Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅರಣ್ಯ ಇಲಾಖೆಯ ಸದೃಢತೆಗೆ ಹೆಚ್ಚುವರಿ...

ಅರಣ್ಯ ಇಲಾಖೆಯ ಸದೃಢತೆಗೆ ಹೆಚ್ಚುವರಿ ಸಿಬ್ಬಂದಿ ನೇಮಕ: ಸಚಿವ ಆನಂದ್‍ ಸಿಂಗ್

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ11 Sept 2020 11:24 PM IST
share
ಅರಣ್ಯ ಇಲಾಖೆಯ ಸದೃಢತೆಗೆ ಹೆಚ್ಚುವರಿ ಸಿಬ್ಬಂದಿ ನೇಮಕ: ಸಚಿವ ಆನಂದ್‍ ಸಿಂಗ್

ಬೆಂಗಳೂರು, ಸೆ.11: ರಾಜ್ಯದ ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯನ್ನು ಇನ್ನಷ್ಟು ಸದೃಢಗೊಳಿಸಲು ವಿವಿಧ ಹಂತದ ಕ್ಷೇತ್ರ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸಿಕೊಳ್ಳಲು ಸರಕಾರ ಕ್ರಮ ಕೈಗೊಂಡಿದೆ ಎಂದು ಅರಣ್ಯ ಸಚಿವ ಆನಂದ್‍ ಸಿಂಗ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಅರಣ್ಯ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ಒಟ್ಟು 3,085 ವಿವಿಧ ದರ್ಜೆಯ ಕ್ಷೇತ್ರ ಸಿಬ್ಬಂದಿ ಮತ್ತು ಅಧಿಕಾರಿ ಹುದ್ದೆಗಳನ್ನು 2019-20ನೇ ಸಾಲಿನಿಂದ ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಅರಣ್ಯ ಇಲಾಖೆಯಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಅಧಿಕಾರಿಗಳ ಮನೋಸ್ಥೈರ್ಯ ಮತ್ತು ಸ್ಪೂರ್ತಿಯನ್ನು ಹೆಚ್ಚಿಸುವ ಸಲುವಾಗಿ ಪ್ರತಿ ವರ್ಷ ಅಸಾಮಾನ್ಯ ಸೇವೆ ಸಲ್ಲಿಸಿದ ದಕ್ಷ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಗುರುತಿಸಿ ಅವರಿಗೆ ಸರಕಾರದಿಂದ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಗುವುದೆಂದು ಅವರು ಹೇಳಿದರು.

ಅರಣ್ಯ ಸಿಬ್ಬಂದಿಗಳು ಕರ್ತವ್ಯದಲ್ಲಿರುವಾಗ ಮರಣ ಹೊಂದಿದರೆ ಈ ಹಿಂದೆ ನೀಡಲಾಗುತ್ತಿದ್ದ 20 ಲಕ್ಷ ರೂ.ಪರಿಹಾರ ಮೊತ್ತವನ್ನು 30 ಲಕ್ಷ ರೂ.ಗೆ ಏರಿಸಲಾಗಿದೆ. ಹಾಗೂ ಶಾಶ್ವತ ಅಂಗವಿಕಲತೆ ಉಂಟಾದರೆ 10 ಲಕ್ಷ ರೂ. ಮತ್ತು ಗಂಭೀರ ಸ್ವರೂಪದ ಗಾಯ ಉಂಟಾದಲ್ಲಿ 2 ಲಕ್ಷ ರೂ.ಪರಿಹಾರ ಮೊತ್ತವನ್ನು ನೀಡಲಾಗುತ್ತದೆ. ಹಾಗೂ 10 ಲಕ್ಷ ರೂ.ವಿಶೇಷ ಗುಂಪು ವಿಮಾ ಮೊತ್ತ ಹಾಗೂ ಹಂಗಾಮಿ ನೌಕರರಿಗೆ ವಿಶೇಷ ಗುಂಪು ವಿಮಾ ಮೊತ್ತ 5 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಹುತಾತ್ಮ ಅರಣ್ಯ ಸಿಬ್ಬಂದಿಗಳ ಕುಟುಂಬಕ್ಕೆ ನೆರವಾಗಲು ಉದ್ದೇಶದಿಂದ ಹುತಾತ್ಮರ ದಿನಾಚರಣೆ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯಲ್ಲಿ ಸಂಗ್ರಹವಾಗುವ ಹಣವನ್ನು ಅರಣ್ಯ ಹುತಾತ್ಮರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ ಹಾಗೂ ಇತರೆ ಅರಣ್ಯ ಹುತಾತ್ಮರ ಅವಲಂಬಿತರ ಏಳ್ಗೆಗಾಗಿ ಬಳಸಲಾಗುವುದೆಂದು ಅವರು ತಿಳಿಸಿದರು.

ಅಭಿವೃದ್ಧಿ ವಿಚಾರಕ್ಕೆ ಬಂದಾಗ ಅರಣ್ಯಾಧಿಕಾರಿಗಳು ಅಡ್ಡಿಯಾಗುತ್ತಾರೆ ಎಂಬ ಕಲ್ಪನೆ ಆನೇಕರಲ್ಲಿದೆ. ಆದರೆ, ಅರಣ್ಯದೊಂದಿಗೆ ಆಪ್ತ ಸಂಬಂಧವನ್ನು ಇಟ್ಟುಕೊಂಡಿರುವ ಅಧಿಕಾರಿಗಳು ಅರಣ್ಯವನ್ನು ಉಳಿಸುವ ಮನಸ್ಥಿತಿ ಹೊಂದಿರುತ್ತಾರೆಯೇ ವಿನಃ ಅಭಿವೃದ್ಧಿಗೆ ಅಡ್ಡಿ ಮಾಡುವ ಉದ್ದೇಶವಿರುವುದಿಲ್ಲ. ಮುಂದಿನ ದಿನಗಳಲ್ಲಿ ಅರಣ್ಯ ರಕ್ಷಣೆಯ ಜತೆಗೆ ಅಭಿವೃದ್ದಿಗೂ ಆದ್ಯತೆ ನೀಡಿ ಇತರೆ ಇಲಾಖೆಗಳಿಗೆ ಸಹಕಾರ ನೀಡಬೇಕೆಂದು ಅವರು ಅರಣ್ಯಾಧಿಕಾರಿಗಳಲ್ಲಿ ಮನವಿ ಮಾಡಿದರು. ಇದೇ ವೇಳೆ 2002ರಿಂದ 2020ರವರೆಗೆ ಹುತಾತ್ಮರಾದ ಅರಣ್ಯ ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X