ಉಡುಪಿ: ಬೆಳೆ ಸಮೀಕ್ಷೆ ಉತ್ಸವದ ಮಾಹಿತಿ ರಥಕ್ಕೆ ಚಾಲನೆ

ಉಡುಪಿ, ಸೆ.14: ಉಡುಪಿ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ವತಿ ಯಿಂದ ತಯಾರಿಸಲಾದ 2020-21ನೇ ಸಾಲಿನ ಬೆಳೆ ಸಮೀಕ್ಷೆ ಉತ್ಸವದ ಮಾಹಿತಿ ರಥಕ್ಕೆ ಇಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಉಪಾಧ್ಯಕ್ಷ ಶರತ್ ಬೈಲಕೆರೆ, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷೆ ಶಿಲ್ಪಾ ರವೀಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕ ಮೋಹನ್‌ರಾಜ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಕೃಷಿ ಅಧಿಕಾರಿಗಳಾದ ವೃಂದಾ ಕೆ.ಎಸ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





