ವಿಮಾನಗಳಲ್ಲಿ ಕೋವಿಡ್ ಶಿಷ್ಟಾಚಾರ ಉಲ್ಲಂಘಿಸಿದರೆ ಎರಡು ವಾರ ಯಾನ ಅಮಾನತು: ಡಿಜಿಸಿಎ ಎಚ್ಚರಿಕೆ

ಹೊಸದಿಲ್ಲಿ,ಸೆ.12: ಸುರಕ್ಷಿತ ಅಂತರ ನಿಯಮಗಳನ್ನು ಉಲ್ಲಂಘಿಸುವ ವಿಮಾನಯಾನ ಸಂಸ್ಥೆಗಳು ಎರಡು ವಾರಗಳ ಅಮಾನತನ್ನು ಎದುರಿಸಬೇಕಾಗುತ್ತದೆ ಎಂದು ನಾಗರಿಕ ವಾಯುಯಾನ ಮಹಾನಿರ್ದೇಶನಾಲಯ (ಡಿಜಿಸಿಎ)ವು ಎಚ್ಚರಿಕೆ ನೀಡಿದೆ.
ನಟಿ ಕಂಗನಾ ರಾಣಾವತ್ ಅವರು ಚಂಢೀಗಡದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಾಧ್ಯಮ ಪ್ರತಿನಿಧಿಗಳು ಸುರಕ್ಷಿತ ಅಂತರ ನಿಯಮಗಳನ್ನು ಉಲ್ಲಂಘಿಸಿದ್ದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಡಿಜಿಸಿಎಯ ಈ ಎಚ್ಚರಿಕೆ ಹೊರಬಿದ್ದಿದೆ.
ಇನ್ನು ಮುಂದೆ ಇಂತಹ ಉಲ್ಲಂಘನೆ ಪ್ರಕರಣಗಳು ನಡೆದರೆ ವಿಮಾನಯಾನ ಸಂಸ್ಥೆಯು ತಪ್ಪಿತಸ್ಥರ ವಿರುದ್ಧ ದಂಡನಾ ಕ್ರಮವನ್ನು ತೆಗೆದುಕೊಳ್ಳದಿದ್ದರೆ ನಿರ್ದಿಷ್ಟ ಮಾರ್ಗದಲ್ಲಿ ಯಾನವನ್ನು ಎರಡು ವಾರಗಳ ಅವಧಿಗೆ ಅಮಾನತುಗೊಳಿಸಲಾಗುವುದು ಎಂದು ಅದು ಶನಿವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ತನ್ನ ಯಾನದಲ್ಲಿ ಮಾಧ್ಯಮ ಪ್ರತಿನಿಧಿಗಳಿಂದ ಕೋವಿಡ್ ಶಿಷ್ಟಾಚಾರ ಉಲ್ಲಂಘನೆಯಾಗಿರುವ ಕುರಿತು ವರದಿಯೊಂದನ್ನು ಸಲ್ಲಿಸುವಂತೆ ಡಿಜಿಸಿಎ ಇಂಡಿಗೋ ಏರ್‌ಲೈನ್ಸ್‌ಗೆ ನಿರ್ದೇಶ ನೀಡಿದೆ.
Next Story





