾಗಿದೆ. ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ನೀಡುವ ಸಾಂಸ್ಥಿಕ ಬೆಂಬಲ, ನಿಬಂಧನೆಗಳ ಸರಳೀಕರಣ, ಪ್ರೋತ್ಸಾಹಕ ಕ್ರಮಗಳು, ಪರಿಪೋಷಕ ಬೆಂಬಲ, ಬೀಜ ಧನ ನೆರವು, ಶೋಧನಾ ನಿಧಿ ನೆರವು, ಜಾಗೃತಿ ಮತ್ತು ಜನಸಂಪರ್ಕ ಕಾರ್ಯಕ್ರಮಗಳು ಮೂಲಭೂತ ಅಂಶಗಳಲ್ಲಿ ಸೇರಿವೆ ಎಂದು ಅವರು ಹೇಳಿದ್ದಾರೆ.

2018ರ ಮೇ 1ರಿಂದ 2019ರ ಸೆಪ್ಟೆಂಬರ್ 30ರ ಅವಧಿಯ ನಡುವೆ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಕೈಗೊಂಡ ಕ್ರಮಗಳನ್ನು ಪರಿಗಣನೆಗೆ ತೆಗೆದುಕೊಂಡು ರ‍್ಯಾಂಕಿಂಗ್‌ ಪ್ರಕಟಿಸಲಾಗಿದೆ. ನವೋದ್ಯಮಗಳ ಪರ್ಯಾವರಣವನ್ನು ಬಲಗೊಳಿಸುವ ದಿಸೆಯಲ್ಲಿ ರಚನಾತ್ಮಕ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಪ್ರೋತ್ಸಾಹಿಸುವುದು ಈ ರ‍್ಯಾಂಕಿಂಗ್‌‍ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯವು ಸಾಂಸ್ಥಿಕ ನಾಯಕತ್ವ, ಪ್ರೋತ್ಸಾಹಕ ಕ್ರಮಗಳು, ನಿಯಂತ್ರಕ ಕ್ರಮಗಳ ಬದಲಾವಣೆ ಹಾಗೂ ಪರಿಪೋಷಕ ವಲಯ (ಇನ್ ಕ್ಯುಬೇಷನ್ ಹಬ್) ನಿರ್ಮಾಣದಲ್ಲಿ ಮುಂಚೂಣಿಯಲ್ಲಿದೆ ಎಂಬುದನ್ನು ಸೂಚಿಸುತ್ತದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ.

ನವೋದ್ಯಮಗಳಿಗೆ ಒತ್ತಾಸೆ ನೀಡಲು ರಾಜ್ಯ ಸರಕಾರವು ರಚನಾತ್ಮಕ ಕ್ರಮಗಳನ್ನು ಕೈಗೊಂಡಿದೆ. ಹೊಸ ಹಾಗೂ ಪ್ರಭಾವಿ ತಾಂತ್ರಿಕತೆಗಳಿಗೆ ನೆರವು ನೀಡಲು ಅನ್ವೇಷಣಾ ಪೂರಕ ನೀತಿಗಳನ್ನು ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೊಸ ತಲೆಮಾರಿನ ತಾಂತ್ರಿಕತೆಗಳಿಗೆ ಸಂಬಂಧಪಟ್ಟಂತೆ ನವೋದ್ಯಮಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಪರಿಶೀಲಿಸಲು ನಿಯಂತ್ರಕ ಸಮಿತಿ ರಚಿಸಲಾಗಿದೆ. ನವೋದ್ಯಮಗಳಿಗಾಗಿ ಸಮಗ್ರ ಉದ್ಯಮಶೀಲತಾ ವೇದಿಕೆ ಕಲ್ಪಿಸುವ ಸಲುವಾಗಿ “ಎಲಿವೇಟ್” ಎಂಬ ವಿಶಿಷ್ಟ ಪರಿಕಲ್ಪನೆಯನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದಲ್ಲಿ ನವೋದ್ಯಮಗಳ ಬೆಳವಣಿಗೆಯನ್ನು ಪೋಷಿಸಲು ಹಾಗೂ ಅದಕ್ಕೆ ವೇಗ ನೀಡಲು ಸರಕಾರವು ಪ್ರಯತ್ನಗಳನ್ನು ಮುಂದುವರಿಸಲಿದೆ. ಡಿಪಿಐಐಟಿಯ ರ‍್ಯಾಂಕಿಂಗ್‌ ರೂಪುರೇಷೆಯು ನವೋದ್ಯಮಿಗಳಿಗೆ ಸಮರ್ಥ ಕ್ಷೇತ್ರಗಳನ್ನು ಶೋಧಿಸಲು ಹಾಗೂ ತಳಮಟ್ಟದಲ್ಲಿ ಜನರಿಗೆ ತಲುಪುವಂತಹ ಅನ್ವೇಷಣೆಗಳನ್ನು ತೊಡಗಲು ಪ್ರೇರಕವಾಗಿದೆ ಎಂದು ಅಶ್ವತ್ಥ ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X