Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಾದ್ಯಂತ ಭಾರಿ ಮಳೆ; ಹಲವೆಡೆ ರೆಡ್...

ರಾಜ್ಯಾದ್ಯಂತ ಭಾರಿ ಮಳೆ; ಹಲವೆಡೆ ರೆಡ್ ಅಲರ್ಟ್

ವಾರ್ತಾಭಾರತಿವಾರ್ತಾಭಾರತಿ20 Sept 2020 5:38 PM IST
share
ರಾಜ್ಯಾದ್ಯಂತ ಭಾರಿ ಮಳೆ; ಹಲವೆಡೆ ರೆಡ್ ಅಲರ್ಟ್

ಬೆಂಗಳೂರು, ಸೆ. 20: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆ ಹಲವು ಜೆಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ರಾಜ್ಯಾದ್ಯಂತ ಮಳೆಯಾಗುತ್ತಿರುವುದರಿಂದ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೆ.22ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆ.22ರ ವರೆಗೆ ರಾಜ್ಯದ ಬಹುತೇಕ ಕಡೆ ಮಳೆಯ ಅಬ್ಬರ ಮುಂದುವರೆಯಲಿದೆ.

ಬೆಂಗಳೂರು, ಮೈಸೂರಿನಲ್ಲಿಯೂ ಮಳೆಯ ಅಬ್ಬರ ಹೆಚ್ಚಾಗಿದೆ. ಉತ್ತರ ಕರ್ನಾಟಕದಲ್ಲೂ ಶನಿವಾರದಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಉಡುಪಿಯಲ್ಲಿ ನಾಲ್ಕು ದಶಕದಲ್ಲೇ ಅತಿಹೆಚ್ಚು ಮಳೆ ದಾಖಲಾಗಿದೆ. ಉಡುಪಿಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಉಡುಪಿಯ ಮುಖ್ಯ ರಸ್ತೆಗಳು ನೀರಿನಲ್ಲಿ ಮುಳುಗಿದ್ದು, ಜಿಲ್ಲೆಯ ಇತಿಹಾಸದಲ್ಲಿಯೇ ಈ ಬಾರಿ ಅತಿಹೆಚ್ಚು ಮಳೆಯಾಗಿದೆ.

ಪುತ್ತಿಗೆ ಮಠ ಗುಂಡಿಬೈಲ್-ಕಲ್ಸಂಕ ರಸ್ತೆ, ಬೈಲ್ಕೆರೆ ಮಠದಬೆಟ್ಟು, ಉಡುಪಿ- ಮಣಿಪಾಲ್ ಮುಖ್ಯರಸ್ತೆಗಳು ನೀರಿನಿಂದ ಮುಳುಗಿವೆ. ಬಡಗುಪೇಟೆಯ ಅನೇಕ ಅಂಗಡಿಗಳು ಮತ್ತು ಮನೆಗಳಿಗೆ ನೀರು ನುಗ್ಗಿದೆ. ಬೈಲುಕೆರೆ , ಕುಂಜಿಬೆಟ್ಟು ಪ್ರದೇಶವೂ ಜಲಾವೃತವಾಗಿದೆ. ಉಡುಪಿ ಶ್ರೀಕೃಷ್ಣ ಮಠದ ಸಂದರ್ಶಕರ ಪಾರ್ಕಿಂಗ್ ಪ್ರದೇಶವು ನೀರಿನಲ್ಲಿ ಮುಳುಗಿದೆ. ಕಲ್ಸಂಕ ಬಳಿಯ ಇಂದ್ರಾಣಿ ನದಿಯ ದಡದಲ್ಲಿರುವ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿವೆ.

ಶನಿವಾರ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮಲ್ಪೆ ಸಮುದ್ರದಲ್ಲಿ ಮೂರು ಬೋಟ್‍ಗಳು ಮುಳುಗಡೆಯಾಗಿದೆ.
ಸ್ವರ್ಣ ನದಿ ಉಕ್ಕಿ ಹರಿಯುತ್ತಿದ್ದು, ಹಿರಿಯಡ್ಕದಲ್ಲಿ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನಗಳ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ.

ಮಳೆಯಿಂದ ಉಡುಪಿ ಶ್ರೀಕೃಷ್ಣ ಮಠದ ಬಳಿ ಇರುವ ವಾಹನ ನಿಲುಗಡೆ ಸ್ಥಳವು ಮುಳುಗಡೆಯಾಗಿದೆ. ಇಂದ್ರಾಣಿ ನದಿಯ ಅಕ್ಕಪಕ್ಕದ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ತಾಲೂಕಿನ ನೀಲಾವರ, ಮಟಪಾಡಿ ಗ್ರಾಮಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ತಗ್ಗುಪ್ರದೇಶದ ಜನಸಂಪರ್ಕವನ್ನು ಕಳೆದುಕೊಂಡಿದ್ದಾರೆ. ಕೊಡಗಿನಲ್ಲೂ ರೆಡ್ ಅಲರ್ಟ್: ಕೊಡಗು ಜಿಲ್ಲೆಯಾದ್ಯಂತ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಉಡುಪಿ ಮತ್ತು ಕೊಡಗಿನಲ್ಲಿ ಸೆ.22ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಅಲ್ಲಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯೂ ಸುರಿಯುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಮಧ್ಯಾಹ್ನದಿಂದಲೇ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದೆ.

ಉತ್ತರ ಕರ್ನಾಟಕದಲ್ಲೂ ಮಳೆ ಹೆಚ್ಚಾಗಿದ್ದು, ರವಿವಾರದಂದು ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯದಲ್ಲಿ ಸೆ. 23ರವರೆಗೆ ಮಳೆ ಮುಂದುವರಿಯಲಿದೆ.

ಚಿಕ್ಕಮಗಳೂರಿನಲ್ಲಿ ಮಳೆ ಹೆಚ್ಚಾಗಿದ್ದು, ಶೃಂಗೇರಿಯ ಸುತ್ತಮುತ್ತ ಹಾಗೂ ಕುದುರೆಮುಖ ಭಾಗದಲ್ಲಿ ಸತತ ಮಳೆಯಾಗುತ್ತಿದ್ದು ತುಂಗಾ ನದಿಯ ಪ್ರವಾಹದ ನೀರು ಬೈಪಾಸ್ ರಸ್ತೆಗೆ ನುಗ್ಗಿದೆ. ಕೆವಿಆರ್ ರಸ್ತೆಗೆ ನೀರು ನುಗ್ಗಿದ್ದು, ಮಳೆ ಹೆಚ್ಚಾಗುತ್ತಿರುವುದರಿಂದ ತುಂಗಾ, ಭದ್ರಾ ಮತ್ತು ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿವೆ. ಅಲ್ಲದೇ ಇನ್ನು ಮೂರು ದಿನ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆ....
ಉಡುಪಿಯಲ್ಲಿ ಸರಾಸರಿ 221 ಮಿ. ಮೀ. ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ 316 ಮಿ.ಮೀ, ಸರಾಸರಿ 216 ಮಿ.ಮೀ, ಚಿಕ್ಕಮಗಳೂರು ಜಿಲ್ಲೆಯಲ್ಲಿ 258 ಮಿ.ಮೀ, ಶಿವಮೊಗ್ಗದಲ್ಲಿ 82 ಮಿ.ಮೀ, ಕುಂದಾಪುರದಲ್ಲಿ 222 ಮಿ. ಮೀ. ನಷ್ಟು ಗರಿಷ್ಠ ಪ್ರಮಾಣದ ಮಳೆಯಾದ ವರದಿಯಾಗಿದೆ.

'ಬೆಂಗಳೂರಿನಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಆಡಳಿತಾಧಿಕಾರಿ ಗೌರವ ಗುಪ್ತ ಅವರಿಗೆ ಕರೆ ಮಾಡಿ, ರಾಜಕಾಲುವೆ, ತಗ್ಗು ಪ್ರದೇಶಗಳಲ್ಲಿ ವಿಶೇಷ ಗಮನಹರಿಸುವಂತೆ ಸೂಚನೆ ನೀಡಿದ್ದು, ಎಲ್ಲ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ಆದೇಶಿಸಿದ್ದಾರೆ'

share
ವಾರ್ತಾಭಾರತಿ
ವಾರ್ತಾಭಾರತಿ
Next Story
X