Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಸಂಸದ ನಳಿನ್‌ಗೆ ಸಿಪಿಎಂ ಮನವಿ

​ಸಂಸದ ನಳಿನ್‌ಗೆ ಸಿಪಿಎಂ ಮನವಿ

ವಾರ್ತಾಭಾರತಿವಾರ್ತಾಭಾರತಿ18 Sept 2020 5:51 PM IST
share

ಮಂಗಳೂರು, ಸೆ.18: ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಶುಕ್ರವಾರ ಭೇಟಿಯಾದ ದ.ಕ.ಜಿಲ್ಲಾ ಸಿಪಿಎಂ ನಿಯೋಗವು ನಾಲ್ಕು ಪ್ರಮುಖ ಅಂಶಗಳ ಬಗ್ಗೆ ಸಂಸತ್‌ನಲ್ಲಿ ಧ್ವನಿ ಎತ್ತಲು ಮನವಿ ಸಲ್ಲಿಸಿದೆ.

ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಹಾಗೂ ಬೆಂಬಲ) ಸುಗ್ರೀವಾಜ್ಞೆ 2020, ಬೆಲೆ ಭರವಸೆ ಹಾಗೂ ಕೃಷಿ ಸೇವೆಗಳ ಕುರಿತ ರೈತ (ಸಶಕ್ತೀಕರಣ ಮತ್ತು ರಕ್ಷಣೆ) ಒಪ್ಪಂದ ಸುಗ್ರೀವಾಜ್ಞೆ 2020, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ-2020, ವಿದ್ಯುತ್ ಕಾಯ್ದೆ-2020 ಮತ್ತು ದೇಶದ ಕಾರ್ಮಿಕ ವರ್ಗದ ಯಥೇಚ್ಚ ಲೂಟಿ ನಡೆಸಲು ಕೈಗಾರಿಕೆಗಳ ಹಾಗೂ ಬಹುರಾಷ್ಟ್ರೀಯ ಕಂಪೆನಿಗಳ ಅನುಕೂಲ ಮಾಡುವ ಪ್ರಮುಖ ಕಾರ್ಮಿಕ ತಿದ್ದುಪಡಿ ಕಾಯ್ದೆಗಳ ಸಹಿತ ಎಲ್ಲ ಸುಗ್ರೀವಾಜ್ಞೆಗಳನ್ನು ವಾಪಸ್ ಪಡೆಯುವಂತೆ ಮತ್ತು ಅವುಗಳನ್ನು ಶಾಸನಗಳ ನ್ನಾಗಿಸುವ ಪ್ರಯತ್ನಗಳನ್ನು ತಡೆಯಲು ಕ್ರಮವಹಿಸಬೇಕು.

ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಬೇಕಾಗಿರುವ ಜಿಎಸ್‌ಟಿ ಬಾಕಿ, ಬಜೆಟ್ ಅನುದಾನದ ಬಾಕಿ, ಬರ ಹಾಗೂ ಅತಿವೃಷ್ಟಿ ಪರಿಹಾರ, ಕೋವಿಡ್ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಬೇಕು.

ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಸಂವಿಧಾನಾತ್ಮಕ ಹಕ್ಕುಗಳ ಉಳಿವಿಗಾಗಿ ಶಾಂತಿಯುತ ರಾಜಕೀಯ ಚಳುವಳಿಗಳನ್ನು ಕ್ರಿಮಿನಲ್ ಅಪರಾಧಗಳೆಂದು ಬಿಂಬಿಸುವ ಸಂವಿಧಾನ ವಿರೋಧಿಯಾದ ದುಷ್ಕೃತ್ಯವನ್ನು ತಡೆಯುವಂತೆ ಒತ್ತಾಯಿಸಬೇಕು. ಇಂತಹ ದುರ್ನಡತೆಯ ಆಧಾರದಲ್ಲಿ ಹೂಡಲಾದ ಮೊಕದ್ದಮೆಗಳನ್ನು ಬೇಷರತ್ತಾಗಿ ವಾಪಸ್ ಪಡೆಯಬೇಕು. ಇದರಂತೆ ಸುಳ್ಳು ಮೊಕದ್ದಮೆಯ ಆಧಾರದಲ್ಲಿ ಜೈಲಿಗೆ ತಳ್ಳಲಾದವರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಬೇಕು.

ಕಳೆದೊಂದು ದಶಕದಿಂದ ಗಂಭೀರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಕಳೆದ ಏಳೆಂಟು ತಿಂಗಳಿಂದ ಕೋವಿಡ್-19ರ ವೈರಾಣು ಸಾಂಕ್ರಾಮಿಕ ಧಾಳಿಗೆ ಸಿಲುಕಿದೆ. ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಇದರ ಹಾವಳಿಯನ್ನು ತಡೆಯಲು ಸಾಧ್ಯವಿರುವಾಗ ಭಾರತದಲ್ಲಿ ಅದು ವೇಗವಾಗಿ ವಿಸ್ತರಿಸಲ್ಪಡುತ್ತಿದೆ. ಕರ್ನಾಟಕ ರಾಜ್ಯವು ಈ 2020ರಲ್ಲಿ ಬರ ಹಾಗೂ 2-3 ಬಾರಿ ಅತೀವೃಷ್ಟಿ ಹಾಗೂ ಪ್ರವಾಹಗಳಿಗೆ ತುತ್ತಾಗಿದೆ. ಈ ಎಲ್ಲಾ ಸಂದರ್ಭಗಳಿಂದಲೂ ದೇಶದ ಹಾಗೂ ರಾಜ್ಯದ ಸಾಮಾನ್ಯ ಜನತೆಯ ಹಿತವನ್ನು ರಕ್ಷಿಸುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ. ಬದಲಿಗೆ ದೇಶದ ಹಾಗೂ ದೇಶಗಳ ಬಹುರಾಷ್ಟ್ರೀಯ ಸಂಸ್ಥೆಗಳ ವ್ಯಾಪಕವಾದ ಲೂಟಿಗೆ ದೇಶವನ್ನು ತೆರೆಯುತ್ತಿದೆ.

ಇದೀಗ ಜನತೆ ಕೋವಿಡ್ ಹಾಗೂ ಆರ್ಥಿಕ ಸಂಕಷ್ಟದಲ್ಲಿರುವಾಗ ಅವರ ಬದುಕಿನ ಮೇಲೆಯೇ ಮಾರಣಾಂತಿಕ ದಾಳಿಗಳನ್ನು ಈ ಅವಧಿಯಲ್ಲಿ ಸುಮಾರು 11 ಸುಗ್ರೀವಾಜ್ಞೆಗಳನ್ನು ಹೊರಡಿಸುವ ಮೂಲಕ ನಡೆಸಿದೆ. ಈ ಸಂಸತ್ ಅಧಿವೇಶನದಲ್ಲಿ ಅವುಗಳನ್ನು ಶಾಸನಗಳನ್ನಾಗಿ ಅಂಗೀಕ ರಿಸವ ಮೂಲಕ ಅದನ್ನು ಖಾತರಿಪಡಿಸುವ ಕ್ರೌರ್ಯವನ್ನು ಮೆರೆಯುತ್ತಿದೆ. ರಾಜ್ಯಗಳಿಗೆ ಸಂವಿಧಾನ ಕೊಡಮಾಡಿದ ಅಧಿಕಾರಗಳನ್ನು ಕೇಂದ್ರ ಸರಕಾರ ಮೊಟಕು ಮಾಡಿ ದೇಶದ ಒಕ್ಕೂಟವಾದಿ ಸ್ವರೂಪಕ್ಕೆ ಧಕ್ಕೆಯನ್ನುಂಟು ಮಾಡುತ್ತಿದೆ.

ಇಂತಹ ಎಲ್ಲಾ ಜನವಿರೋಧಿ ವಿಚಾರಗಳ ಸಂದರ್ಭ ದೇಶದ ಜನತೆ ಪ್ರತಿಭಟನೆಯಲ್ಲಿ ತೊಡಗಿದಾಗ ದೇಶದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆಗೆ ಕ್ರಮವಹಿಸುವ ಬದಲು ಅಧಿಕಾರ ದುರುಪಯೋಗವಾಗಿ ನಾಗರಿಕರನ್ನು ಬೆದರಿಸುವ, ಮೊಕದ್ದಮೆ ಹೂಡುವ, ಜೈಲಿಗೆ ತಳ್ಳುವ ಕಾರ್ಯ ನಡೆದಿದೆ. ಆದುದರಿಂದ ಸಂಸತ್ ಅಧಿವೇಶನದಲ್ಲಿ ಜನತೆಯ ಪರವಾಗಿ ಧ್ವನಿ ಎತ್ತಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಪಕ್ಷದ ನಿಯೋಗದಲ್ಲಿ ಕಾರ್ಯದರ್ಶಿ ವಸಂತ ಆಚಾರಿ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ.ಬಾಲಕೃಷ್ಣ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ವಾಸುದೇವ ಉಚ್ಚಿಲ್‌ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X