Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಗನವಾಡಿ ಸೇವೆ ಡಿಜಿಟಲೀಕರಣ:...

ಅಂಗನವಾಡಿ ಸೇವೆ ಡಿಜಿಟಲೀಕರಣ: ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದ ಸಚಿವ ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ14 Sept 2020 3:36 PM IST
share
ಅಂಗನವಾಡಿ ಸೇವೆ ಡಿಜಿಟಲೀಕರಣ: ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದ ಸಚಿವ ವಿ.ಸೋಮಣ್ಣ

ಮಡಿಕೇರಿ ಸೆ.14 : ಪೋಷಣ್ ಅಭಿಯಾನ್ ಯೋಜನೆಯಡಿ ಕೇಂದ್ರ ಸರಕಾರ ರಾಜ್ಯಕ್ಕೆ 129 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಅಂಗನವಾಡಿ ಸೇವೆಗಳನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯದ 66 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಸ್ಮಾರ್ಟ್ ಫೋನ್‍ಗಳನ್ನು ಹಾಗೂ 921 ಅಂಗನವಾಡಿಗಳಿಗೆ ಸ್ಯಾಮ್‍ಸಂಗ್ ಕಂಪೆನಿಯ ತಲಾ 10 ಸಾವಿರ ರೂ.ಮೌಲ್ಯದ ಮೊಬೈಲ್‍ಗಳನ್ನು ನೀಡಲಾಗುತ್ತಿದೆ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ನಗರದ ಜಿ.ಪಂ.ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪೋಷಣ್ ಅಭಿಯಾನ್ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಫೋನ್ ವಿತರಿಸಿ ಹಾಗೂ ಪೋಷಣ್ ಅಭಿಯಾನ್ ಸಂಬಂಧಿಸಿದ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಯಾವುದೇ ಮಕ್ಕಳು, ತಾಯಂದಿರು ಅಪೌಷ್ಠಿಕತೆಯಿಂದ ಬಳಲಬಾರದು. ಅಂಗನವಾಡಿಗಳಲ್ಲಿ ನೀಡುವ ಔಷಧೋಪಚಾರ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಮೊಬೈಲ್ ಮೂಲಕ ಮಾಹಿತಿ ಸಂಗ್ರಹಿಸಬಹುದಾಗಿದೆ. ಅಲ್ಲದೆ ಅಂಗನವಾಡಿಗಳಲ್ಲಿ ಮಕ್ಕಳಿಗೆ ಚುಚ್ಚುಮದ್ದು, ದಾಖಲಾತಿ ಸಂಖ್ಯೆಗಳ ಬಗ್ಗೆಯೂ ಸಹ ಮೊಬೈಲ್ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.

ಮಾತೃಪೂರ್ಣ, ಮಾತೃ ವಂದನ ಸೇರಿದಂತೆ 40 ಬಗೆಯ ಕಾರ್ಯಕ್ರಮ ಕಡತಗಳನ್ನು ಮೊಬೈಲ್ ಮೂಲಕವೇ ನಿರ್ವಹಣೆ ಮಾಡಬಹುದು ಎಂದು ವಿ.ಸೋಮಣ್ಣ ಅವರು ತಿಳಿಸಿದರು.

ಜಿಲ್ಲೆಯಲ್ಲಿ ನೆಟ್‍ವರ್ಕ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಗಮನ ಸೆಳೆದರು.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯತ್  ಅಧ್ಯಕ್ಷ  ಬಿ.ಎ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಡಿಸಿಎಫ್‍ಗಳಾದ ಪ್ರಭಾಕರನ್, ಮಹೇಶ್ ಕುಮಾರ್ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X