Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಎಸ್‍ಟಿ ಪರಿಹಾರ ನೀಡದ ಕೇಂದ್ರ ಸರಕಾರ,...

ಜಿಎಸ್‍ಟಿ ಪರಿಹಾರ ನೀಡದ ಕೇಂದ್ರ ಸರಕಾರ, ಸಾಲ ಎತ್ತಲು ಬಿಎಸ್‌ವೈ ಕೈಗೆ ಭಿಕ್ಷಾಪಾತ್ರೆ ನೀಡಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ18 Sept 2020 6:32 PM IST
share
ಜಿಎಸ್‍ಟಿ ಪರಿಹಾರ ನೀಡದ ಕೇಂದ್ರ ಸರಕಾರ, ಸಾಲ ಎತ್ತಲು ಬಿಎಸ್‌ವೈ ಕೈಗೆ ಭಿಕ್ಷಾಪಾತ್ರೆ ನೀಡಿದೆ: ಸಿದ್ದರಾಮಯ್ಯ

ಬೆಂಗಳೂರು, ಸೆ.18: ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಪ್ರಧಾನಿಗಳ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಕಳೆದ ವರ್ಷದ ಅತಿವೃಷ್ಟಿಗೆ 35,000 ಕೋಟಿ ರೂ.ಪರಿಹಾರ ಕೇಳಿದ್ದೀರಿ, ಆದರೆ ಕೇಂದ್ರ ಸರಕಾರ ನೀಡಿದ್ದು 1,869 ಕೋಟಿ ರೂ. ಈ ಬಾರಿ 8,000 ಕೋಟಿ ರೂ.ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್.ಡಿ.ಆರ್.ಎಫ್‍ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ಸಿಗುವಂತೆ ಮಾಡಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊರೋನ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ ನರೇಂದ್ರ ಮೋದಿ ಅವರಿಗೆ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ. ಪ್ರಧಾನಿಗೆ ಅವರ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಕೊರೋನ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಕೇಂದ್ರ ಸರಕಾರ, ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ನರೇಂದ್ರ ಮೋದಿ ಅವರ ಕಣ್ಣು ತೆರೆಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರಕಾರ ಘೋಷಿಸಿದ್ದ 20 ಲಕ್ಷ ಕೋಟಿ ರೂ.ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೋನ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್‍ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ ಎಂದು ಅವರು ಕೋರಿದ್ದಾರೆ.

ನ್ಯಾಯಬದ್ಧವಾಗಿ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‍ಟಿ ಪರಿಹಾರ 25,508 ಕೋಟಿ ರೂ. ನೀಡದೆ ದ್ರೋಹ ಬಗೆದಿರುವ ಕೇಂದ್ರ ಸರಕಾರ, ಸಾಲ ಎತ್ತಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈಗೆ ಭಿಕ್ಷಾಪಾತ್ರೆ ನೀಡಿದೆ. ಯಡಿಯೂರಪ್ಪ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ @BSYBJP ಅವರೇ,
ಕಾಡಿಬೇಡಿ ಕೊನೆಗೂ@PMOIndia ಭೇಟಿಗೆ ಅವಕಾಶ ಪಡೆದಿದ್ದೀರಿ.
ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಕಡಕ್ ಆಗಿ ಕೇಳಲು ಬಳಸಿಕೊಳ್ಳಿ.

ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ.
1/7#Justice4Kta

— Siddaramaiah (@siddaramaiah) September 18, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X