Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈಮಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನ...

ವೈಮಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ15 Sept 2020 6:40 PM IST
share
ವೈಮಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನ ಅನುಮೋದನೆ

ಹೊಸದಿಲ್ಲಿ, ಸೆ.15: ಭಾರತದ ವಾಯುಯಾನ ಸುರಕ್ಷತಾ ಶ್ರೇಯಾಂಕವನ್ನು ಸುಧಾರಿಸುವ ಮತ್ತು ವಾಯುಯಾನ ನಿಯಂತ್ರಕ ಸಂಸ್ಥೆಗಳಿಗೆ ಶಾಸನಬದ್ಧ ಸ್ಥಾನಮಾನ ಕಲ್ಪಿಸುವ ಉದ್ದೇಶದ ವೈಮಾನಿಕ ತಿದ್ದುಪಡಿ ಮಸೂದೆ 2020ಕ್ಕೆ ಸುಮಾರು ಒಂದು ಗಂಟೆಯ ಚರ್ಚೆ ಬಳಿಕ ರಾಜ್ಯಸಭೆ ಅನುಮೋದನೆ ನೀಡಿದೆ. ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಮಂಗಳವಾರ ಮಂಡಿಸಿದ ಈ ಮಸೂದೆಗೆ ಮಾರ್ಚ್‌ನಲ್ಲಿ ಮಸೂದೆಗೆ ಲೋಕಸಭೆಯ ಅನುಮೋದನೆ ದೊರಕಿತ್ತು.

ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ), ಬ್ಯೂರೊ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ(ಬಿಸಿಎಎಸ್) ಮತ್ತು ಏರ್‌ಕ್ರಾಫ್ಟ್ ಆ್ಯಕ್ಸಿಡೆಂಟ್ ಇನ್‌ವೆಸ್ಟಿಗೇಷನ್ ಬ್ಯೂರೊ(ಎಎಐಬಿ)ಗಳನ್ನು ಶಾಸನಬದ್ಧ ಸಂಸ್ಥೆಗಳನ್ನಾಗಿ ಪರಿವರ್ತಿಸುವ ಉದ್ದೇಶದ ಮಸೂದೆ ಇದಾಗಿದೆ. ಹೊಸ ಮಸೂದೆ ಜಾರಿಗೊಂಡ ಬಳಿಕ ಅದನ್ನು ಉಲ್ಲಂಘಿಸುವವರಿಗೆ 2 ವರ್ಷದ ಜೈಲುಶಿಕ್ಷೆ ಅಥವಾ 10 ಲಕ್ಷ ರೂ. ದಂಡ, ಅಥವಾ ಎರಡನ್ನೂ ಒಟ್ಟಿಗೇ ವಿಧಿಸಬಹುದಾಗಿದೆ. ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ವಿಮಾನದೊಳಗೆ ಕೊಂಡೊಯ್ಯುವುದು, ವಿಮಾನ ನಿಲ್ದಾಣದ ಸುತ್ತ ಅಕ್ರಮ ನಿರ್ಮಾಣ ಕಾಮಗಾರಿಗೆ 10 ಲಕ್ಷದಿಂದ 1 ಕೋಟಿ ರೂ.ವರೆಗೆ ದಂಡ ವಿಧಿಸಲಾಗುವುದು. ವಾಯುಯಾನ ಕ್ಷೇತ್ರದಲ್ಲಿ ಅಮೆರಿಕ ಮತ್ತು ಚೀನಾದ ಬಳಿಕ ಭಾರತ ವಿಶ್ವದಲ್ಲಿ ಅತೀ ದೊಡ್ಡ ಮಾರುಕಟ್ಟೆಯಾಗಿದೆ. 2008-09ರಿಂದ 2013-14ರವರೆಗಿನ ಐದು ವರ್ಷದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ 9% ಹೆಚ್ಚಳವಾಗಿದ್ದರೆ 2014-15ರಿಂದ 2018-20ರವರೆಗಿನ ಅವಧಿಯಲ್ಲಿ 12.4% ಹೆಚ್ಚಳವಾಗಿದೆ.

ಈಗ ಭಾರತದ ವಾಯುಕ್ಷೇತ್ರದಲ್ಲಿ 661 ವಿಮಾನಗಳು ಕಾರ್ಯನಿರ್ವಹಿಸುತ್ತಿದ್ದು ಮುಂದಿನ 5 ವರ್ಷಗಳಲ್ಲಿ 1,200 ಹೆಚ್ಚುವರಿ ವಿಮಾನಗಳು ಕಾರ್ಯನಿರ್ವಹಿಸಲಿವೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದರು.

ವಿಪಕ್ಷಗಳು ಮಸೂದೆಯನ್ನು ವಿರೋಧಿಸಿವೆ. ವಾಯುಯಾನ ಉದ್ಯಮದಲ್ಲಿ ಹಲವು ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ವಾಯುಸಂಚಾರ ನಿಯಂತ್ರಣ ಸಿಬಂದಿಗಳ ಹುದ್ದೆಯೂ ಖಾಲಿಯಿದ್ದು ಇವುಗಳನ್ನು ಭರ್ತಿ ಮಾಡಲು ಸರಕಾರ ಮುಂದಾಗಬೇಕು ಎಂದು ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಕೆಸಿ ವೇಣುಗೋಪಾಲ್ ಹೇಳಿದರು. ಏರ್‌ಇಂಡಿಯಾದಿಂದ ಹೂಡಿಕೆ ಹಿಂದೆಗೆದುಕೊಳ್ಳುವ ಸರಕಾರದ ನಿರ್ಧಾರಕ್ಕೂ ವಿಪಕ್ಷಗಳು ಅಸಮಾಧಾನ ಸೂಚಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X