Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಶಾ ಕಾರ್ಯಕರ್ತೆಯರ ಮಾತಿಗೆ ತಪ್ಪಿದ...

ಆಶಾ ಕಾರ್ಯಕರ್ತೆಯರ ಮಾತಿಗೆ ತಪ್ಪಿದ ಸರ್ಕಾರದ ವಿರುದ್ಧ ಹೋರಾಟ: ಎಐಯುಟಿಯುಸಿ

ವಾರ್ತಾಭಾರತಿವಾರ್ತಾಭಾರತಿ18 Sept 2020 10:50 PM IST
share
ಆಶಾ ಕಾರ್ಯಕರ್ತೆಯರ ಮಾತಿಗೆ ತಪ್ಪಿದ ಸರ್ಕಾರದ ವಿರುದ್ಧ ಹೋರಾಟ: ಎಐಯುಟಿಯುಸಿ

ಮೈಸೂರು,ಸೆ.18: ರಾಜ್ಯದ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವುದಾಗಿ ಹೇಳಿ ಎರಡು ತಿಂಗಳ ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರ ತನ್ನ ಭರವಸೆ ಈಡೇರಿಸುವಲ್ಲಿ ವಿಫಗೊಂಡಿದ್ದು, ಕೊಟ್ಟ ಮಾತಿಗೆ ತಪ್ಪಿದ ಸರ್ಕಾರದ ವಿರುದ್ಧ ಮತ್ತೆ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯರ್ತೆಯರ ಸಂಘದ ನೇತೃತ್ವದಲ್ಲಿ ಹೋರಾಟಕ್ಕೆ ಇಳಿಯುವುದಾಗಿ ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯೆ ಸಂಧ್ಯಾ ಪಿ.ಎಸ್.ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೋನಾ ವಾರಿಯರ್ಸ್ ಎಂದೇ ಹೆಸರಾದ ರಾಜ್ಯದ 42,000 ಆಶಾ ಕಾರ್ಯಕರ್ತೆಯರು ಎರಡು ತಿಂಗಳ ಹಿಂದೆ 20 ದಿನಗಳ ನಿರಂತರ ಹೋರಾಟ ಮಾಡಿದ ಸಂದರ್ಭದಲ್ಲಿ ವೇತನ ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿತ್ತು. ಇದೀಗ ಎರಡು ತಿಂಗಳು ತಾಳ್ಮೆ ಕಾಯ್ದುಕೊಂಡು ಕೊರೋನ ವಿರುದ್ಧದ ಹೋರಾಟದಲ್ಲಿ ಕರ್ತವ್ಯ ನಿರತರಾದ ಆಶಾಗಳಿಗೆ ಕೊಟ್ಟ ಮಾತಿಗೆ ರಾಜ್ಯ ಸರ್ಕಾರ ತಪ್ಪಿದೆ ಎಂದು ಕಿಡಿಕಾರಿದರು. 

ರಾಜ್ಯದಾದ್ಯಂತ ಎಲ್ಲಾ ಶಾಸಕರು, ಸಂಸದರು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿ ಆಶಾ ಪರ ಧ್ವನಿಯೆತ್ತುವಂತೆ ಆಗ್ರಹಿಸಲಾಗುವುದು. ಸೆ.21ರಿಂದ 10 ದಿನಗಳ ಅಧಿವೇಶನ ನಡೆಯುವ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ವಿವಿಧ ರೀತಿಯ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ 4,000 ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ, ಕೇಂದ್ರ ಸರ್ಕಾರದಿಂದ ಚಟುವಟಿಕೆಗಳನ್ನು ಆಧರಿಸಿ ನೀಡುವ ಪ್ರೋತ್ಸಾಹಧನ ಸರಾಸರಿ 6,000 ರೂ. ಎರಡೂ ಸೇರಿ ಸುಮಾರು 10,000 ಪಡೆಯುವಂತೆ ಯೋಜನೆ ಇದೆ. ಇದಕ್ಕೆ ಸರ್ಕಾರದ ಅನುದಾನವೂ ಇದೆ. ಆದರೆ ಅದು ಇದುವರೆಗೂ ಸರಿಯಾಗಿ ತಲುಪುತ್ತಿಲ್ಲ. ಅಂತೆಯೇ ಇದಕ್ಕೆ ಇನ್ನೊಂದಿಷ್ಟು ಹಣವನ್ನು ಸೇರಿಸಿ 12,000 ರೂ. ನಿಗದಿಯಾಗಿ ಕೊಡುವುದು ಸರ್ಕಾರಕ್ಕೆ ಕಷ್ಟವಲ್ಲ ಎಂದರು.

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಇಡೀ ರಾಜ್ಯದ ಜನತೆ ಸ್ಪಂದಿಸಿದೆ. ಆ.29ರಂದು ಸಿಎಂ ಕೂಡ ಸರ್ಕಾರ ಆಶಾ ಜೊತೆಗಿದೆ. ಶೀಘ್ರ ವೇತನ ಹೆಚ್ಚಿಸುವುದಾಗಿ ಭರವಸೆ ನೀಡಿ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಬೆಂಗಳೂರಿನಲ್ಲಿ ಸ್ಥಳಕ್ಕೆ ಆಗಮಿಸಿದ ಆರೋಗ್ಯ ಸಚಿವ ಶ್ರೀರಾಮುಲು ಅವರು 2-3 ದಿನಗಳಲ್ಲಿ ಬೇಡಿಕೆಗಳನ್ನು ಈಡೇರಿಸುವುದಾಗಿ ವಚನವಿತ್ತರು. ನಂತರ ಆಶಾ ಕಾರ್ಯಕರ್ತೆಯರು ತಮ್ಮ 20 ದಿನಗಳ ಹೋರಾಟವನ್ನು ತಕ್ಷಣ ಸ್ಥಗಿತಗೊಳಿಸಿದರು. ಆದರೆ ಮುಷ್ಕರ ಸ್ಥಗಿತಗೊಳಿಸಿ 47 ದಿನ ಕಳೆದರೂ ಸರ್ಕಾರದ ಕಡೆಯಿಂದ ಯಾವ ಅಧಿಕೃತ ಘೋಷಣೆಯೂ ಬಂದಿಲ್ಲ. ಆದ್ದರಿಂದಲೇ ಈಗ ಅನಿವಾರ್ಯವಾಗಿ ಆಶಾ ಕಾರ್ಯಕರ್ತೆಯರು ಮತ್ತೊಮ್ಮೆ ಹೋರಾಟಕ್ಕಿಳಿಯುವುದು ಅನಿವಾರ್ಯವಾಗಿದೆ. ಮಾತಿನಂತೆ ನಡೆಯದ ಸರ್ಕಾರದ ಅಲಕ್ಷ ಧೋರಣೆ ವಿರುದ್ಧ ಬಲಿಷ್ಠ ಹೋರಾಟವನ್ನು ಕೈಗೊಳ್ಳಬೇಕಾಗಿ ಬಂದಿದೆ ಎಂದರು.

ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಸಂಬಳ 12,000 ರೂ, ಕೂಡಲೇ ಘೋಷಿಸಬೇಕು. ಬಾಕಿ ಇರುವ ಪ್ರೋತ್ಸಾಹಧನ ಆಶಾಗೆ ಒದಗಿಸಲು ಕ್ರಮಕೈಗೊಳ್ಳಬೇಕು. ಈಗಾಗಲೇ ಘೋಷಿಸಿದ 3000 ರೂ. ಕೋವಿಡ್ ಪ್ರೋತ್ಸಾಹ ಧನವನ್ನು ಇನ್ನೂ ತಲುಪದಿರುವ ಆಶಾಗಳಿಗೆ ಪಾವತಿಯಾಗುವಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ, ನಗರ ಕಾರ್ಯದರ್ಶಿ ಸುನೀತ, ಜಿಲ್ಲಾಧ್ಯಕ್ಷೆ ಶುಭಮಂಗಳ. ಮಹೇಶ್ವರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X