Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಾಲಿನ ಪೂರಕ ಉತ್ಪನ್ನಗಳಿಂದ ರೈತರಿಗೆ...

ಹಾಲಿನ ಪೂರಕ ಉತ್ಪನ್ನಗಳಿಂದ ರೈತರಿಗೆ ಲಾಭ: ಸಚಿವ ಎಸ್.ಟಿ. ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ11 Sept 2020 11:33 PM IST
share
ಹಾಲಿನ ಪೂರಕ ಉತ್ಪನ್ನಗಳಿಂದ ರೈತರಿಗೆ ಲಾಭ: ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು, ಸೆ. 11: ಹಾಲಿನ ಜೊತೆಗೆ ಹಾಲಿನ ಪೂರಕ ಉತ್ಪನ್ನಗಳನ್ನು ಉತ್ಪಾದಿಸಲು ಹೆಚ್ಚಿನ ಒತ್ತು ನೀಡುವುದರಿಂದ ರೈತರಿಗೆ ಅಧಿಕ ಲಾಭ ದೊರೆತು ಅವರ ಏಳಿಗೆಗೆ ಸಹಾಯಕವಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿರುವ ನೂತನ ಹಾಲು ಸಂಸ್ಕರಣಾ ಮತ್ತು ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹೈನುಗಾರಿಕೆ ಉತ್ಪನ್ನಗಳನ್ನು ಹೆಚ್ಚಾಗಿ ಉತ್ಪಾದಿಸುವುದರಿಂದ ರೈತರಿಗೆ ಅಧಿಕ ಆದಾಯ ಸಿಗುತ್ತದೆ. ಹಾಲಿನ ಜೊತೆಗೆ ಅದರ ಉಪ ಉತ್ಪನ್ನಗಳು ಹಾಲು ಉತ್ಪಾದಕರಿಗೆ ಅಧಿಕ ವರಮಾನ ತಂದುಕೊಡುವಲ್ಲಿ ನೆರವಾಗಲಿದೆ. ಇದು ರೈತರ ವೈಯಕ್ತಿಕ ಏಳಿಗೆಗೂ ಸಹಾಯಕ ಎಂದು ಅಭಿಪ್ರಾಯಪಟ್ಟರು.

ನಂ.1 ಘಟಕ: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಕನ್ನಮಂಗಲದಲ್ಲಿ ಒಟ್ಟು 125 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಹಾಲು,ಸಂಸ್ಕರಣಾ ಮತ್ತು ಹಾಲಿನ ಪುಡಿ ಉತ್ಪಾದಿಸುವ ಘಟಕ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿದೆ. ಸದ್ಯಕ್ಕೆ ಇಡೀ ದೇಶದಲ್ಲೇ ಅತ್ಯುತ್ತಮ ಮತ್ತು ನಂಬರ್ ಒನ್ ಹಾಲಿನ ಪುಡಿ ಘಟಕ ಎನಿಸಿದೆ ಎಂದು ಅವರು ತಿಳಿಸಿದರು.

2ನೆ ಸ್ಥಾನ: ದೇಶದಲ್ಲಿ ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಎರಡನೆ ಸ್ಥಾನದಲ್ಲಿದೆ. ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿದೆ. ಇಲ್ಲಿರುವ ಘಟಕವು ಹಾಲನ್ನು ಪೌಡರ್ ಆಗಿ ಪರಿವರ್ತಿಸುವ ದೊಡ್ಡ ಘಟಕವಾಗಿದೆ. ರಾಜ್ಯದಲ್ಲೇ ಅಧಿಕ ಪ್ರಮಾಣದಲ್ಲಿ ಹಾಲಿನ ಪುಡಿಯನ್ನು ಇಲ್ಲಿ ಉತ್ಪಾದಿಸಲಾಗುತ್ತಿದೆ. ಈ ಘಟಕದಲ್ಲಿ ಉತ್ಪಾದನೆಯಾಗುವ ಹಾಲಿನ ಪುಡಿಗೆ ಪ್ರೀಮಿಯಂ ಬೆಲೆ ಇದೆ ಎಂದು ಸೋಮಶೇಖರ್ ಅವರು ಮಾಹಿತಿ ನೀಡಿದರು.

ಹೊರ ರಾಜ್ಯಕ್ಕಿಲ್ಲ ಹಾಲು: ಕೋವಿಡ್-19 ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಹಾಲಿನ ಸಬರಾಜು ಸ್ಥಗಿತಗೊಂಡಿದೆ. ಅಲ್ಲದೆ, ಸಣ್ಣ ಪುಟ್ಟ ಕಾಫಿ-ಟೀ ಅಂಗಡಿಗಳು ಮುಚ್ಚಿವೆ. ಹೀಗಾಗಿ ರಾಜ್ಯಲ್ಲಿ ಉತ್ಪಾದನೆಯಾಗುವ ಹಾಲನ್ನು ಪೌಡರ್ ಆಗಿ ಪರಿವರ್ತಿಸಿ ಶೇಖರಿಸಿ ಇಟ್ಟುಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಸಧ್ಯಕ್ಕೆ ಹಾಲಿನ ಪುಡಿ ದಾಸ್ತಾನಿನ ಪ್ರಮಾಣ ಅಧಿಕವಾಗಿದೆ. ಒಟ್ಟಾರೆಯಾಗಿ ಸುಮಾರು 28 ಲಕ್ಷ ಮೆಟ್ರಿಕ್ ಟನ್ ನಷ್ಟು ದಾಸ್ತಾನು ಇರುವುದಾಗಿ ಅವರು ತಿಳಿಸಿದರು.

ಹಾಲು ಖರೀದಿ: ಕೋವಿಡ್ ಸಂದರ್ಭದಲ್ಲಿ ರಾಜ್ಯದ 8.5 ಲಕ್ಷ ಹೈನುಗಾರರಿಂದ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಸುಮಾರು 79 ಕೋಟಿ ರೂ.ವೆಚ್ಚದಲ್ಲಿ ಅವರುಗಳಿಂದ ಹಾಲನ್ನು ಖರೀದಿಸಿದೆ. ಹೀಗೆ ಖರೀದಿಸಿರುವ ಹಾಲನ್ನು ರಾಜ್ಯದಲ್ಲಿ ನಗರಸಭೆ ಮತ್ತು ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉಚಿತವಾಗಿ ಹಂಚಲಾಗಿದೆ ಎಂದ ಅವರು, ಹಾಲು ಉತ್ಪಾದಕರಿಗೆ ಸರಕಾರದ ವತಿಯಿಂದ ನೀಡಲಾಗುತ್ತಿರುವ 5 ರೂ.ಗಳ ಪ್ರೋತ್ಸಾಹಧನವನ್ನು ಕಡಿತ ಮಾಡುವ ಚಿಂತನೆ ಇಲ್ಲ ಎಂದರು.

ಯಾವುದೇ ಕಾರಣಕ್ಕೂ ರೈತರಿಗೆ ನೀಡುವ ಸಹಾಯಧನದಲ್ಲಿ ಕಡಿತ ಮಾಡಲಾಗುವುದಿಲ್ಲ ಎಂದ ಅವರು, ಇತರ ಹಾಲು ಒಕ್ಕೂಟಗಳಲ್ಲಿ ಸಂಗ್ರಹವಾಗುವ ಅಧಿಕ ಹಾಲನ್ನು ಇಲ್ಲಿಗೆ ಕಳುಹಿಸಿಕೊಟ್ಟಲ್ಲಿ ಈ ಘಟಕದಲ್ಲಿ ಹಾಲಿನ ಪುಡಿಯನ್ನಾಗಿ ಪರಿವರ್ತಿಸಿಕೊಡಲಾಗುವುದು. ನಿಗದಿತ ದರದಂತೆ ಪುಡಿಯನ್ನಾಗಿ ಪರಿವರ್ತಿಸಿಕೊಡಲಾಗುತ್ತದೆ ಎಂದು ಸೋಮಶೇಖರ್ ಇದೇ ವೇಳೆ ತಿಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X