Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರಿ...

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮ: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Sept 2020 10:56 PM IST
share
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮ: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ

ಮೈಸೂರು,ಸೆ.17: ಕೆಪಿಎಸ್‌ಸಿಯ ಡಿಜಿಟಲ್ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ. 2015 ರಲ್ಲಿ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಎಸ್‌ಸಿ ಮೇಲೆ ಗುರುತರ ಆರೋಪ ಮಾಡಿದ್ದಾರೆ. 2015 ರಲ್ಲಿ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ. ಕೆಲ ವಿದ್ಯಾರ್ಥಿಗಳು ಮೌಲ್ಯಮಾಪನದ ಉತ್ತರ ಪತ್ರಿಕೆಯನ್ನು ಆರ್.ಟಿ.ಐ ಮೂಲಕ ಪಡೆದು ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಕೆಲ ವಿದ್ಯಾರ್ಥಿಗಳು ಡಿಜಿಟಲ್ ಮೌಲ್ಯಮಾಪನದಲ್ಲಿ ಅಂಕಗಳನ್ನು ಬದಲಾವಣೆ ಮಾಡಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಪೂರಕವೆಂಬಂತೆ ಮಹಾರಾಷ್ಟ್ರ ಮೂಲದ ಇಂಡಿಯನ್ ಸೈಬರ್ ಇನ್ಸ್ಟಿಟ್ಯೂಟ್ ನವರು ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂಬ ವರದಿ ನೀಡಿದ್ದಾರೆ. ಉತ್ತರ ಪತ್ರಿಕೆಯ ಪ್ರತಿಗಳನ್ನು ಅಭ್ಯರ್ಥಿಗಳಿಗೆ ನೀಡಬೇಕೆಂದು ಕೋರ್ಟ್ ಆದೇಶಿಸಿದ್ದರೂ ಕೆಪಿಎಸ್‌ಸಿ ಉತ್ತರ ಪತ್ರಿಕೆ ನೀಡುತ್ತಿಲ್ಲ. ಅಭ್ಯರ್ಥಿಗಳ ಅಂಕಗಳನ್ನು ಟ್ಯಾಂಪರ್ ಮಾಡಿದ್ದಾರೆ ಎಂದು ದೂರಿದರು. 

ಮೌಲ್ಯಮಾಪಕರ ಸಹಿಯನ್ನು ಡಿಜಿಟಲ್ ರೂಪದಲ್ಲಿ ಮಾಡಬೇಕು. ಆದರೆ ಯಾವ ಮೌಲ್ಯಮಾಪಕರ ಸಹಿ ಇಲ್ಲದಿರುವುದು ಆರೋಪಕ್ಕೆ ಪುಷ್ಠಿ ನೀಡುವಂತಿದೆ. ಜೊತೆಗೆ ಅಭ್ಯರ್ಥಿಗಳಿಗೆ ಕಳುಹಿಸಿರುವ ಅಂಕಪಟ್ಟಿಯಲ್ಲಿ ಕೆಪಿಎಸ್‌ಸಿ ಲೋಗೋ ಮತ್ತು ಕಾರ್ಯದರ್ಶಿಯವರ ಸಹಿ ಇಲ್ಲ. ಈ ಲೋಪಗಳಿಗೆ ನಾವು ಕೆಪಿಎಸ್‌ಸಿ ಅಧ್ಯಕ್ಷರನ್ನು ದೂಷಣೆ ಮಾಡುತ್ತಿಲ್ಲ. ಇದರಲ್ಲಿ ಯಾವುದೋ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಎಂ.ಲಕ್ಷ್ಮಣ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡರುಗಳಾದ ಮಂಜುಳಾ ಮಾನಸ, ಕೆ.ಎಸ್.ಶಿವರಾಮ್, ಶಿವಣ್ಣ, ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬೆದರಿಸುವ ತಂತ್ರಕ್ಕೆ ನಾವು ಹೆದರುವುದಿಲ್ಲ: ಎಂ.ಲಕ್ಷ್ಮಣ್
ತಮ್ಮ ಮೇಲಿನ ಕೇಸ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಎಂ.ಲಕ್ಷ್ಮಣ್, ನನ್ನ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಂ.ಲಕ್ಷ್ಮಣ್, ಹಾಗೂ ಮಂಜುಳಾ ಮಾನಸ ಯಾರು ಎಂದು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಬಿಜೆಪಿಯವರ ಈ ಬೆದರಿಸುವ ತಂತ್ರಕ್ಕೆ ನಾವು ಹೆದರುವುದಿಲ್ಲ ಎಂದು ಹೇಳಿದರು.

ಲಕ್ಷ್ಮಣ್ ಹಾಗೂ ಮಂಜುಳಾ ಮಾನಸ ಯಾರು ಎಂದು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪೊಲೀಸರು ನನ್ನ ಹಾಗೂ ಮಂಜುಳಾ ಮಾನಸ ಯಾರು, ಎಷ್ಟು ವರ್ಷದಿಂದ ಎಲ್ಲಿದ್ದರು ಎಂಬೆಲ್ಲಾ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪೊಲೀಸರ ಕೆಲಸ ಏನು ಎಂದು ನನಗೆ ತಿಳಿಯುತ್ತಿಲ್ಲ. ನಾಳೆ ಅಥವಾ ನಾಳಿದ್ದು ಬೆಂಗಳೂರಿನ ಕಮಿಷನರ್ ಭೇಟಿ ಮಾಡಿ ಏನು ಮಾಹಿತಿ ಬೇಕು ಕೇಳುತ್ತೇನೆ ಎಂದು ತಿಳಿಸಿದರು. 

ಬಿಜೆಪಿಯವರ ಈ ಬೆದರಿಸುವ ತಂತ್ರಕ್ಕೆ ನಾವು ಹೆದರುವುದಿಲ್ಲ. ನಮ್ಮ ಮನೆಯ ಸುತ್ತಮುತ್ತ ಎಲ್ಲರನ್ನೂ ವಿಚಾರಿಸುತ್ತಿದ್ದಾರೆ. ಪಾರ್ಕ್ ನಲ್ಲಿ ವಾಕಿಂಗ್ ಗೆ ಜನರನ್ನು ಬಿಡುತ್ತಿಲ್ಲ. ನಮ್ಮ ಧ್ವನಿಯನ್ನು ಹತ್ತಿಕ್ಕುವ ಕೆಲಸ ಕಳೆದ 6 ವರ್ಷದಿಂದ ನಡೆಯುತ್ತಿದೆ ಎಂದು ಎಂ.ಲಕ್ಷ್ಮಣ್ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X