ಬ್ರಹ್ಮಾವರ: ಗ್ರಾಮೀಣ ಯುವಜನರ ತರಬೇತಿ ಸಮಾರೋಪ

ಉಡುಪಿ, ಸೆ.14: ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಮತ್ತು ಗ್ರಾಮ ವಿಕಾಸ ಸಮಿತಿ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಆತ್ಮನಿರ್ಭರ್ ಭಾರತ ಯೋಜನೆಯಡಿಯಲ್ಲಿ ಗ್ರಾಮೀಣ ಯುವಜನತೆಗೆ ಆಯೋಜಿಸಲಾದ ಆರು ದಿನಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಡಾ. ಎಸ್.ಯು ಪಾಟೀಲ್ ಮಾತನಾಡಿ, ಶಿಬಿರಾರ್ಥಿಗಳು ತರಬೇತಿಯ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಬದುಕುವಂತೆ ತಿಳಿಸಿದರು.
ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ, ಬ್ರಹ್ಮಾವರದ ಕೃಷಿ ಡಿಪ್ಲೋಮಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸುಧೀರ್ ಕಾಮತ್, ಉಡುಪಿ ವಲಯದ ಆತ್ಮನಿರ್ಭರ್ ಅಭಿಯಾನ ಬಳಗದ ಸಂಚಾಲಕ ಶಶಾಂಕ್ ಶಿವತ್ತಾಯ,
ಉಡುಪಿ ಜಿಲ್ಲೆ ಗ್ರಾಮವಿಕಾಸ ಸಮಿತಿಯ ಪ್ರಮೋದ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಧನಂಜಯ ಬಿ. ಸ್ವಾಗತಿಸಿದರು. ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ಸುನಿಲ್ ಕಾರ್ಯಕ್ರಮ ನಿರೂಪಿಸಿದರು. ಗ್ರಾಮವಿಕಾಸ ಸಮಿತಿ ಸದಸ್ಯ ಪ್ರಥ್ವಿರಾಜ್ ಶೆಟ್ಟಿ ಕುರಾಡಿ ವಂದಿಸಿದರು.







