Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶಾದ್ಯಂತ ಎಲ್ಲ ಜಿಲ್ಲೆಗಳಿಗೂ ಜನೌಷಧಿ...

ದೇಶಾದ್ಯಂತ ಎಲ್ಲ ಜಿಲ್ಲೆಗಳಿಗೂ ಜನೌಷಧಿ ಕೇಂದ್ರಗಳ ವಿಸ್ತರಣೆ: ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ18 Sept 2020 10:11 PM IST
share
ದೇಶಾದ್ಯಂತ ಎಲ್ಲ ಜಿಲ್ಲೆಗಳಿಗೂ ಜನೌಷಧಿ ಕೇಂದ್ರಗಳ ವಿಸ್ತರಣೆ: ಡಿ.ವಿ.ಸದಾನಂದಗೌಡ

ಹೊಸದಿಲ್ಲಿ, ಸೆ.18: 2025ರ ಮಾರ್ಚ್ ವೇಳೆಗೆ ದೇಶಾದ್ಯಂತ 10,500 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯುವ ಮಹತ್ವದ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ..

ಸಾಮಾನ್ಯ ಜನರು ವಿಶೇಷವಾಗಿ ಬಡವರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಗಳನ್ನು ನೀಡುವ ಜನೌಷಧಿ ಮಳಿಗೆಗಳ ಜನಪ್ರಿಯತೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಔಷಧಗಳಿಗಾಗಿ ಮಳಿಗೆಗಳಿಗೆ ಭೇಟಿ ನೀಡುತ್ತಿದ್ದಾರೆ. ಹಾಗಾಗಿ ಈಗ ಇರುವ 6606 ಮಳಿಗೆಗಳ ಸಂಖ್ಯೆಯನ್ನು 10,500ಕ್ಕೆ ಹೆಚ್ಚಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಜನೌಷಧಿ ಕೇಂದ್ರಗಳನ್ನು ದೇಶದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು, ದೇಶದ ಪ್ರತಿಯೊಂದು ಮೂಲೆ ಮೂಲೆಗಳಲ್ಲಿರುವ ಜನರಿಗೂ ಕೈಗಟಕುವ ದರದಲ್ಲಿ ಔಷಧ ಲಭ್ಯವಾಗುವಂತೆ ಮಾಡಲಾಗುವುದು ಎಂದು ಸದಾನಂದಗೌಡ ತಿಳಿಸಿದ್ದಾರೆ.

ಕಳೆದ ಮಾರ್ಚ್ ನಿಂದ ಜೂನ್‍ವರೆಗೆ ಪ್ರಧಾನಮಂತ್ರಿ ಭಾರತೀಯ ಜನೌಷಧ ಪರಿಯೋಜನ(ಪಿಎಂಬಿಜೆಪಿ) ಕಚ್ಚಾ ಸಾಮಗ್ರಿ ಪೂರೈಕೆ, ಎಪಿಐ ಕೊರತೆ ಸೇರಿ ಹಲವು ಸವಾಲುಗಳನ್ನು ಎದುರಿಸಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಾದೇಶಿಕ ಮತ್ತು ಕೇಂದ್ರ ಗೋದಾಮುಗಳಿಂದ ಜನೌಷಧಿ ಕೇಂದ್ರಗಳಿಗೆ ಔಷಧಗಳ ಪೂರೈಕೆಗೆ ಸಾಗಾಣೆ ಸಮಸ್ಯೆಯೂ ಉಂಟಾಗಿತ್ತು. ಇದೆಲ್ಲದರ ನಡುವೆಯೂ ಸಕಾಲದಲ್ಲಿ ಗುಣಮಟ್ಟದ ಔಷಧಗಳು ಪೂರೈಕೆಯಾಗುವಂತೆ ಮಾಡಲು ಪೂರೈಕೆ ಸರಣಿ ಬಲವರ್ಧನೆ ಮತ್ತು ಸಾರಿಗೆ ಸೌಕರ್ಯಗಳಿಗಾಗಿ ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಎಲ್ಲ ಮಳಿಗೆಗಳಲ್ಲಿ ಔಷಧ ದಾಸ್ತಾನು ಕೊರತೆ ಉಂಟಾಗದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸದಾನಂದಗೌಡ ತಿಳಿಸಿದ್ದಾರೆ.

ಪ್ರಸ್ತುತ ನಾಲ್ಕು ಜನೌಷಧಿ ಗೋದಾಮುಗಳು ಬೆಂಗಳೂರು, ಗುರುಗ್ರಾಮ, ಚೆನ್ನೈ ಮತ್ತು ಗುವಾಹತಿಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದೀಗ ಮತ್ತೆ ಎರಡು ಗೋದಾಮುಗಳನ್ನು ಪಶ್ಚಿಮ ಮತ್ತು ಕೇಂದ್ರ ಭಾರತದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಜೊತೆಗೆ ಪೂರೈಕೆ ಸರಣಿ ವ್ಯವಸ್ಥೆಯನ್ನು ಬಲವರ್ಧನೆಗೊಳಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿತರಣೆದಾರರ ನೇಮಕಾತಿಗೂ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಭಾರತೀಯ ಜನೌಷಧ ಪರಿಯೋಜನ, ಅಡಿ 2020-21ರಿಂದ 2024-25ರ ಅವಧಿಗೆ 490 ಕೋಟಿ ರೂಪಾಯಿ ಬಜೆಟ್ ಬೆಂಬಲಕ್ಕೆ ಅನುಮೋದನೆ ನೀಡಲಾಗಿದೆ. ಕೋವಿಡ್ ಲಾಕ್ ಡೌನ್ ನಡುವೆಯೂ ಜನೌಷಧಿ ಕೇಂದ್ರಗಳು 2020-21ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಒಟ್ಟಾರೆ 146.59 ಕೋಟಿ ರೂ. ದಾಖಲೆಯ ವಹಿವಾಟು ನಡೆಸಿವೆ ಎಂದು ಅವರು ವಿವರಿಸಿದ್ದಾರೆ.

2019-20ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಕೇವಲ 75.48 ಕೋಟಿ ರೂ. ವಹಿವಾಟು ನಡೆಸಿದ್ದವು. ಪ್ರಸಕ್ತ ಸಾಲಿನ ಜುಲೈನಿಂದ ಸೆಪ್ಟೆಂಬರ್ ವರೆಗೆ(ಸೆಪ್ಟೆಂಬರ್ 15ರ ವರೆಗೆ) ಈ ಮಳಿಗೆಗಳು 109.43 ಕೋಟಿ ರೂ. ಮೌಲ್ಯದ ಔಷಧಗಳನ್ನು ಮಾರಾಟ ಮಾಡಿವೆ. ಇದರಿಂದಾಗಿ ಸೆ.15ರವರೆಗೆ ಒಟ್ಟು ಮಾರಾಟ ಪ್ರಮಾಣ 256.02 ಕೋಟಿ ರೂ.ಗಳಿಗೆ ಏರಿದೆ ಎಂದು ಸದಾನಂದಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X