Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವದೇಶಿ ಉತ್ಪನ್ನಗಳನ್ನು ಪ್ರೋತ್ಸಾಹಿಸಿ:...

ಸ್ವದೇಶಿ ಉತ್ಪನ್ನಗಳನ್ನು ಪ್ರೋತ್ಸಾಹಿಸಿ: ದಿನಕರ ಬಾಬು

ವಾರ್ತಾಭಾರತಿವಾರ್ತಾಭಾರತಿ15 Sept 2020 7:47 PM IST
share
ಸ್ವದೇಶಿ ಉತ್ಪನ್ನಗಳನ್ನು ಪ್ರೋತ್ಸಾಹಿಸಿ: ದಿನಕರ ಬಾಬು

ಉಡುಪಿ, ಸೆ.15: ಉಡುಪಿ ಸೀರೆಗಳು ಉಡುಪಿಯ ಹೆಮ್ಮೆಯ ಸ್ಥಳೀಯ ಉತ್ಪನ್ನವಾಗಿದ್ದು, ಪ್ರಧಾನಮಂತ್ರಿ ಅವರು ನೀಡಿದ ಕರೆಯಂತೆ, ಸಾರ್ವಜನಿಕರು ಸ್ವದೇಶಿ ವಸ್ತುಗಳ ಬಳಕೆ, ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಬೆಂಬಲ ನೀಡಬೇಕು ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಮಂಗಳವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದ ಆವರಣದಲ್ಲಿ, ಜಿಲ್ಲಾ ಪಂಚಾಯತ್, ಉಡುಪಿ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಉಡುಪಿ ಜಿಲ್ಲೆಯ ಕೈಮಗ್ಗ ನೇಕಾರರ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್’ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಕೈಮಗ್ಗ ನೇಕಾರರ ಸಹಕಾರ ಸಂಘಗಳ ಕೈಮಗ್ಗ ನೇಕಾರರಿಂದ ಉತ್ಪಾದಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿ ಜಿಲ್ಲೆಯ ಹೆಮ್ಮೆಯಾದ ಉಡುಪಿ ಸೀರೆಗಳ ಬಳಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡುವ ಮೂಲಕ ಸ್ಥಳೀಯ ಉತ್ಪನ್ನಕ್ಕೆ ಮಾರುಕಟ್ಟೆ ವ್ಯವಸ್ಥೆ ಒದಗಿಸಿ ಅದನ್ನು ಪೋತ್ಸಾಹಿಸಬೇಕಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಉಡುಪಿ ಸೀರೆಯ ಬಳಕೆ ಮಾಡುತ್ತಾರೆ. ಸ್ಥಳೀಯರಾದ ನಾವು ಉಡುಪಿ ಸೀರೆಯನ್ನು ಬಳಕೆ ಮಾಡುವ ಮೂಲಕ ನಮ್ಮದೇ ಸ್ಥಳೀಯ ಉತ್ಪನ್ನಕ್ಕೆ ಹೆಚ್ಚಿನ ಬೆಂಬಲ ನೀಡಬೇಕು ಎಂದು ದಿನಕರ ಬಾಬು ಹೇಳಿದರು.

ಉಡುಪಿ ಕೈಮಗ್ಗ ಸೀರೆಗಳು ನಮ್ಮದೇ ನೇಕಾರರ ವಿಶಿಷ್ಟ ಕಲೆಯಾಗಿದ್ದು, ಈ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ನ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಸದಸ್ಯರ ವಿಶೇಷ ಆಸಕ್ತಿಯಿಂದ ಉಡುಪಿ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿತ್ತು.

ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ, ಬ್ರಹ್ಮಾವರ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘಗಳ ಸದಸ್ಯರುಉಡುಪಿ ಸೀರೆಗಳ ಮಾರಾಟದಲ್ಲಿ ಭಾಗವಹಿ ಸಿದ್ದರು. 850ರೂ.ರಿಂದ 1400 ರೂ.ವರೆಗೆನ ಸೀರೆಗಳು ಪ್ರದರ್ಶನದಲ್ಲಿ ಲಭ್ಯವಿದ್ದು, ಪುರುಷರ ಉಡುಪುಗಳು ಸಹ ಲಭ್ಯವಿದೆ.

ಕೈಮಗ್ಗದ ಉತ್ಪನ್ನಗಳಿಗೆ ಈಗ ಬೇಡಿಕೆ ಬರುತ್ತಿದ್ದು, ಕಾರ್ಮಿಕರ ಸಮಸ್ಯೆಯಿಂದ ಉತ್ಪಾದನೆ ಕಡಿಮೆ ಇದೆ. ಸ್ಥಳೀಯರಿಂದ ಉತ್ತಮ ಬೆಂಬಲ ದೊರೆಯುತ್ತಿದೆ ಎನ್ನುತ್ತಾರೆ ಮಾರಾಟಗಾರ ಮಾಧವ ಅವರು.

ಸಮಾರಂಭದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೊಟ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕೈಮಗ್ಗ ಜವಳಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಶಿವಶಂಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X