ಕೋವಿಡ್ ಗೆ ರಾಜ್ಯ ರಾಜಧಾನಿಯಲ್ಲಿ 45 ಮಂದಿ ಬಲಿ; ಸಾವಿನ ಸಂಖ್ಯೆ 2,436ಕ್ಕೆ ಹೆಚ್ಚಳ
ಇಂದು 3,479 ಮಂದಿಗೆ ಸೋಂಕು ದೃಢ

ಬೆಂಗಳೂರು, ಸೆ.12: ನಗರದಲ್ಲಿ ರವಿವಾರದಂದು 3,479 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 3,270 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಸೋಂಕಿಗೆ 45 ಜನರು ಮೃತರಾಗಿದ್ದಾರೆ.
ನಗರದಲ್ಲಿ ಒಟ್ಟು 1,70,662 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ 2,436 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,27,132 ಜನರು ಇಲ್ಲಿಯವರೆಗೆ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 40,929 ಕೊರೋನ ಸೋಂಕಿತರು ಸಕ್ರಿಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,18,645 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.
ಶನಿವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 19,680 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 29,588 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ. ನಗರದಲ್ಲಿ ಒಟ್ಟು 4,51,459 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 5,63,093 ಜನರನ್ನು ಗುರುತಿಸಲಾಗಿದೆ.
ನಗರದಲ್ಲಿ 11,90,672 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.14.04ರಷ್ಟಿದೆ. ಕೊರೋನ ಸೋಂಕಿಗೆ ಮೃತರಾಗುತ್ತಿರುವ ಪ್ರಮಾಣ ಶೇ.1.43ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.74.09 ರಷ್ಟಿದೆ.







