Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಸರಾದಲ್ಲಿ ದುಂದು ವೆಚ್ಚ ಇಲ್ಲ: ಸಚಿವ...

ದಸರಾದಲ್ಲಿ ದುಂದು ವೆಚ್ಚ ಇಲ್ಲ: ಸಚಿವ ಎಸ್.ಟಿ.ಸೋಮಾಶೇಖರ್

ವಾರ್ತಾಭಾರತಿವಾರ್ತಾಭಾರತಿ18 Sept 2020 11:14 PM IST
share
ದಸರಾದಲ್ಲಿ ದುಂದು ವೆಚ್ಚ ಇಲ್ಲ: ಸಚಿವ ಎಸ್.ಟಿ.ಸೋಮಾಶೇಖರ್

ಮೈಸೂರು,ಸೆ.18: ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿಗಳ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದುಂದು ವೆಚ್ಚದ ಪ್ರಶ್ನೆಯೇ ಇಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. 

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಹತ್ತು ದಿನದ ಕಾರ್ಯಕ್ರಮವಾಗಿದೆ. ಹಾಗಾಗಿ ಖರ್ಚು ವೆಚ್ಚಗಳು ಇರುತ್ತವೆ. ಇಷ್ಟಾದರೂ ಸಭೆಯಲ್ಲಿ ಸರಳ ಆಚರಣೆಗೆ ಒತ್ತು ನೀಡಿ ತೀರ್ಮಾನ ಕೈಗೊಳ್ಳುತ್ತೇವೆ. 5 ಕೋಟಿ ರೂ. ವನ್ನು ಮೂಡಾದವರು ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ ದಸರಾ ಅನುದಾನದಲ್ಲೇ 8 ಕೋಟಿ ರೂ. ಅನುದಾನ ಬಾಕಿ ಇದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಇಂದು ಸಂಜೆ ದಸರಾ ಕಮಿಟಿಗಳಿಗೆ ಸಂಬಂಧಪಟ್ಟಂತೆ ಸಭೆ ಕರೆಯಲಾಗಿದೆ. ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಸೇರಿದಂತೆ ಆಹ್ವಾನಿತರಾಗುತ್ತಿರುವ ಆಯಾ ಇಲಾಖೆಯ ತಲಾ ಒಬ್ಬರು ಉದ್ಘಾಟಕರ ಹೆಸರನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು. 

ಮೈಸೂರು ನಗರಕ್ಕೆ ಎಲ್ಇಡಿ ಬೀದಿ ದೀಪ ಅಳವಡಿಸುವ ಸಂಬಂಧ ಬಹುವರ್ಷಗಳ ಬೇಡಿಕೆ ಇದೆ ಎಂದು ಶಾಸಕರಾದ ಎಲ್.ನಾಗೇಂದ್ರ, ಎಸ್.ಎ. ರಾಮದಾಸ್, ಸಂಸದರಾದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ನನ್ನ ಬಳಿ ಚರ್ಚೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಂಪುಟದಲ್ಲಿ ಒಪ್ಪಿಗೆ ಪಡೆದು ಅನುಮೋದನೆ ಕೊಡಿಸಿದ್ದೇನೆ. ಇನ್ನು ಮುಂದೆ ಸಹ ಮೈಸೂರು ಅಭಿವೃದ್ಧಿಗೆ ಬೇಕಾದ ಕೆಲಸ ಹಾಗೂ ಸಹಕಾರವನ್ನು ಖಂಡಿತವಾಗಿ ಕೊಡುತ್ತೇನೆ ಎಂದು ಸಚಿವರು ತಿಳಿಸಿದರು.

39 ಸಾವಿರ ಕೋಟಿ ರೂ. ಸಾಲ: 15,300 ಕೋಟಿ ರೂ.ಕೊಡಲು ಈಗಾಗಲೇ ಚಾಲನೆ ಕೊಟ್ಟಿದ್ದೇವೆ. ಇದರಲ್ಲಿ ಈಗಾಗಲೇ 12 ಲಕ್ಷ ರೈತರಿಗೆ 7 ಸಾವಿರ ಕೋಟಿಗೂ ಅಧಿಕ ಸಾಲವನ್ನು ನೀಡಿದ್ದೇವೆ. ಇನ್ನು ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ 39 ಸಾವಿರ ಕೋಟಿ ರೂಪಾಯಿ ಸಾಲವನ್ನು ರೈತರು, ಅತಿ ಸಣ್ಣ ಉದ್ಯಮಿಗಳು ಸೇರಿದಂತೆ ಹಲವು ಕ್ಷೇತ್ರಗಳಿಗೆ ನೀಡಲಾಗುತ್ತಿದ್ದು, 4 ವಿಭಾಗಳ ಮೂಲಕ ಸಾಲ ನೀಡಲಾಗುತ್ತದೆ. ಈಗಾಗಲೇ ಬೆಂಗಳೂರು ವಿಭಾಗದಲ್ಲಿ ಮೊನ್ನೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚಾಲನೆ ನೀಡಲಾಗಿದ್ದು, ಉಳಿದಂತೆ ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳಲ್ಲಿ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದರು. 

ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ಪರಮಾಧಿಕಾರ ಮುಖ್ಯಮಂತ್ರಿಗಳದ್ದು, ಹೀಗಾಗಿ ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವರು ತಿಳಿಸಿದರು. 

ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ 3.10 ಕೋಟಿ ರೂ. ವೆಚ್ಚದ ಕಾಂಕ್ರೀಟ್ ಚರಂಡಿ ರಸ್ತೆ ಪುನರ್ ನಿರ್ಮಾಣ ಹಾಗೂ ಡಾಂಬರೀಕರಣ ಕಾಮಗಾರಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಎಲ್. ನಾಗೇಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X