Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಲ ಕೊರೆತಕ್ಕೆ ಶಾಶ್ವತ ಪರಿಹಾರ: ಕಪಿಲ್...

ಕಡಲ ಕೊರೆತಕ್ಕೆ ಶಾಶ್ವತ ಪರಿಹಾರ: ಕಪಿಲ್ ಮೋಹನ್

ವಾರ್ತಾಭಾರತಿವಾರ್ತಾಭಾರತಿ16 Sept 2020 8:02 PM IST
share
ಕಡಲ ಕೊರೆತಕ್ಕೆ ಶಾಶ್ವತ ಪರಿಹಾರ: ಕಪಿಲ್ ಮೋಹನ್

ಮಂಗಳೂರು, ಸೆ.16:ದ.ಕ. ಜಿಲ್ಲೆಯಲ್ಲಿ ಕಡಲ ಕೊರತೆ ತೀವ್ರವಾಗಿದ್ದು, ಸಮುದ್ರ ಭಾಗದಲ್ಲಿ ವಾಸವಾಗಿರುವ ಜನರಲ್ಲಿ ಆಂತಕ ಮನೆ ಮಾಡಿದೆ. ಕಡಲ ಕೊರೆತ ಸಮಸ್ಯೆಯ ಹಾನಿ ತಡೆಗಟ್ಟಲು ಸರಕಾರದಿಂದ ಶಾಶ್ವತವಾದ ಪರಿಹಾರ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ಅದಷ್ಟು ಬೇಗನೆ ರೂಪಿಸಲಾಗುವುದು ಎಂದು ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಮ್ಯಾರಿಟೈಮ್ ಬೋರ್ಡ್ ಸಿಇಒ ಕಪಿಲ್ ಮೋಹನ್ ತಿಳಿಸಿದ್ದಾರೆ.

ಜಿಲ್ಲೆಯ ವಿವಿದೆಡೆ ಕಡಲಕೊರೆತ ನಿಯಂತ್ರಣಕ್ಕೆ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಬುಧವಾರ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಉನ್ನತ ತಾಂತ್ರಿಕತೆಯ ನೆರವಿನಿಂದ ಕಡಲಕೊರೆತಕ್ಕೆ ಶಾಶ್ವತವಾದ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು. ಉಳ್ಳಾಲದ ಮುಕ್ಕಚ್ಚೇರಿ ಬಳಿ ಈ ರೀತಿಯ ಕಾಮಗಾರಿ ನಡೆಸಲಾಗಿದ್ದು, ಇದರಿಂದ ಈ ವರ್ಷ ಈ ಪ್ರದೇಶದಲ್ಲಿ ಕಡಲಕೊರೆತ ಸಮಸ್ಯೆ ಎದುರಾಗಿರುವುದಿಲ್ಲ ಎಂದು ಕಪಿಲ್ ಮೋಹನ್ ಹೇಳಿದರು.

ಉಳ್ಳಾಲ ಮುಕ್ಕಚ್ಚೇರಿ ಕಡಲ ತೀರದಲ್ಲಿ ಎಡಿಬಿ ನೆರವಿನ ಕಾಮಗಾರಿಯ ಅಡಿಯಲ್ಲಿ ನಡೆಯುತ್ತಿರುವ 1,802 ಲ.ರೂ.ಮೊತ್ತದಲ್ಲಿ 635 ಮೀಟರ್ ಮತ್ತು 10 ಮೀಟರಿನ ಸಂರಕ್ಷಣೆ ತಡೆಗೋಡೆಯ ಪುನರ್ವಸತಿ ಯೋಜನೆಯ ಕಾಮಗಾರಿಯನ್ನು ಅವರು ಪರಿಶೀಲನೆ ನಡೆಸಿದರು.

ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸ ಬೇಕು. ಕರಾವಳಿಯ ಬಹುತೇಕ ಭಾಗಗಳಲ್ಲಿ ತಡೆಗೋಡೆ ನಿರ್ಮಾಣ ಮಾಡುವುದರಿಂದ ಜಿಲ್ಲೆಯಲ್ಲಿ ಕಡಲ ಕೊರೆತದ ಸಮಸ್ಯೆಗಳು ಕಡಿಮೆ ಯಾಗಲಿದೆ. ಮುಂದಿನ ದಿನದಲ್ಲಿ ಕಡಲ ಕೊರೆತವಾಗುವ ಭಾಗಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣವನ್ನು ಮಾಡುವಂತೆ ಸರಕಾರಕ್ಕೆ ವರದಿಯನ್ನು ನೀಡಲಾಗುವುದು ಎಂದು ಕಪಿಲ್ ಮೋಹನ್ ತಿಳಿಸಿದರು.

ಸೋಮೇಶ್ವರದ ಕೆಲವು ಭಾಗದಲ್ಲಿ ಕಡಲ ಕೊರೆತ ಹೆಚ್ಚಾಗಿದೆ. ಅದನ್ನು ತಪ್ಪಿಸುವ ಸಲುವಾಗಿ ಸರಕಾರವು ಹಲವು ಯೋಜನೆಯ ಮೂಲಕ ಅನುದಾನವನ್ನು ಬಿಡುಗಡೆಗೊಳಿಸಿ ತಾತ್ಕಾಲಿಕ ತಡೆಗೋಡೆ ನಿರ್ಮಾಣವನ್ನು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಾನಿಗೆ ಒಳಗಾದ ಪ್ರದೇಶಗಳಿಗೆ ಶಾಶ್ವತ ಪರಿಹಾರ ನೀಡಲಾಗುತ್ತದೆ ಎಂದರು.

ಕಪಿಲ್ ಮೋಹನ್ ಅವರು ತಣ್ಣೀರುಬಾವಿ ಭಾರತಿ ಶಿಪ್‌ಯಾರ್ಡ್, ಬೆಂಗರೆ ಜೆಟ್ಟಿ, ಅಳಿವೆ ಬಾಗಿಲು, ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಮುಕ್ಕಚ್ಚೇರಿ ಪ್ರದೇಶಗಳಿಗೆ ಭೇಟಿ ನೀಡಿ ಬಂದರು ಇಲಾಖೆ ಹಾಗೂ ಎಡಿಬಿ ಯೋಜನೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭ ಸುಸ್ಥಿರ ಕರಾವಳಿ ತೀರ ಸಂರಕ್ಷಣೆ ಹಾಗೂ ನಿರ್ವಹಣಾ ಯೋಜನೆ ಅಧಿಕಾರಿಗಳಾದ ಗೋಪಾಲ ನಾಯ್ಕ್, ಉಪನಿರ್ದೇಶಕ ಮುಹಮ್ಮದ್ ಹನೀಫ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X