Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಂತ್ರಜ್ಞಾನ ಬಳಸಿ ಪೊಲೀಸ್ ಇಲಾಖೆಯ...

ತಂತ್ರಜ್ಞಾನ ಬಳಸಿ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಕ್ರಮ: ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್

ವಾರ್ತಾಭಾರತಿವಾರ್ತಾಭಾರತಿ14 Sept 2020 6:52 PM IST
share
ತಂತ್ರಜ್ಞಾನ ಬಳಸಿ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಕ್ರಮ: ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್

-
ಡ್ರಗ್ಸ್ ಪ್ರಕರಣ: ಕಾಫಿನಾಡಿನ ಹೋಂ ಸ್ಟೇಗಳ ಮೇಲೆ ಹದ್ದಿನಕಣ್ಣು
 

ಚಿಕ್ಕಮಗಳೂರು, ಸೆ,14: ಪೊಲೀಸ್ ಇಲಾಖೆಯನ್ನು ಜನಸ್ನೇಹಿಯನ್ನಾಗಿಸಲು ಹಾಗೂ ಅಪರಾಧಗಳ ಒತ್ತೆ, ಸಾಕ್ಷ್ಯಗಳ ಸಂಗ್ರಹದಂತಹ ಕೆಲಸಗಳಿಗೆ ತಂತ್ರಜ್ಞಾನವನ್ನು ಉಪಯೋಗಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುತ್ತಿದ್ದು, ತಂತ್ರಜ್ಞಾನದ ಸದುಪಯೋಗದಿಂದ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಿ ಜನರಿಗೆ ಉತ್ತಮ ಸೇವೆ ನೀಡಲು ಇಲಾಖೆಯಲ್ಲಿ ಪ್ರಯತ್ನಗಳು ಸಾಗಿವೆ ಎಂದು ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ ಪ್ರವೀಣ್‍ ಸೂದ್ ತಿಳಿಸಿದರು.

ಕಳೆದ ಎರಡು ದಿನಗಳಿಂದ ಜಿಲ್ಲಾ ಪ್ರವಾಸದಲ್ಲಿದ್ದು, ಸೋಮವಾರ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಸಂದರ್ಭ ಪೊಲೀಸರು ಹಿಂದಿನಂತೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಹಿಂದೆ ಅಪರಾಧ ಪ್ರಕರಣಗಳಲ್ಲಿ ಅಪರಾಧಿ, ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಇದು ಸದ್ಯ ನಿಂತಿದ್ದು, ಆದರೆ ಸದ್ಯ ವಿಡಿಯೋ ಮೂಲಕ ನ್ಯಾಯಾಲಯಕ್ಕೆ ತೋರಿಸಬೇಕಿದೆ. ಹಿಂದೆ ಪೊಲೀಸ್ ಇಲಾಖೆಯಿಂದ ಅನುಮತಿ, ಪ್ರಮಾಣ ಪತ್ರಗಳನ್ನು ಪಡೆಯಲು ಕಚೇರಿಗೆ ಬರುತ್ತಿದ್ದರು. ಈಗ ಅದನ್ನು ನಿಲ್ಲಿಸಲಾಗಿದ್ದು, ಆನ್‍ಲೈನ್ ಮೂಲಕ ಈ ಕೆಲಸ ನಡೆಯುತ್ತಿದೆ. ಇಂತಹ ಅನೇಕ ಸೇವೆಗಳನ್ನು ಭವಿಷ್ಯದಲ್ಲಿ ಆನ್‍ಲೈನ್ ಮೂಲಕವೇ ಒದಗಿಸಲು ಇಲಾಖೆ ಕ್ರಮವಹಿಸಿದೆ ಎಂದರು.

ಇನ್ನು ಮುಂದೆ 112 ದೂರವಾಣಿ ಸಂಖ್ಯೆಗೆ ಸಂಕಷ್ಟದಲ್ಲಿರುವ ಸಾರ್ವಜನಿಕರು ಕರೆ ಮಾಡಿದರೇ ಅವರ ಮನೆ ಬಾಗಿಲಿಗೆ ಪೊಲೀಸರು ಹೋಗುವಂತಹ ವ್ಯವಸ್ಥೆಯನ್ನು 2-3 ತಿಂಗಳಲ್ಲಿ ಜಾರಿ ಮಾಡಲಾಗುವುದು. ಪೊಲೀಸ್ ಇಲಾಖೆಯಲ್ಲಿ ತಂತ್ರಜ್ಞಾನ ಬಳಸಿಕೊಂಡು ಇಂತಹ ಹತ್ತು ಹಲವು ಸೇವೆಗಳನ್ನು ಭವಿಷ್ಯದಲ್ಲಿ ಜಾರಿ ಮಾಡಲಾಗುವುದು. ಈ ಸಂಬಂಧ ರಾಜ್ಯಮಟ್ಟದಲ್ಲಿ ಇಲಾಖಾಧಿಕಾರಿಗಳೊಂದಿಗೆ ಚರ್ಚೆ ನಡೆದಿದೆ. ಇದೇ ವಿಚಾರವನ್ನು ಚಿಕ್ಕಮಗಳೂರಿನ ಇಲಾಖಾಧಿಕಾರಿಗಳೊಂದಿಗೂ ಚರ್ಚಿಸಿದ್ದು, ಜಿಲ್ಲೆಯಲ್ಲಿನ ಅಪರಾಧ ಪ್ರಕರಣಗಳು ಮತ್ತು ಕಾನೂನು ಸುವ್ಯವಸ್ಥೆಗಳ ಬಗ್ಗೆಯೂ ಚರ್ಚೆ ನಡೆಸಿದ್ದು, ಇಲ್ಲಿನ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ತಾನು ಚಿಕ್ಕಮಗಳೂರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಭೇಟಿ ನೀಡಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕಾನೂನು ಸುವ್ಯಸ್ಥೆಯನ್ನು ಅಚ್ಚುಕಟ್ಟಿನಿಂದ ನಿರ್ವಹಿಸಿದ್ದಾರೆ. ಸತತ 6 ತಿಂಗಳಿಂದ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿ ಕೋವಿಡ್-19 ನಿಯಂತ್ರಣಕ್ಕೆ ಶ್ರಮಿಸಿದ್ದಾರೆ. ಅವರನ್ನು ಮುಖಾಮುಖಿಯಾಗಿ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಜಿಲ್ಲೆಗೆ ಆಗಮಿಸಿದ್ದೇನೆ. ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೋನ ಸೋಂಕು ಆರಂಭದಲ್ಲಿ ನಿಯಂತ್ರಣದಲ್ಲಿತ್ತು. ಇದಕ್ಕೆ ಜಿಲ್ಲಾಡಳಿತದೊಂದಿಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನಿಂದ ಕರ್ತವ್ಯ ನಿರ್ವಹಿಸಿರುವುದು ಕಾರಣವಾಗಿದೆ. ಲಾಕ್‍ಡೌನ್ ತೆರವಿನ ಬಳಿಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಸಂದರ್ಭದಲ್ಲೂ ಪೊಲೀಸ್ ಇಲಾಖೆ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದು ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದರು.

ಕೋವಿಡ್-19 ನಿರ್ವಹಣೆ ಕೆಲಸದಿಂದಾಗಿ ಪೊಲೀಸ್ ಇಲಾಖೆಯಲ್ಲಿನ 7 ಸಾವಿರ ಮಂದಿ ಅಧಿಕಾರಿ ಮತ್ತು ಪೊಲೀಸರಿಗೆ ಸೋಂಕು ತಗಲಿದೆ. ಈ ಪೈಕಿ 55 ಮಂದಿ ಅಸುನೀಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಉತ್ತಮ ಕಾರ್ಯನಿರ್ವಹಣೆ ತೋರಿದ್ದರೂ ಒಬ್ಬರು ಪ್ರಾಣ ಕಳೆದುಕೊಂಡಿರುವುದು ದುಃಖಕರ ವಿಷಯವಾಗಿದೆ. ಸಾರ್ವಜನಿಕರ ಆರೋಗ್ಯ ಕಾಪಾಡುವ ಕೆಲಸದಲ್ಲಿ ಪೊಲೀಸರು ಈ ರೋಗಕ್ಕೆ ಬಲಿಯಾಗಿರುವುದು ವಿಷಾದದ ಸಂಗತಿ. ಮುಂದೆ ಹಾಗಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಸದ್ಯ ಲಾಕ್‍ಡೌನ್ ತೆರವುಗೊಂಡಿದ್ದು, ಕೋವಿಡ್ ನಿಯಂತ್ರಣ ಕೆಲಸದೊಂದಿಗೆ ಸಾರ್ವಜನಿಕರ ಚಟುವಟಿಕೆಗಳೂ ಸೇರಿದಂತೆ ಪ್ರತಿಭಟನೆಗಳು, ಧರಣಿಗಳು ನಡೆಯುತ್ತಿವೆ. ಅಪರಾಧ ಪ್ರಕರಣಗಳು, ಮಾಧಕ ವಸ್ತುಗಳ ಜಾಲ ಗರಿಗೆದರಿಕೊಂಡಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆಯೂ ತನ್ನ ಕಾರ್ಯವ್ಯಾಪ್ತಿಯನ್ನೂ ಎಂದಿನಂತೆ ಬಿಗಿಗೊಳಿಸುತ್ತಿದೆ. ಪೊಲೀಸರ ಕೆಲಸ ಶೇ.100ಕ್ಕೆ 100ರಷ್ಟು ಬಿರುಸುಗೊಂಡಿದೆ ಎಂದರು.

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಪೊಲೀಸ್ ಅಧಿಕಾರಿ ಮತ್ತು ಪೊಲೀಸರು ಸೇರಿದಂತೆ ಅವರ ಕುಟುಂಬದವರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳುವ ಜವಾಬ್ದಾರಿ ಇಲಾಖೆಯ ಮೇಲಿದೆ. ಸೋಂಕಿನಿಂದ ಮೃತಪಟ್ಟಿರುವ ಕುಟುಂಬಕ್ಕೆ ಪರಿಹಾರವಾಗಿ ಸಿಎಂ, ಗೃಹ ಸಚಿವರು 30 ಲಕ್ಷ ರೂ. ಕೊಡಿಸಿದ್ದಾರೆ. ಸೋಂಕಿಗೆ ಒಳಗಾಗಿರುವ ವ್ಯಕ್ತಿಯ ಪ್ರಥಮ ಸಂಪರ್ಕಿತರು ಮನೆಯಲ್ಲೆ ಇರಬೇಕಾಗುತ್ತದೆ. ಈ ಸಂಬಂಧ ಪೊಲೀಸರಿಗೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಇಂತಹ ಕುಟುಂಬಗಳ ಜವಬ್ದಾರಿ ಇಲಾಖೆಯದ್ದಾಗಿದ್ದು, ಇದಕ್ಕೆ ಅಗತ್ಯವಿದ್ದಲ್ಲಿ ಹೆಚ್ಚಿನ ಅನುದಾನವನ್ನೂ ಬಿಡುಗಡೆ ಮಾಡಲಾಗುವುದು ಎಂದರು.

ಜ್ಯೇಷ್ಠತೆ ಕಡೆಗಣಿಸಿಲ್ಲ: ರಾಜ್ಯ ಮತ್ತು ದೇಶದಲ್ಲಿ 40 ವರ್ಷದ ಹಿಂದೆ ಮಹಿಳಾ ಪೊಲೀಸರು ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಮಹಿಳಾ ಪೊಲೀಸರನ್ನು ನೇಮಕ ಮಾಡಿಕೊಂಡ ನಂತರ ಅವರ ಸಂಖ್ಯೆ ವಿರಳವಾಗಿದ್ದರಿಂದ ಅವರಿಗೆ ಸವಲತ್ತುಗಳು ಹೆಚ್ಚು ಸಿಕ್ಕಿವೆ. ಸಶಸ್ತ್ರ ಮೀಸಲು ಪಡೆಯಲ್ಲಿ ಬೇಗ ಸವಲತ್ತು ಸಿಗುತ್ತಿದ್ದು, ಸಿವಿಲ್ ಪೊಲೀಸರಿಗೆ ತಡವಾಗಿ ಸವಲತ್ತು ದೊರೆಯುತ್ತಿರುವ ವಿಷಯದ ಬಗ್ಗೆ ಯೋಚಿಸುತ್ತೇವೆ. ಭಡ್ತಿ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನು ಪಾಲಿಸಲಾಗುವುದು ಎಂದರು.

ಮಾದಕ ವಸ್ತು ಕುರಿತಂತೆ ಬೆಂಗಳೂರು ಹೆಚ್ಚು ಸುದ್ದಿಯಾಗುತ್ತಿದೆ. ಆದರೆ ಕೆಜಿಎಫ್‍ನಲ್ಲಿ 200 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಂಗಳೂರು, ಕಲಬುರಗಿಯಲ್ಲೂ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಪೊಲೀಸ್ ಇಲಾಖೆ ಡ್ರಗ್ಸ್ ಜಾಲವನ್ನು ಬೇಧಿಸುವ ನಿಟ್ಟಿನಲ್ಲಿ ಹೆಚ್ಚು ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸುತ್ತಿದ್ದಾರೆ. ಆದರೆ ಬೆಂಗಳೂರಿನದ್ದೇ ಹೆಚ್ಚು ಸುದ್ದಿಯಾಗುತ್ತಿದ್ದು, ಇತರ ಜಿಲ್ಲೆಗಳಲ್ಲಿ ಪೊಲೀಸರು ಮಾಡುತ್ತಿರುವ ಈ ಕೆಲಸಗಳು ಸುದ್ದಿಯಾಗುತ್ತಿಲ್ಲ ಎಂದು ಇದೇ ವೇಳೆ ಪ್ರವೀಣ್ ಸೂದ್ ಹೇಳಿದರು.

ಹೊಸ ಠಾಣೆಗಳಿಗೆ ಪ್ರಸ್ತಾವ ಇಲ್ಲ: ಜಿಲ್ಲೆಯಲ್ಲಿ ಹೊಸ ಪೊಲೀಸ್ ಠಾಣೆಗಳನ್ನು ತೆರೆಯುವ ಬಗ್ಗೆ ಪ್ರಸ್ತಾವ ಬಂದಿಲ್ಲ. ಕುದುರೆಮುಖ ಠಾಣೆಯನ್ನು ಯಾವುದೇ ಕಾರಣಕ್ಕೂ ಬೇರೆ ಕಡೆ ವರ್ಗಾಯಿಸುವುದಿಲ್ಲ. ಜನವಸತಿ ಇಲ್ಲವೆಂದ ಮಾತ್ರಕ್ಕೆ ಅಲ್ಲಿಂದ ಠಾಣೆ ತೆರವು ಮಾಡಿದರೆ ಇರುವವರಿಗೆ ತೊಂದರೆಯಾಗಬಹುದು. ಆ ಠಾಣೆಯಲ್ಲಿ ಹೆಚ್ಚು ಸಿಬ್ಬಂದಿ ಇದ್ದಲ್ಲಿ ಬೇರೆ ಠಾಣೆಗಳಿಗೆ ಹಾಕಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಅಕ್ಷಯ್ ಮಚ್ಚೀಂದ್ರ, ಎಎಸ್ಪಿ ಶೃತಿ ಈ ವೇಳೆ ಉಪಸ್ಥಿತರಿದ್ದರು. 

ಹೋಂ ಸ್ಟೇಗಳ ಮೇಲೆ ಇಲಾಖೆ ಹದ್ದಿನಕಣ್ಣು
ಮಾದಕ ದ್ರವ್ಯ ಸೇವನೆಗೆ ಕಡಿವಾಣ ಹಾಕುವುದು ಪ್ರತೀ ಠಾಣೆಯ ಕರ್ತವ್ಯವಾಗಿದೆ. ಜಿಲ್ಲೆಯಲ್ಲೂ ಮಾದಕ ವಸ್ತುಗಳ ಮಾರಾಟವಾಗುತ್ತಿರುವುದು ಇಲಾಖೆಯ ಗಮನದಲ್ಲಿದ್ದು, ಪೊಲೀಸ್ ವರಿಷ್ಠಾಧಿಕಾರಿ ಅಗತ್ಯ ಕಾನೂನು ಕ್ರಮಕೈಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಪ್ರವಾಸಿತಾಣಗಳಿಗೆ ಪ್ರಸಿದ್ಧಿಯಾಗಿದೆ. ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಹೋಂಸ್ಟೇಗಳಲ್ಲಿ ಉಳಿದುಕೊಳ್ಳುತ್ತಾರೆ. ಹೋಂ ಸ್ಟೇಗಳ ಮೂಲಕವೂ ಡ್ರಗ್ಸ್ ಮಾರಾಟದಂತಹ ಮಾದಕ ವಸ್ತುಗಳು ಪ್ರವಾಸಿಗರಿಗೆ ಪೂರೈಕೆಯಾಗುತ್ತಿರುವ ಬಗ್ಗೆ ದೂರುಗಳಿವೆ. ಇಂತಹ ಘಟನೆಗಳ ಬಗ್ಗೆ ಇಲಾಖೆ ಹೆಚ್ಚಿನ ನಿಗಾವಹಿಸಲಿದೆ. ಈಗಾಗಲೇ ಹೋಂಸ್ಟೇ ಮಾಲಕರಿಗೆ ಈ ಸಂಬಂಧ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಒಂದು ವೇಳೆ ಹೋಂಸ್ಟೇಗಳಲ್ಲಿ ಇಂತಹ ಘಟನೆಗಳು ಕಂಡುಬಂದಲ್ಲಿ ಮಾಲಕರೇ ಹೊಣೆಗಾರರಾಗುತ್ತಾರೆ. ಅವರಿಗೆ ತಕ್ಕ ಶಿಕ್ಷೆಯೂ ಆಗುತ್ತದೆ ಎಂದು ತಿಳಿಸಿದರು.

ಬಿಜೆಪಿ ಮುಖಂಡ, ಉಪ್ಪಳ್ಳಿಯ ಅನ್ವರ್ ಹತ್ಯೆಯಾಗಿ ಎರಡು ವರ್ಷ ಕಳೆದರೂ ಆರೋಪಿಗಳ ಬಗ್ಗೆ ಸುಳಿವಿಲ್ಲ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರವೀಣ್ ಸೂದ್, ಈ ಪ್ರಕರಣ ಸಂಬಂಧ ಹಿಂದಿನ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆಗ ಕೈಗೊಂಡಿದ್ದಾರೆ. ತನಿಖೆಯಲ್ಲಿ ಸಾಕಷ್ಟು ಪ್ರಗತಿಯನ್ನೂ ಸಾಧಿಸಿದ್ದಾರೆ. ಸದ್ಯ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರಿದಿದೆ. ಈ ಹಂತದಲ್ಲಿ ಪ್ರಕರಣ ಕುರಿತು ಮಾತನಾಡಲಾಗದು ಎಂದಷ್ಟೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X