Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನನ ಮರಣ ಪ್ರಮಾಣ ಪತ್ರಗಳಿಗೆ ಡಿಜಿಟಲ್...

ಜನನ ಮರಣ ಪ್ರಮಾಣ ಪತ್ರಗಳಿಗೆ ಡಿಜಿಟಲ್ ಸಹಿ ಕಡ್ಡಾಯ : ಅಪರ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 Sept 2020 7:46 PM IST
share
ಜನನ ಮರಣ ಪ್ರಮಾಣ ಪತ್ರಗಳಿಗೆ ಡಿಜಿಟಲ್ ಸಹಿ ಕಡ್ಡಾಯ : ಅಪರ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಜಿಲ್ಲೆಯಲ್ಲಿ ಜನನ ಮರಣ ಪ್ರಮಾಣ ಪತ್ರಗಳು ಕಡ್ಡಾಯವಾಗಿ ಡಿಜಿಟಲ್ ಸಹಿಯ ಮೂಲಕ ವಿತರಣೆಯಾಗಬೇಕು ಎಂದು ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹೇಳಿದರು.

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಜನನ ಮರಣ ನೋಂದಣಿ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಗ್ರಾಮಲೆಕ್ಕಿಗರು ನೋಂದಣಾಧಿಕಾರಿಗಳಾಗಿದ್ದು, ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಜಿಲ್ಲಾ ಆಸ್ಪತ್ರೆಗಳಲ್ಲಿ ಸರಕಾರಿ ವೈದ್ಯಾಧಿಕಾರಿ ಉಪ ನೋಂದಣಾಧಿಕಾರಿಯಾಗಿದ್ದಾರೆ. ಮಹಾನಗರಪಾಲಿಕೆಯಲ್ಲಿ ಆರೋಗ್ಯಾಧಿಕಾರಿ ನೋಂದಣಾಧಿ ಕಾರಿಯಾಗಿದ್ದು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಆರೋಗ್ಯ ನಿರೀಕ್ಷಕರು ನೋಂದಣಾಧಿಕಾರಿ ಗಳಾಗಿದ್ದಾರೆ. ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸರಕಾರಿ ಆಸ್ಪತ್ರೆಗಳಲ್ಲಿ ಸರಕಾರಿ ವೈದ್ಯರು ಉಪನೋಂದಣಾಧಿಕಾರಿಗಳಾಗಿದ್ದು ಇವರು ಗಳು ಡಿಜಿಟಲ್ ‘ಕೀ’ಯನ್ನು ಅಳವಡಿಸಿಕೊಳ್ಳಬೇಕು. ಕಡ್ಡಾಯವಾಗಿ ಡಿಜಿಟಲ್ ಸಹಿಯ ಮೂಲಕ ಜನನ ಮರಣ ಪ್ರಮಾಣ ಪತ್ರಗಳನ್ನು ನೀಡ ಬೇಕು. ಆದಷ್ಟು ಹಸ್ತ ಸಹಿಯನ್ನು ಕಡಿಮೆಗೊಳಿಸಬೇಕು ಎಂದು ಸೂಚಿಸಿದರು.

ಗ್ರಾಮಗಳಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳಾಗಿ ನೇಮಿಸಿದ್ದು, ಈ ಬಗ್ಗೆ ತಾಲೂಕು ಮಟ್ಟದಲ್ಲಿ ಎಲ್ಲಾ ಪಿಡಿಒಗಳಿಗೆ ಸೂಕ್ತ ತರಬೇತಿ ಜೊತೆಗೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಎಡಿಸಿ ರೂಪಾ ಹೇಳಿದರು.

ಅಂಕಿ ಅಂಶದ ಪ್ರಕಾರ ಈಗಾಗಲೇ ಜಿಲ್ಲೆಯ ನಗರ ಮತ್ತು ಪಟ್ಟಣಗಳಲ್ಲಿ ಜನನ ಮರಣ ಪ್ರಮಾಣ ಪತ್ರ ತಡವಾಗಿ ನೋಂದಣಿಯಾಗಿರುವುದು ಬೆಳಕಿಗೆ ಬಂದಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಎಲ್ಲಾ ತಾಲೂಕಿನ ತಹಶೀಲ್ದಾರ್‌ಗಳು ನೋಂದಣಾಧಿಕಾರಿ ಹಾಗೂ ಉಪನೋಂದಣಾಧಿ ಕಾರಿಗಳ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಎಂದರು.

ಪ್ರತೀ ತಾಲೂಕಿನಲ್ಲಿ ಸಮನ್ವಯ ಸಮಿತಿ ಸಭೆ ಕರೆದು ತಡವಾಗಿ ನೋಂದಣಿಯಾಗಿರುವ ಕುರಿತು ಚರ್ಚೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಜಿಲ್ಲೆಯ ಎಲ್ಲಾ ನೋಂದಣಿ ಘಟಕವು ನಿಯಾಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇ.100ರಷ್ಟು ಘಟನೆಗಳು ದಾಖಲಾತಿಯಾಗಿರುವ ಬಗ್ಗೆ ಕಂದಾಯ, ನಗರಾಭಿವೃದ್ಧಿ ಹಾಗೂ ಸಾಂಖ್ಯಿಕ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದರು.

2020ನೇ ಸಾಲಿನ ಜನವರಿಯಿಂದ ಆಗಸ್ಟ್‌ವರೆಗಿನ ಅಂಕಿ ಅಂಶದ ಪ್ರಕಾರ ಜಿಲ್ಲೆಯ ನಗರ ಹಾಗೂ ಗ್ರಾಮಾಂತರಗಳಲ್ಲಿ 18,824 ಜನನ ಪ್ರಮಾಣ ಪತ್ರ ನೋಂದಣಿಯಾಗಿದ್ದು, 10,139 ಮರಣ ಪ್ರಮಾಣ ಪತ್ರ ನೋಂದಣಿಯಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಉದಯ್ ಶೆಟ್ಟಿ ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಮದನ್ ಮೋಹನ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X