Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ...

ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ಪಕ್ಷ ಸಂಘಟನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕರೆ

ವಾರ್ತಾಭಾರತಿವಾರ್ತಾಭಾರತಿ12 Sept 2020 11:59 PM IST
share
ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ಪಕ್ಷ ಸಂಘಟನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕರೆ

ಮಡಿಕೇರಿ, ಸೆ.12 : ಕಾಂಗ್ರೆಸ್ ಲೀಡರ್ ಆಧಾರಿತ ಪಕ್ಷವಲ್ಲ, ಇದೊಂದು ಕೇಡರ್ ಆಧಾರಿತ ಪಕ್ಷ ಎನ್ನುವುದನ್ನು ಸಾಬೀತು ಪಡಿಸಬೇಕಾಗಿದ್ದು, ಕಾರ್ಯಕರ್ತರು ನೇರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕರೆ ನೀಡಿದ್ದಾರೆ.

ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪಕ್ಷವನ್ನು ಸದೃಢಗೊಳಿಸಲು ಹಿರಿಯ ಕಾಂಗ್ರೆಸ್ಸಿಗರು ಶ್ರಮಿಸಬೇಕೆಂದು ಸೂಚನೆ ನೀಡಿದರು.

ವಲಯ, ಬ್ಲಾಕ್, ವಿಧಾನಸಭಾ ಕ್ಷೇತ್ರದ ಸಭೆಯಗಳಲ್ಲಿ ಎಲ್ಲಾ ಹಿರಿಯ ಕಾಂಗ್ರೆಸ್ಸಿಗರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸಭೆಗಳಿಗೆ ನಿರಂತರವಾಗಿ ಗೈರು ಹಾಜರಾಗುವವರ ವಿವರವನ್ನು ಕೆಪಿಸಿಸಿಗೆ ಕಳುಹಿಸಿಕೊಡುವಂತೆ ಸಲೀಂ ಜಿಲ್ಲಾ ಸಮಿತಿಗೆ ತಿಳಿಸಿದರು. ಬ್ಲಾಕ್ ಹಂತದಲ್ಲಿ ಮಾಸಿಕ ಎರಡು ಸಭೆ, ಜಿಲ್ಲಾ ಕಾಂಗ್ರೆಸ್ ಹಂತದಲ್ಲಿ ಒಂದು ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು. ವಿಧಾನಸಭೆ, ವಿಧಾನಪರಿಷತ್ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷದ ಬಲವನ್ನು ಹೆಚ್ಚಿಸಬೇಕು ಎಂದರು. 

ಎಲ್ಲಾ ಘಟಕಗಳ ನಾಯಕರುಗಳು ಹಾಗೂ ಪದಾಧಿಕಾರಿಗಳು ಕಡ್ಡಾಯವಾಗಿ ಪಕ್ಷವನ್ನು ಸಂಘಟಿಸುವುದರೊಂದಿಗೆ ಕಾರ್ಯಕರ್ತರ ನಡುವೆ ಸಾಮ್ಯತೆಯನ್ನು ಸಾಧಿಸಬೇಕು ಎಂದು ಸಲೀಂ ಸಲಹೆ ನೀಡಿದರು.

ಮುಖ್ಯ ಸಚೇತಕ ನಾರಾಯಣ ಸ್ವಾಮಿ ಅವರು ಮಾತನಾಡಿ, ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿಯೂ ಒಗ್ಗಟ್ಟಾಗಿ ಸಂಘಟನೆ ಮಾಡಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವಂತೆ ಕರೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾಧ್ಯಕ್ಷರ ಬಗ್ಗೆ ನಾನು ಎಲ್ಲೂ ಅಪಸ್ವರ ವ್ಯಕ್ತಪಡಿಸಿಲ್ಲ. ಆದರೂ ಕೆಲವು ಪತ್ರಿಕೆಗಳಲ್ಲಿ ತಪ್ಪು ಸುದ್ದಿಗಳು ಪ್ರಕಟವಾಗಿದೆ ಎಂದು ಸ್ಪಷ್ಟಪಡಿಸಿದರು. ನಾವೆಲ್ಲರೂ ಒಟ್ಟಾಗಿ ದುಡಿದು ಪಕ್ಷದ ಋಣ ತೀರಿಸುವ ಕೆಲಸ ಮಾಡಬೇಕಾಗಿದೆ ಎಂದರು.

ಕೆಪಿಸಿಸಿ ಪ್ರಮುಖರಾದ ಕೆ.ಪಿ.ಚಂದ್ರಕಲಾ ಮಾತನಾಡಿ, ಚುನಾವಣೆಯಲ್ಲಿ ಎರಡು ಬಾರಿ ಸೋಲಾಗಿ ನೋವು ಅನುಭವಿಸಿದ್ದೇನೆ. ಈ ರೀತಿಯ ಪರಿಸ್ಥಿತಿ ಬೇರೆ ಯಾವ ಅಭ್ಯಾರ್ಥಿಗೂ ಬಾರದಂತೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸಿ ಎಂದು ಮನವಿ ಮಾಡಿದರು.

ಹಿರಿಯರಾದ ಹೆಚ್.ಎಸ್.ಚಂದ್ರಮೌಳಿ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ಪಕ್ಷ ಸಂಘಟನೆ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಕೊಡಗು ಜಿಲ್ಲೆಯಲ್ಲೂ ಪಕ್ಷದ ಚಟುವಟಿಕೆ ಅಚ್ಚುಕಟ್ಟುತನದಿಂದ ಕೂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರೊಬ್ಬರು ಇದೇ ಮೊದಲ ಬಾರಿಗೆ ಜಿಲ್ಲಾ ಕಾರ್ಯಾಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಪ್ರೋತ್ಸಾಹ ನೀಡಿರುವುದು ಮತ್ತು ಶಿಷ್ಟಾಚಾರವನ್ನು ಪಾಲಿಸಿರುವುದು ಶ್ಲಾಘನೀಯ ಎಂದರು. 2ನೇ ಬಾರಿಗೆ ಜಿಲ್ಲೆಗೆ ಆಗಮಿಸಿ, ಪಕ್ಷ ಸಂಘಟನೆಗೆ ಸ್ಫೂರ್ತಿ ತುಂಬಿರುವ ಅವರು ಅಭಿನಂದನಾರ್ಹರು ಎಂದರು. ರಾಜ್ಯ ನಾಯಕರ ನಿರೀಕ್ಷೆಯಂತೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಶಸ್ಸು ತಂದುಕೊಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಡಿಸಿಸಿಯಿಂದ ನಡೆದ ಆರೋಗ್ಯ ಹಸ್ತ ಕಾರ್ಯಕ್ರಮ, ಜನಧ್ವನಿ ಮತ್ತಿತರ ಹೋರಾಟಗಳ ಬಗ್ಗೆ ಬ್ಲಾಕ್ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರುಗಳಿಂದ ಸಲೀಂ ಅಹ್ಮದ್ ಅವರು ಮಾಹಿತಿ ಪಡೆದರು. ಮುಂಬರುವ ಚುನಾವಣೆಗಳಿಗೆ ನಡೆಸಿರುವ ಸಿದ್ಧತೆಗಳ ಬಗ್ಗೆ ಚರ್ಚಿಸಿದರು. 

ಪ್ರಮುಖರಾದ ಹರೀಶ್ ಬೋಪಣ್ಣ, ನಟೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ನವೀನ್, ಅನಂತಕುಮಾರ್, ರಂಜಿ ಪೂಣಚ್ಚ, ಸತೀಶ್, ಅಪ್ರುರವೀಂದ್ರ, ಇಸ್ಮಾಯಿಲ್, ವಾಸು, ಬಿ.ಆರ್.ರಮಾನಾಥ್, ನರೇಂದ್ರ ಕಾಮತ್, ಕೆ.ಎಂ.ಲೋಕೇಶ್, ವಿ.ಪಿ.ಶಶಿಧರ್, ರಾಜೇಶ್, ವಕ್ಫ್ ಮಂಡಳಿಯ ಜಿಲ್ಲಾಧ್ಯಕ್ಷ ಕೆ.ಎ.ಯಾಕುಬ್, ಹಿರಿಯರಾದ ಟಿ.ಪಿ.ರಮೇಶ್, ಕೊಲ್ಲೀರ ಬೋಪಣ್ಣ, ಎಸ್.ಎಂ.ಚಂಗಪ್ಪ, ಶಾಫಿ ಎಡಪಾಲ, ಶೀಲಾ ಡಿಸೋಜಾ, ರಾಫಿ ಮಹಮ್ಮದ್, ಹೆಚ್.ಎಂ.ನಂದಕುಮಾರ್, ಅಬ್ಬು ರೆಹಮಾನ್ ಬಾಪು, ತೆನ್ನಿರಾ ಮೈನಾ, ಗೋವಿಂದ ರಾಜ್ ದಾಸ್, ಕೆ.ಇ.ಮ್ಯಾಥ್ಯು, ಧರ್ಮಜ ಸೇರಿದಂತೆ ಎಲ್ಲಾ ಘಟಕ, ವಲಯ ಮತ್ತು ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X