Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯರಿಂದ ಸ್ವಾಭಿಮಾನದ ಪಾಠ...

ಸಿದ್ದರಾಮಯ್ಯರಿಂದ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ: ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ20 Sept 2020 5:49 PM IST
share
ಸಿದ್ದರಾಮಯ್ಯರಿಂದ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ಸೆ. 20: `ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್‍ಗೆ ಜಿಗಿದ ಸಿದ್ದರಾಮಯ್ಯ ಅವರು `ಜೆಡಿಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ ಬೆಕ್ಕಿನ ಮುಖವಾಡದಂತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

`ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಉದ್ಗರಿಸಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ' ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

`ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ' ಎಂದು ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ತಿರುಗೇಟು ನೀಡಿದ್ದಾರೆ.

`ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನರ ಕಷ್ಟಕಾರ್ಪಣ್ಯಗಳು, ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು. ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು?' ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

`ತನುವಿನೊಳು ಕಪಟ, ಮನದೊಳು ಮರ್ಕಟ, ಆಚಾರ ಲಿಂಗವ ಭಂಗಗೊಳಿಸಿ, ಸಂಗ ಕೇಳಿಯ ಮನದ, ಮುಂದಣ ಆಸೆಯ ಮತಿಗೇಡಿ, ನೀನು ಶರಣನೆಂದು ಕೊಂಡೊಡೆ, ಲಿಂಗ-ಜಂಗಮ  ಕೂಡಲ ಸಂಗನು ಮುನಿದು, ತಲೆ ಹೋಳಾದೀತು' ಎಂದು ಶರಣರ ವಚನವೊಂದನ್ನು ಉಲ್ಲೇಖಿಸಿರುವ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದ್ದಾರೆ.

`ಅಧಿಕಾರದ ಆಸೆಗಾಗಿ ಪಕ್ಷಾಂತರ ಮಾಡಿ ಸಮಾಜವಾದದ ಸೋಗನ್ನು ಕಳಚಿಕೊಂಡ ಸಿದ್ದರಾಮಯ್ಯನವರು ಹುಸಿ ಸ್ವಾಭಿಮಾನದ ಕಾಗೆ ಬಂಗಾರ. ಸ್ವಾರ್ಥ ರಾಜಕಾರಣಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸನ್ಯಾಸಿ ಆದವರಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯೂ ಇಲ್ಲ. ತಾವು ಬೆಳೆದು ಬಂದ ಪಕ್ಷಕ್ಕೆ ದ್ರೋಹ ಬಗೆದ, ಹತ್ತಿದ ಏಣಿಯನ್ನು ಒದೆಯುವ ಜಾಯಮಾನದ ಸಿದ್ದರಾಮಯ್ಯ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ'
-ಸಾ.ರಾ.ಮಹೇಶ್, ಮಾಜಿ ಸಚಿವ

ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ.

ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ.
2/7

— H D Kumaraswamy (@hd_kumaraswamy) September 20, 2020

ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ.
4/7

— H D Kumaraswamy (@hd_kumaraswamy) September 20, 2020

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು?
6/7

— H D Kumaraswamy (@hd_kumaraswamy) September 20, 2020

ತನುವಿನೊಳು ಕಪಟ
ಮನದೊಳು ಮರ್ಕಟ
ಆಚಾರ ಲಿಂಗವ ಭಂಗಗೊಳಿಸಿ
ಸಂಗ ಕೇಳಿಯ ಮನದ
ಮುಂದಣ ಆಸೆಯ ಮತಿಗೇಡಿ
ನೀನು ಶರಣನೆಂದು ಕೊಂಡೊಡೆ
ಲಿಂಗ - ಜಂಗಮ ಕೂಡಲ ಸಂಗನು ಮುನಿದು
ತಲೆ ಹೋಳಾದೀತು.

7/7

— H D Kumaraswamy (@hd_kumaraswamy) September 20, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X