Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೈಬರ್ ಆವರಣ- ಭೌತಿಕ ಆವರಣ...

ಸೈಬರ್ ಆವರಣ- ಭೌತಿಕ ಆವರಣ ಒಗ್ಗೂಡಿಸುವಿಕೆಯೇ ಭವಿಷ್ಯದ ತಾಂತ್ರಿಕತೆ: ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಭಾರತೀಯ ನಾವೀನ್ಯತಾ ಶೃಂಗಸಭೆ- 2020ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ14 Sept 2020 3:32 PM IST
share
ಸೈಬರ್ ಆವರಣ- ಭೌತಿಕ ಆವರಣ ಒಗ್ಗೂಡಿಸುವಿಕೆಯೇ ಭವಿಷ್ಯದ ತಾಂತ್ರಿಕತೆ: ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು: ಸೈಬರ್ ಆವರಣ ಮತ್ತು ಭೌತಿಕ ಆವರಣದ ಒಟ್ಟುಗೂಡಿಸುವಿಕೆಯು ಮುಂಬರುವ ದಿನಗಳಲ್ಲಿ ಆರ್ಥಿಕತೆ ಸೇರಿದಂತೆ ಎಲ್ಲಾ ವಲಯಗಳನ್ನು ಅಗಾಧವಾಗಿ ಪ್ರಭಾವಿಸುವ ತಾಂತ್ರಿಕತೆ ಆಗಲಿದೆ ಎಂದು ಐಟಿ/ ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಹೇಳಿದರು.

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಆಯೋಜಿಸಿರುವ “ಭಾರತೀಯ ನಾವೀನ್ಯತಾ ಶೃಂಗಸಭೆ-2020’ ಅನ್ನು ಆನ್ ಲೈನ್ ಮೂಲಕ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ನಾಲ್ಕು ದಿನಗಳ ಕಾಲ ನಡೆಯುವ ಈ ಶೃಂಗಸಭೆಯಲ್ಲಿ “ಕ್ಷಮತೆ & ಪುನಶ್ಚೈತನ್ಯ: ಐದನೇ ತಲೆಮಾರು-5.0 ಕ್ಕೆ ನಾವೀನ್ಯತೆ’ ಕುರಿತು ವಿಷಯ ಮಂಡನೆ, ಚರ್ಚೆ, ಸಂವಾದ ಹಾಗೂ ಸಮಾಲೋಚನೆಗಳು ನಡೆಯಲಿವೆ.

ಭೌತಿಕ ಆವರಣದಲ್ಲಿ ಅಳವಡಿಸಲಾಗುವ ಸೆನ್ಸಾರ್ ಗಳು ಕಲೆಹಾಕುವ ಬೃಹತ್ ಪ್ರಮಾಣದ ದತ್ತಾಂಶಗಳನ್ನು ಕೃತಕ ಬುದ್ಧಿಮತ್ತೆಯ ನೆರವಿನಿಂದ ನಿಖರವಾಗಿ ವಿಶ್ಲೇಷಿಸಬಲ್ಲ ತಂತ್ರಜ್ಞಾನ ಇದಾಗಿರುತ್ತದೆ. ವೈದ್ಯಕೀಯ ಕ್ಷೇತ್ರ, ಕೃಷಿ ಕ್ಷೇತ್ರ ಹಾಗೂ ವಿಶೇಷವಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಹಿನ್ನೆಲೆಯಲ್ಲಿ ಶೈಕ್ಷಣೀಯ ಕ್ಷೇತ್ರದ ಮೇಲೂ ಇದು ಹೆಚ್ಚಿನ ಪ್ರಭಾವ ಬೀರಲಿದೆ. ಮುಂದಿನ 2 ಅಥವಾ 3 ತಿಂಗಳಲ್ಲಿ ನಾವು ಈ ದಿಸೆಯಲ್ಲಿ ಮೊದಲ ಹೆಜ್ಜೆ ಇರಿಸಲಿದ್ದೇವೆ ಎಂದು ಅವರು ವಿವರಿಸಿದರು.

ಸೈಬರ್ ಆವರಣ ಹಾಗೂ ಭೌತಿಕ ಆವರಣದ ಒಟ್ಟುಗೂಡಿಸುವಿಕೆಯನ್ನು ಅಳವಡಿಸಿಕೊಳ್ಳುವುದರಿಂದ ಸರ್ಕಾರದ ಕಾರ್ಯಕ್ಷಮತೆ, ಉತ್ತರದಾಯತ್ವ, ಪಾರದರ್ಶಕತೆ, ಸಾಧನೆ ಅದೆಷ್ಟೋ ಪಟ್ಟು ಅಧಿಕವಾಗುವ ಸಾಧ್ಯತೆ ಇದೆ. ಇದು ಅಲ್ಪಾವಧಿಯಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಕಾರ್ಯತಂತ್ರ ಹಾಗೂ ಮಧ್ಯಮಾವಧಿಯಲ್ಲಿ ಅಭಿವೃದ್ಧಿ ಸಾಧಿಸುವ ಕಾರ್ಯತಂತ್ರದ ಶ್ರೇಷ್ಠ ಸಮನ್ವಯತೆಯಿಂದ ಕೂಡಿದ್ದಾಗಿದೆ ಎಂದು ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು. 

ಕಳೆದ ಒಂದು ವರ್ಷದಲ್ಲಿ ಸರ್ಕಾರವು ಉದ್ಯಮಶೀಲತೆ ಉತ್ತೇಜಿಸಲು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ರೀತಿಯ ಉದ್ಯಮಗಳನ್ನು ಬೆಳೆಸಲು ಏನೆಲ್ಲಾ ಸಾಧ್ಯವೋ ಅವೆಲ್ಲವನ್ನೂ ಮಾಡುವ ಇಚ್ಛಾಶಕ್ತಿಯನ್ನು ಸರ್ಕಾರ ಹೊಂದಿದೆ ಎಂದರು.

ಐಟಿ/ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಭಾರತದ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ನ ಮಹಾ ನಿರ್ದೇಶಕ ಡಾ.ಓಂಕಾರ್ ರಾಯ್, ಸಿಐಐ ಕರ್ನಾಟಕ ರಾಜ್ಯ ಮಂಡಳಿಯ ಅಧ್ಯಕ್ಷ ಸಂದೀಪ್ ಸಿಂಗ್, ಉಪಾಧ್ಯಕ್ಷ ರಮೇಶ್ ರಾಮದುರೈ ಅವರು ಕಾರ್ಯಕ್ರಮದಲ್ಲಿ ಹಾಜರಿದ್ದು ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X