ಬೆಳ್ತಂಗಡಿ: ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಎಸ್.ಪಿ ಭೇಟಿ

ಬೆಳ್ತಂಗಡಿ : ತಾಲೂಕಿನಲ್ಲಿ ಎರಡು ವಾರಗಳ ಅಂತರದಲ್ಲಿ ಮುಸ್ಲಿಂ ಸಮಾಜವನ್ನು ಗುರಿಯಾಗಿಸಿ ದೌರ್ಜನ್ಯ ನಡೆಯುತ್ತಿದ್ದು ಈ ಬಗ್ಗೆ ನ್ಯಾಯ ಕೊಡಬೇಕು ಮತ್ತು ಇದರ ಸತ್ಯಾಸತ್ಯತೆ ತಿಳಿದು ಪೊಲೀಸ್ ಇಲಾಖೆ ಪ್ರಾಮಾಣಿಕವಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಕೈಗೊಳ್ಳಬೇಕು, ಜೊತೆಗೆ ತಾಲೂಕಿನ ಹೊರಗಿನಿಂದ ಬಂದ ಕೆಲವು ಸಂಘಟನೆಗಳ ವ್ಯಕ್ತಿಗಳು ಕೋಮು ಪ್ರಚೋದನಾಕಾರಿ ಹೇಳಿಕೆ ನೀಡಿ ಗಲಭೆಗೆ ಸಂಚು ರೂಪಿಸುತ್ತಿದೆ ಎಂದು ತಾಲೂಕು ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಇಂದು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ (ಎಸ್.ಪಿ) ಲಕ್ಷ್ಮೀ ಪ್ರಸಾದ್ ಐಪಿಎಸ್ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಯಿತು.
Next Story





