Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದಿ ಹೇರಿಕೆಗೆ ಖಂಡನೆ: ಕೇಂದ್ರ ಸರಕಾರದ...

ಹಿಂದಿ ಹೇರಿಕೆಗೆ ಖಂಡನೆ: ಕೇಂದ್ರ ಸರಕಾರದ ವಿರುದ್ಧ ತುಮಕೂರಿನಲ್ಲಿ ಕರವೇ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 Sept 2020 4:07 PM IST
share
ಹಿಂದಿ ಹೇರಿಕೆಗೆ ಖಂಡನೆ: ಕೇಂದ್ರ ಸರಕಾರದ ವಿರುದ್ಧ ತುಮಕೂರಿನಲ್ಲಿ ಕರವೇ ಪ್ರತಿಭಟನೆ

ತುಮಕೂರು, ಸೆ.14: ಕರ್ನಾಟಕ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಒತ್ತಾಯ ಪೂರ್ವಕವಾಗಿ ಕೇಂದ್ರ ಸರಕಾರ ನಡೆಸಿದ ಹಿಂದಿ ಸಪ್ತಾಹ ಕಾರ್ಯಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. 

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಕರವೇ ಕಾರ್ಯಕರ್ತರು ಕೇಂದ್ರ ಸರಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಉಪವಿಭಾಗಾಧಿಕಾರಿ ಅಜಯ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. 

ಭಾಷವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ರಾಜ್ಯಗಳ ಒಕ್ಕೂಟ ದೇಶವಾಗಿರುವ ಭಾರತ ಹಲವಾರು ಭಾಷೆ ಮತ್ತು ವಿಭಿನ್ನ ಸಂಸ್ಕೃತಿಯನ್ನು ಹೊಂದಿರುವ ವಿವಿಧತೆಯಲ್ಲಿ ಏಕತೆ ಹೊಂದಿರುವ ಪ್ರಜಾಪ್ರಭುತ್ವ ದೇಶವಾಗಿದೆ. ಸ್ವಾತಂತ್ರ್ಯ ನಂತರ ರಚನೆಯಾದ ಪ್ರಜಾಪ್ರಭುತ್ವ ವ್ಯವಸ್ಥೆಯ ಕೇಂದ್ರ ಸರಕಾರ ಮೊದಲಿನಿಂದಲೂ ಹಿಂದಿಯನ್ನು ಇಡೀ ದೇಶದಲ್ಲಿ ಬೆಳೆಸುವ ಉದ್ದೇಶದಿಂದ ದೇಶದ ಎಲ್ಲ ಭಾಷೆಗಳ ಜನರ ತೆರಿಗೆ ಹಣದಲ್ಲಿ ಪ್ರತಿ ವರ್ಷ ಸೆ.14 ರಂದು ಕರ್ನಾಟಕ ಸೇರಿದಂತೆ ಹಿಂದಿಯೇತರ ದ್ರಾವಿಡ ಭಾಷೆಗಳನ್ನು ಮಾತನಾಡುವ ರಾಜ್ಯಗಳಲ್ಲಿ ಒತ್ತಾಯ ಪೂರ್ವಕವಾಗಿ ಹಿಂದಿ ಸಪ್ತಾಹ ನಡೆಸಿ ಹಿಂದಿಯೇತರರನ್ನು ದೇಶದ 2ನೇ ದರ್ಜೆಯ ಪ್ರಜೆಗಳಂತೆ ಕಾಣುತ್ತಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಅಪಮಾನ ಎಂದು ಪ್ರತಿಭಟನಾಕಾರರು ದೂರಿದರು. 

ಪ್ರತಿಭಟನಾಕಾರರನ್ನು ಉದ್ದೇಶಿಸಿ ಕರವೇ (ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಕೆ.ಎನ್. ಮಂಜುನಾಥ್ ಗೌಡ ಮಾತನಾಡಿ, ಕೇಂದ್ರ ಸರಕಾರ ಬಲವಂತವಾಗಿ ಆಯಾ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರುವ ಪ್ರಯತ್ನ ಮಾಡುತ್ತಿರುವುದನ್ನು ಖಂಡನೀಯ ಎಂದರು. 

ಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆಯನ್ನಾಗಿ ಬಿಂಬಿಸುತ್ತಿರುವ ಕೇಂದ್ರ ಸರಕಾರ ಯಾವ ಭಾಷೆ ಎಷ್ಟು ವರ್ಷಗಳ ಕಾಲ ಇತಿಹಾಸ ಇದೆ ಎಂಬುದನ್ನು ಮನಗಾಣಬೇಕು. ಕನ್ನಡ ಭಾಷೆಗೆ 3 ಸಾವಿರ ವರ್ಷ ಇತಿಹಾಸ ಇದೆ. ಆದರೆ ಹಿಂದಿ ಭಾಷೆಗೆ ಕೇವಲ 600 ವರ್ಷಗಳ ಇತಿಹಾಸ ಮಾತ್ರ ಇದೆ. ಹಾಗಾಗಿ ಕನ್ನಡ ಭಾಷೆಯನ್ನು ರಾಷ್ಟ್ರಭಾಷೆಯನ್ನಾಗಿ ಮಾಡಲಿ ಎಂದು ಅವರು ಒತ್ತಾಯಿಸಿದರು.  

ಹಿಂದಿಯೇತರ ರಾಜ್ಯಗಳಲ್ಲಿ ಒತ್ತಾಯ ಪೂರ್ವಕವಾಗಿ ಹಿಂದಿ ಭಾಷೆ ಹೇರಲು ಮುಂದಾಗಿರುವ ಕೇಂದ್ರ ಸರ್ಕಾರ ತಕ್ಷಣದಿಂದಲೇ ತನ್ನದ ನಿಲುವನ್ನು ಬದಲಿಸಿಕೊಂಡು ಈ ವಿಚಾರವನ್ನು ಕೈ ಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಹೋರಾಟಗಳು ಉಗ್ರ ಸ್ವರೂಪ ಪಡೆದುಕೊಳ್ಳಲಿವೆ ಎಂದು ಎಚ್ಚರಿಕೆ ನೀಡಿದರು.  

ಪ್ರತಿಭಟನೆಯಲ್ಲಿ ಕರವೇ ಉಪಾಧ್ಯಕ್ಷ ಕುಮಾರಣ್ಣ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಆನಂದ್, ಮಹಿಳಾ ಘಟಕದ ಅಧ್ಯಕ್ಷೆ ಸುನೀತಾಮೂರ್ತಿ, ಮಹದೇವಯ್ಯ, ಬಾಲು, ಮಂಜು, ರವಿ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X