ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಕಾರ್ಕಳ, ಸೆ.14: ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಯಾ ನೆಲ್ಲಿಗುಡ್ಡೆ ನಿವಾಸಿ ಜಿನ್ನಪ್ಪಪೂಜಾರಿ ಎಂಬವರ ಪತ್ನಿ ಶೋಭಾ(60) ಎಂಬವರು ಮಾನಸಿಕವಾಗಿ ನೊಂದು ಸೆ.14ರಂದು ಬೆಳಗ್ಗೆ ಮನೆಯ ಹಿಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕುದಿ ಗ್ರಾಮದ ಬೈದಬೆಟ್ಟುವಿನ ಶಾರದಾ(48) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.13ರಂದು ಸಂಜೆ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story