Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜ್ಞಾನದ ಸೂಪರ್ ಪವರ್ ಆಗಿ ಭಾರತ: ನೂತನ...

ಜ್ಞಾನದ ಸೂಪರ್ ಪವರ್ ಆಗಿ ಭಾರತ: ನೂತನ ಶಿಕ್ಷಣ ನೀತಿ ರಾಷ್ಟ್ರೀಯ ಸಮ್ಮೇಳನದಲ್ಲಿ ಡಿಸಿಎಂ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ15 Sept 2020 5:22 PM IST
share
ಜ್ಞಾನದ ಸೂಪರ್ ಪವರ್ ಆಗಿ ಭಾರತ: ನೂತನ ಶಿಕ್ಷಣ ನೀತಿ ರಾಷ್ಟ್ರೀಯ ಸಮ್ಮೇಳನದಲ್ಲಿ ಡಿಸಿಎಂ ವಿಶ್ವಾಸ

ಬೆಂಗಳೂರು, ಸೆ.15: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಭಾರತವು ಜಗತ್ತಿನಲ್ಲಿಯೆ ಜ್ಞಾನದ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ವ್ಯಕ್ತಪಡಿಸಿದರು.

ಮಂಗಳವಾರ ನಗರದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕ್ರಿಸ್ತು ಜಯಂತಿ ಕಾಲೇಜು ಹಾಗೂ ಬೆಂಗಳೂರು ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರ ಹಮ್ಮಿಕೊಂಡಿದ್ದ ಶಿಕ್ಷಣ ನೀತಿ ಜಾರಿ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಭಾರತದ ಶಿಕ್ಷಣ ವ್ಯವಸ್ಥೆ ಹೇಗಿರಬೇಕು? ಯಾವ ದಿಕ್ಕಿನಲ್ಲಿ ಸಾಗಬೇಕು? ಎಂಬ ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಿರುವ ಶಿಕ್ಷಣ ನೀತಿ, ಇನ್ನು ಕೆಲವೇ ವರ್ಷಗಳಲ್ಲಿ ಭಾರತವನ್ನು ಆಮೂಲಾಗ್ರವಾಗಿ ಬದಲಾಯಿಸಲಿದೆ ಎಂಬ ಅಚಲ ನಂಬಿಕೆ ನನಗಿದೆ ಎಂದು ಅವರು ಹೇಳಿದರು.

ಶಿಕ್ಷಣ ನೀತಿಯಲ್ಲಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು ರೂಪಿಸುವುದು, ಗುಣಮಟ್ಟದ ಬೋಧನೆ, ಗುಣಮಟ್ಟದ ಕಲಿಕೆ ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಅತ್ಯಂತ ಮಹತ್ವದ ಅಂಶಗಳು. ಇದರ ಜತೆಗೆ, ಬಹು ವಿಷಯಗಳ ಕಲಿಕೆ ಹಾಗೂ ವಿದ್ಯಾರ್ಥಿಗಳಿಗೆ ಕಲಿಕೆಯ ಅನೇಕ ಆಯ್ಕೆಗಳೂ ಇರುತ್ತವೆ. ಈ ಹಿನ್ನೆಲೆಯಲ್ಲಿ ಬಹುಮುಖ ಪ್ರತಿಭೆಗಳು ಹೊರಬರಲು ಹೊಸ ನೀತಿ ಎಲ್ಲ ರೀತಿಯ ಉತ್ತೇಜನ ನೀಡುತ್ತದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ಜಾರಿಯತ್ತ ದೃಢವಾದ ಹೆಜ್ಜೆ: ಇದೇ ವೇಳೆ ಶಿಕ್ಷಣ ನೀತಿಯ ಜಾರಿಯತ್ತ ರಾಜ್ಯ ಸರಕಾರವು ಅತ್ಯಂತ ದೃಢವಾದ ಹೆಜ್ಜೆಗಳನ್ನು ಇಡುತ್ತಿದೆ. ಮುಖ್ಯವಾಗಿ ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳುವತ್ತ ಮಗ್ನವಾಗಿದೆ. ಇದರ ಜತೆಯಲ್ಲಿಯೆ ಹೊಸ ಶಿಕ್ಷಣ ನೀತಿ ಅತ್ಯಂತ ಪರಿಣಾಮಕಾರಿಯಾಗಿ ಜಾರಿ ಆಗಬೇಕಾದರೆ ವಿಶ್ವವಿದ್ಯಾಲಯಗಳ ಪಾತ್ರ ಬಹುಮುಖ್ಯವಾಗಿದೆ. ಜತೆಗೆ, ಸಮಾಜದ ಪ್ರತಿಯೊಬ್ಬರೂ ಇದಕ್ಕಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಕರೆ ನೀಡಿದರು.

ಈ ಸಮ್ಮೇಳನದಲ್ಲಿ ಶಿಕ್ಷಣ ನೀತಿ ಸಮಿತಿಯ ಸದಸ್ಯ ಪ್ರೊ.ಎಂ.ಕೆ.ಶ್ರೀಧರ್, ಬೆಂಗಳೂರು ಉತ್ತರ ವಿವಿ ಉಪ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜು, ಕ್ರಿಸ್ತು ಜಯಂತಿ ಕಾಲೇಜಿನ ಪ್ರಾಂಶುಪಾಲ ಡಾ.ಅಗಸ್ಟೀನ್ ಜಾರ್ಜ್ ಮುಂತಾದವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X