Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡ್ರಗ್ಸ್ ಪ್ರಕರಣದ ತನಿಖೆ...

ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವುದು ಮಂತ್ರಿಗಳಾ? ಪೊಲೀಸರಾ?: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Sept 2020 9:43 PM IST
share
ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವುದು ಮಂತ್ರಿಗಳಾ? ಪೊಲೀಸರಾ?: ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆ. 18: `ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸ್ ಅಧಿಕಾರಿಗಳ ತನಿಖೆಯಲ್ಲಿ ನಾವು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಪೊಲೀಸರಿಗೆ ಯಾರ ಮೇಲೆ ಅನುಮಾನ ಇದೆಯೋ ಅವರನ್ನು ಕರೆಸಿ ವಿಚಾರಣೆ ನಡೆಸಲಿ, ತಪ್ಪೇನಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಸದಾಶಿವನಗರದಲ್ಲಿನ ತನ್ನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ಪೊಲೀಸರು ಏಕಾಏಕಿ ಯಾರಿಗೂ ವಿಚಾರಣೆಗೆ ಬರುವಂತೆ ನೋಟೀಸ್ ನೀಡುವುದಿಲ್ಲ. ಅವರಿಗೆ ಸಿಕ್ಕ ಮಾಹಿತಿ ಆಧಾರದ ಮೇಲೆ ಅವರು ವಿಚಾರಣೆ ನಡೆಸಲು ನಿರ್ಧರಿಸಿರುತ್ತಾರೆ. ಅವರಿಗೆ ಬೇಕಾದ ಮಾಹಿತಿಯನ್ನು ಅವರು ಪಡೆಯಲಿ. ಯಾರು ತಪ್ಪು ಮಾಡಿರುತ್ತಾರೋ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ. ಆದರೆ, ನನ್ನ ಪ್ರಕಾರ ಯಾರದ್ದೋ ರಾಜಕಾರಣದ ಒತ್ತಡದ ಮೇಲೆ ಒಬ್ಬರನ್ನು ಕರೆದು ಅವರನ್ನು ಸಿಲುಕಿಸುವ ಕೆಲಸ ಮಾಡಬಾರದು ಎಂದು ಹೇಳಿದರು.

ಬೀದಿಯಲ್ಲಿ ಹೋಗುವವರ ಮಾತಿಗೆ ತಲೆಕೆಡಿಸಿಕೊಳ್ಳಲ್ಲ: ಶಾಸಕ ಝಮೀರ್ ಅಹ್ಮದ್ ಖಾನ್ ಅವರ ಹೆಸರು ಈ ಪ್ರಕರಣದಲ್ಲಿ ಕೇಳಿಬಂದಿಲ್ಲ. ಬೀದಿಯಲ್ಲಿ ಹೋಗುವವರು ನೂರೈವತ್ತು ಮಾತನಾಡುತ್ತಾರೆ. ಝಮೀರ್ ವೈಯಕ್ತಿಕ ಜೀವನದಲ್ಲಿ ಕೊಲಂಬೋಗಾದರೂ ಹೋಗಲಿ, ಅಮೆರಿಕಾಕ್ಕಾದರೂ ಹೋಗಲಿ, ಲಾಸ್ ವೇಗಸ್‍ಗಾದರೂ ಹೋಗಲಿ, ಅವರ ದುಡ್ಡಲ್ಲಿ ಅವರು ಹೋಗುತ್ತಾರೆ. ರಸ್ತೆಯಲ್ಲಿ ಮಾತಾಡಿದವರ ಮಾತಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಝಮೀರ್ ಅಹ್ಮದ್ ಒಬ್ಬ ಜವಾಬ್ದಾರಿಯುತ ಶಾಸಕ, ಈ ವಿಚಾರ ಹೇಗೆ ನಿಭಾಯಿಸಬೇಕೆಂದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು.

ಡ್ರಗ್ಸ್ ತನಿಖೆ ನಡೆಸುತ್ತಿರೋದು ಮಂತ್ರಿಗಳಾ? ಪೊಲೀಸರಾ?: ಡ್ರಗ್ಸ್ ಪ್ರಕರಣದಲ್ಲಿ ಒಬ್ಬೊಬ್ಬ ಮಂತ್ರಿಗಳು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆ ನೋಡಿ ಭಯ ಆಗುತ್ತಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ಮಾಡುತ್ತಿದ್ದಾರೋ? ಮಂತ್ರಿಗಳು ಮಾಡುತ್ತಿದ್ದಾರೋ ಗೊತ್ತಿಲ್ಲ. ಇಂತಹ ಪ್ರಕರಣಗಳಲ್ಲಿ ಗೃಹ ಸಚಿವರು ಹೇಳಿಕೆ ನೀಡುವುದು ಸಹಜ. ಪೊಲೀಸರಿಗೆ ತನಿಖೆ ನಡೆಸಲು ಮುಕ್ತ ಅವಕಾಶ ನೀಡಬೇಕು. ಅವರಿಗೆ ಏನಾದರೂ ಸರಿ ಇಲ್ಲ ಎಂದರೆ ಅವರಿಗೆ ಹೇಳಬೇಕು. ಆದರೆ, ಮಂತ್ರಿಗಳು ಅನವಶ್ಯಕ ಹೇಳಿಕೆ ನೀಡುವುದು ಸರಿಯಲ್ಲ ಎಂದು ಶಿವಕುಮಾರ್ ಇದೇ ವೇಳೆ ಆಕ್ಷೇಪಿಸಿದರು.

ನ್ಯಾಯ ಒದಗಿಸಬೇಕು: ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯ ನಾಯಕರು. ನನ್ನಷ್ಟೇ ಅನುಭವ ಅವರಿಗಿದೆ. ಪ್ರಮುಖ ಜವಾಬ್ದಾರಿ ಪಡೆಯುವ ಅರ್ಹತೆ ಅವರಿಗಿದೆ. ಈ ವಿಚಾರವಾಗಿ ನಾನು ಹೈಕಮಾಂಡ್ ಗಮನಕ್ಕೆ ತರುತ್ತೇನೆ. ಮೊನ್ನೆ ದಿಲ್ಲಿಗೆ ಹೋದಾಗ ಕೇವಲ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ಮಾಡಿದೆವು. ಅವರಿಗೆ ಅನ್ಯಾಯ ಆಗಿದೆ, ಇಲ್ಲ ಎಂದು ಹೇಳುವುದಿಲ್ಲ. ಅವರಿಗೆ ನ್ಯಾಯ ಒದಗಿಸಿಕೊಡಲಾಗುವುದು. ಈ ಬಾರಿ ನಮ್ಮ ರಾಜ್ಯಕ್ಕೆ ಹೈಕಮಾಂಡ್ ಉತ್ತಮ ಪ್ರಾತಿನಿಧ್ಯ ನೀಡಿದೆ. ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಎಚ್.ಕೆ.ಪಾಟೀಲರಿಗೆ ಜವಾಬ್ದಾರಿ ನೀಡಿದೆ ಎಂದರು.

ಸಿಎಂ ಅಸಹಾಯಕರು: ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿಚಾರದಲ್ಲಿ ಮುಖ್ಯಮಂತ್ರಿ ಅಸಹಾಯಕರಾಗಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರು ಮಾತನಾಡುವ ಧ್ವನಿ ಕಳೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸಂಸದರು ಸಿಎಂಗೆ ಶಕ್ತಿ ತುಂಬುತ್ತಿಲ್ಲ. ಮಂತ್ರಿಗಳು ಅವರದೇ ಆದ ವೈಯಕ್ತಿಕ ಅಜೆಂಡಾ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. 25 ಸಂಸದರನ್ನು ಇಟ್ಟುಕೊಂಡು ನೆರೆ ಪರಿಹಾರ, ಜಿಎಸ್ಟಿ ಬಾಕಿ, ವಿವಿಧ ಯೋಜನೆಗಳ ವಿಚಾರದಲ್ಲಿ ಒಂದು ಗುಡುಗು ಗುಡುಗಿದರೆ ಎಲ್ಲ ಕೆಲಸ ಆಗುತ್ತದೆ. ಆದರೆ, ಭವಿಷ್ಯದಲ್ಲಿ ತಮ್ಮ ಕುರ್ಚಿಗೆ ಎಲ್ಲಿ ತೊಂದರೆಯಾಗುತ್ತದೆಯೋ ಎಂದು ಯಾರೂ ಮಾತನಾಡುತ್ತಿಲ್ಲ. ರಾಜ್ಯದ ಮತದಾರರು ನಮ್ಮ ರಾಜ್ಯಕ್ಕೆ ನಿಮ್ಮ ಸಂಸದರ ಕೊಡುಗೆ ಏನು ಎಂದು ಪ್ರಶ್ನೆ ಮಾಡಬೇಕು ಎಂದು ಅವರು ಸಲಹೆ ಮಾಡಿದರು.

ವೈಫಲ್ಯ ಚರ್ಚೆ: ನೆರೆ ವಿಚಾರ, ಡಿ.ಜೆ.ಹಳ್ಳಿ ಘಟನೆ, ಕೊರೋನ ನಿರ್ವಹಣೆ ವೈಫಲ್ಯ, ಭ್ರಷ್ಟಾಚಾರ, ಆಡಳಿತ ಕುಸಿತ, ಮಂತ್ರಿಗಳ ಸಮನ್ವಯತೆ ಕೊರತೆ, ಯಾರದ್ದೋ ಇಲಾಖೆಯನ್ನು ಇನ್ಯಾರೋ ನಡೆಸುತ್ತಿದ್ದಾರೆ. ಕೊರೋನ ವಿಚಾರದಲ್ಲಿ ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಅದಾದ ಮೇಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಅದಾದ ಮೇಲೆ ಏಳು ಜನ ಮಂತ್ರಿಗಳು ಬಂದರು. ಈ ಸಮಯದಲ್ಲೇ ಪೊಲೀಸ್ ಆಯುಕ್ತರು, ಕಾರ್ಮಿಕ ಆಯುಕ್ತರು ಬದಲಾದರು. ಇವೆಲ್ಲವೂ ಸರಕಾರದ ಆಡಳಿತ ವೈಫಲ್ಯದ ಸಂಕೇತವಾಗಿದೆ. ಮಂತ್ರಿಗಳನ್ನು ಬದಲಿಸಲಾಗದೆ, ಅಧಿಕಾರಿಗಳನ್ನು ಬದಲಾಯಿಸಿದರು. ಈ ಎಲ್ಲ ವಿಚಾರದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.

ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರದ ಮಂತ್ರಿಗಳ ಭೇಟಿ ಸಂತೋಷದ ವಿಚಾರ. ಒಳ್ಳೆ ಕೆಲಸ ಮಾಡಲಿ. ನಾವು ಶುಭ ಹಾರೈಸಿ, ಅವರಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನನ್ನ ಅವಧಿಯಲ್ಲಿ ಡಿಪಿಆರ್ ಸಲ್ಲಿಕೆ ಮಾಡಿದ್ದೆವು. ಎರಡೂ ಕಡೆ ಅವರದ್ದೇ ಸರಕಾರ ಇದೆ. 5 ನಿಮಿಷದಲ್ಲಿ ಅನುಮತಿ ಪಡೆಯಬಹುದು. ಆದಷ್ಟು ಬೇಗ ಇದಕ್ಕೆ ಅನುಮತಿ ಪಡೆಯಲಿ'

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X